Homeಮುಖಪುಟಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

- Advertisement -
- Advertisement -

ಕೆಲ ದಿನಗಳ ಹಿಂದೆ ಯುವತಿಯರು ಹರಿದ ಜೀನ್ಸ್‌ ತೊಡುವ ಬಗ್ಗೆ ವಿವಾದತ್ಮಕ  ಹೇಳಿಕೆ ನೀಡಿ, ತೀವ್ರ ಟೀಕೆಗೆ ಒಳಗಾಗಿ ಕ್ಷಮೆ ಕೇಳಿದ್ದ ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರತ್ ಸಿಂಗ್‌ ರಾವತ್‌, ಮತ್ತೆ ಪಡಿತರ ವಿತರಣೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ತಮ್ಮನ್ನು ತಾವು ಪೋಷಿಸಲು ಕಷ್ಟಪಡುತ್ತಿರುವ ಬಡ ಕುಟುಂಬಗಳು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳನ್ನು ವಿತರಿಸುವ ಕೇಂದ್ರ ಸರ್ಕಾರದ ಯೋಜನೆಯಿಂದ ಹೆಚ್ಚಿನ ಪಡಿತರವನ್ನು ಬಯಸಿದರೆ 20 ಮಕ್ಕಳನ್ನು ಹೆರಬೇಕಿತ್ತು ಎಂದಿದ್ದಾರೆ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್.

“ಪ್ರತಿ ಮನೆಗೆ ಐದು ಕೆಜಿ ಪಡಿತರವನ್ನು ನೀಡಲಾಯಿತು. ಒಂದು ಮನೆಯಲ್ಲಿ 10 ಜನರಿದ್ದರೆ 50 ಕೆಜಿ , 20 ಜನರಿಗೆ 100 ಕೆಜಿ ಪಡಿತರ ದೊರೆತಿದೆ. ಆದರೆ ಕೆಲವರು ಇದಕ್ಕೆ ಅಸೂಯೆ ಪಟ್ಟಿದ್ದಾರೆ. ಇಬ್ಬರೇ ಇರುವವರಿಗೆ 10 ಕೆಜಿ ಪಡಿತರ ದೊರೆತಿದೆ. ಏಕೆಂದರೆ ನೀವು ಇಬ್ಬರಿಗೆ ಮಾತ್ರ ಜನ್ಮ ನೀಡಿದಿರಾ..ಸಮಯವಿದ್ದರೂ 20 ಮಕ್ಕಳನ್ನು ಯಾಕೆ ಹೆರಲಿಲ್ಲ” ಎಂದು ರಾವತ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ಕಳೆದ ವರ್ಷ ಸಾಂಕ್ರಾಮಿಕ ರೋಗವು ಭಾರತಕ್ಕೆ ಅಪ್ಪಳಿಸಿದಾಗಿನಿಂದ ದೇಶದ ಆರ್ಥಿಕತೆ ಕುಸಿದಿದೆ. ಸಾವಿರಾರು ಕಂಪನಿಗಳು, ಉದ್ಯೋಗಗಳು ಸಂಪೂರ್ಣ ಮುಚ್ಚಿ ಹೋಗಿದೆ. ಉದ್ಯೋಗ ಅಥವಾ ಆಹಾರವಿಲ್ಲದೆ ಕೋಟಿಗಟ್ಟಲೆ ಜನ ಸಂಕಷ್ಟದಲ್ಲಿ ಬೀಳುವಂತಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಪ್ರತಿ ವ್ಯಕ್ತಿಗೆ ಐದು ಕೆಜಿ ಆಹಾರ ಧಾನ್ಯಗಳು ಮತ್ತು ಒಂದು ಕೆಜಿ ಕೆಜಿ ದ್ವಿದಳ ಧಾನ್ಯವನ್ನು  ನೀಡುವುದಾಗಿ ಘೋಷಿಸಿತ್ತು.

ಮಾರ್ಚ್ 10 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಿರತ್ ಸಿಂಗ್ ರಾವತ್, ನೈನಿತಾಲ್‌ನ ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಡಿತರ ಕುರಿತು, ಬಡವರು ಮಕ್ಕಳು ಹೆರುವ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

ಇದೇ ವೇಳೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು “200 ವರ್ಷಗಳ ಕಾಲ ನಮ್ಮನ್ನು ಗುಲಾಮರನ್ನಾಗಿ ಮಾಡಿ ಇಡೀ ಜಗತ್ತನ್ನು ಆಳಿದ ಅಮೆರಿಕವು ಹೆಣಗಾಡುತ್ತಿದೆ” ಎಂದು ತಪ್ಪು ತಪ್ಪಾಗಿ ಮಾತಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...