Homeಚಳವಳಿರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

“ನಾನು ಮೊದಲು ರೈತ, ನಂತರ ಪೊಲೀಸ್ ಅಧಿಕಾರಿ. ಇಂದು ನನಗೆ ಯಾವುದೇ ಸ್ಥಾನ ಸಿಕ್ಕಿದ್ದರೂ, ಅದಕ್ಕೆ ಕಾರಣ ನನ್ನ ತಂದೆ ಹೊಲಗಳಲ್ಲಿ ಕೃಷಿಕರಾಗಿ ಕೆಲಸ ಮಾಡಿದ್ದು"

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಿರುವ ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಚಂಡೀಗಢದ ಕಾರಾಗೃಹಗಳ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಆಗಿ ನೇಮಕಗೊಂಡಿದ್ದ 56 ವರ್ಷದ ಲಖ್ವಿಂದರ್ ಸಿಂಗ್ ಜಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ರಾಜೀನಾಮೆ ಪತ್ರದಲ್ಲಿ, “ನಾನು ಮೊದಲು ರೈತ, ನಂತರ ಪೊಲೀಸ್ ಅಧಿಕಾರಿ. ಇಂದು ನನಗೆ ಯಾವುದೇ ಸ್ಥಾನ ಸಿಕ್ಕಿದ್ದರೂ, ಅದಕ್ಕೆ ಕಾರಣ ನನ್ನ ತಂದೆ ಹೊಲಗಳಲ್ಲಿ ಕೃಷಿಕರಾಗಿ ಕೆಲಸ ಮಾಡಿದ್ದು. ಕೃಷಿಯಿಂದಲೇ ಸಂಪಾದಿಸಿ ಅವರು ನನ್ನನ್ನು ವಿದ್ಯಾವಂತನಾಗಿಸಿದ್ದಾರೆ. ಆದ್ದರಿಂದ, ನನಗೆ ಸಿಕ್ಕಿರುವ ಎಲ್ಲದಕ್ಕೂ ನಾನು ಕೃಷಿಗೆ ಋಣಿಯಾಗಿದ್ದೇನೆ ”ಎಂದು 56 ವರ್ಷದ ಅಧಿಕಾರಿ ಹೇಳಿದ್ದಾರೆ.

“ನಾನು ಎಲ್ಲಾ ಫಾರ್ಮಲಿಟಿಸ್ ಪೂರ್ಣಗೊಳಿಸಿದ್ದೇನೆ. ಆದ್ದರಿಂದ, ನನ್ನ ರಾಜೀನಾಮೆಯನ್ನು ಸ್ವೀಕರಿಸುವಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಲಖ್ವಿಂದರ್ ಸಿಂಗ್ ಜಖರ್ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ ಸೂಚಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕನ ರಾಜೀನಾಮೆ

ಲಖ್ವಿಂದರ್ ಸಿಂಗ್ ಜಖರ್, 14 ಪಂಜಾಬ್ (ನಭಾ ಅಕಾಲ್) ರೆಜಿಮೆಂಟ್‌ನಲ್ಲಿ 1989- 1994 ರಿಂದ ಸಣ್ಣ ಸೇವಾ ಆಯೋಗದ ಅಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದರು ಮತ್ತು ನಂತರ ಪಂಜಾಬ್ ಪೊಲೀಸ್‌ ಇಲಾಖೆಗೆ ಸೇರಿದರು.

ಜಖರ್ ತಮ್ಮ ರಾಜೀನಾಮೆಯನ್ನು ಪ್ರಧಾನ ಕಾರ್ಯದರ್ಶಿ (ಕಾರಾಗೃಹ) ಡಿಕೆ ತಿವಾರಿ ಅವರಿಗೆ ಸಲ್ಲಿಸಿದ್ದಾರೆ ಎಂದು ಜೈಲುಗಳ ಸಹಾಯಕ ಮಹಾನಿರ್ದೇಶಕ ಪರ್ವೀನ್ ಕುಮಾರ್ ಸಿನ್ಹಾ, ಲಖ್ವಿಂದರ್ ಸಿಂಗ್ ಜಖರ್ ರಾಜೀನಾಮೆ ನೀಡಿರುವುದನ್ನು ದೃಢಪಡಿಸಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನಾ ರೈತರನ್ನು ಬೆಂಬಲಿಸಲು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅವರ ತಾಯಿ ಪ್ರೋತ್ಸಾಹಿಸಿದರು ಎಂದು ಹೇಳಿದ್ದಾರೆ. ಜೊತೆಗೆ “ನಾನು ಶೀಘ್ರದಲ್ಲೇ ರೈತರು ಹೋರಾಡುತ್ತಿರುವ ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ” ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರಿಗೆ ಬೆಂಬಲವಾಗಿ ಅನೇಕ ಅಧಿಕಾರಿಗಳು, ರಾಜಕೀಯ ನಾಯಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ನ ಚಿತ್ರೋದ್ಯಮ, ಕ್ರಿಡಾಪಟುಗಳು, ಸಾಹಿತಿಗಳು ತಮ್ಮ ಪ್ರಶಸ್ತಿ ಹಿಂತಿರುಗಿಸಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...