Homeಕರ್ನಾಟಕಅಕಾಡೆಮಿ ನೇಮಕ : ಸರ್ಕಾರದ `ಆಯ್ಕೆ' ವಿರುದ್ಧ ಶುರುವಾಗಿದೆ ರಾಜೀನಾಮೆ ಪರ್ವ!

ಅಕಾಡೆಮಿ ನೇಮಕ : ಸರ್ಕಾರದ `ಆಯ್ಕೆ’ ವಿರುದ್ಧ ಶುರುವಾಗಿದೆ ರಾಜೀನಾಮೆ ಪರ್ವ!

- Advertisement -
- Advertisement -

ವಿವಿಧ ಅಕಾಡೆಮಿಗಳಲ್ಲಿ ಅರ್ಹರಿಗೆ ಅಧ್ಯಕ್ಷ ಸ್ಥಾನ ನೀಡಿಲ್ಲ ಎಂಬ ಟೀಕೆಗಳು ಕೇಳಿಬಂದ ಬೆನ್ನಲ್ಲೇ ರಾಜೀನಾಮೆ ಪರ್ವ ಶುರುವಾಗಿದೆ. ತುಳು ಸಾಹಿತ್ಯ ಅಕಾಡೆಮಿಯ ಇಬ್ಬರು ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿಯ ಒಬ್ಬ ಸದಸ್ಯರು ರಾಜೀನಾಮೆ ನೀಡಿದ್ದಾರೆ.

ಡಾ.ವೈ.ಎನ್.ಶೆಟ್ಟಿ ಹಾಗೂ ಡಾ.ಸಾಯಿಗೀತಾ ಹೆಗ್ಡೆ ಅವರು ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿದ ಇಬ್ಬರೂ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿದ್ದಾರೆ. ಇತ್ತ ಸಾಹಿತ್ಯ ಅಕಾಡೆಮಿಯಲ್ಲೂ ಇಂತಹುದೇ ಮಾತುಗಳು ಕೇಳಿ ಬರುತ್ತಿದ್ದು, ಇನ್ನು ಕೆಲ ಸದಸ್ಯರು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಬ್ಯಾರಿ ಅಕಾಡೆಮಿಯಲ್ಲಿ 11 ಸದಸ್ಯರು ಇರಬೇಕು. ಅದರಲ್ಲಿ ಈಗಾಗಲೇ 7 ಮಂದಿಯನ್ನು ಸದಸ್ಯ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಅದರಲ್ಲಿ ನಾಲ್ವರಿಗೆ ಬ್ಯಾರಿ ಭಾಷೆ ಬರುವುದಿಲ್ಲ. ಹೀಗಿದ್ದ ಮೇಲೆ ನೇಮಕ ಮಾಡಿದ್ದು ಯಾಕೆ ಎಂಬ ಪ್ರಶ್ನೆ ಕೇಳಿ ಬಂದಿದೆ. ಇನ್ನು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಕೆಲವರು ಸದಸ್ಯರಾಗಲು ಆಸಕ್ತಿ ತೋರುತ್ತಿಲ್ಲ. ಇನ್ನೂ ಇಬ್ಬರು ಸದಸ್ಯರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯತ್ವಕ್ಕೆ ಮುನೀರ್ ಬಾವಾ ರಾಜೀನಾಮೆ ನೀಡಿದ್ದಾರೆ. ‘ಬ್ಯಾರಿ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿಲ್ಲ. ನನ್ನ ಕಾರ್ಯಕ್ಷೇತ್ರ ಬೇರೆ. ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ಅವಕಾಶ ನೀಡುವಂತೆ ಮನವಿ ಮಾಡಿ, ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ’ ಎಂದು ಹೇಳಿದ್ದಾರೆ.

ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಮಾತನಾಡಿ, ಇನ್ನೂ ಇಬ್ಬರು ಸದಸ್ಯರು ರಾಜೀನಾಮೆ ನೀಡುವುದಾಗಿ ಸಂದೇಶ ಕಳುಹಿಸಿದ್ದಾರೆ. ಅವರನ್ನು ಭೇಟಿಯಾಗಿ, ಮಾತನಾಡಿದ ನಂತರ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ. ಇನ್ನು ಈ ಬಾರಿ ಹಲವು ಅಕಾಡೆಮಿಗಳ ಆಯ್ಕೆಗೆ ಆರ್.ಎಸ್.ಎಸ್ ಸರ್ಕಾರಕ್ಕೆ ಪಟ್ಟಿ ಕಳುಹಿಸಿತ್ತು. ಪಟ್ಟಿಯಲ್ಲಿ ಒಂದೆರಡು ಬದಲಾವಣೆ ಮಾಡಿದ್ದು, ಉಳಿದೆಲ್ಲ ಹೆಸರುಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ನೇಮಕಾತಿಯಲ್ಲಿ ಅರ್ಹತೆಯಿದ್ದವರೂ, ವಿದ್ವಾಂಸರೂ ಸಹ ಇದ್ದಾರೆ. ಬಹುತೇಕ ಬಲಪಂಥೀಯ ಒಲವುಳ್ಳ ವ್ಯಕ್ತಿಗಳನ್ನೇ ಆಯ್ಕೆ ಮಾಡಲಾಗಿದೆ ಎಂದು ಸದಸ್ಯರೊಬ್ಬರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...