Homeಕರ್ನಾಟಕಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

ಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

- Advertisement -
- Advertisement -

ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾದ ಬೆನ್ನಲ್ಲೇ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಉದ್ಘಾಟಿಸಲಾಗಿದೆ.

ಈ ಮೀಡಿಯಾ ಫೋರಂನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಸಮೀವುಲ್ಲಾ ಬೆಲಗೂರು ಅವರು ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀಲ್, ಬಿ.ವಸಂತ ಈಶ್ವರಗೆರೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ, ಜಂಟಿ ಕಾರ್ಯದರ್ಶಿಗಳಾಗಿ ರಜನಿ ಹಾಗೂ ಮಾಲತೇಶ್ ಅರಸ್ ಹರ್ತಿಕೋಟೆ, ಖಜಾಂಚಿಯಾಗಿ ಸನತ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್.ರಾಘವೇಂದ್ರ, ಗೌರೀಶ್ ಅಕ್ಕಿ, ವಿಜಯ್ ಭರಮಸಾಗರ, ದರ್ಶನ್ ಆರಾಧ್ಯ, ಪ್ರವೀಣ್ ಏಕಾಂತ, ಅಮರ್ ಪ್ರಸಾದ್, ಅಂಕಿತಾ, ಹರೀಶ್ ಅರಸು ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಎರಡು ದಶಕಗಳ ಅನುಭವ ಇರುವಂತಹ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಕರ್ನಾಟಕ ಸ್ಟೇಟ್ ಡಿಜಿಟಲ್ ಮಿಡಿಯಾ ಫೋರಮ್ ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಡಿಜಿಟಲ್ ಮಾಧ್ಯಮ ಮಿತ್ರರನ್ನೂ ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ.

ನೂತನ ಅಧ್ಯಕ್ಷರಾದ ಸಮೀವುಲ್ಲಾ ಅವರು ಮಾತನಾಡಿ, “ಡಿಜಿಟಲ್ ಮೀಡಿಯಾ ಎಂಬುದು ಪ್ರತಿಯೊಬ್ಬರಿಗೂ ನವಯುಗಕ್ಕೆ ಅವಶ್ಯಕವಾಗಿದ್ದು, ಪ್ರಿಂಟ್ ಹಾಗೂ ಟಿವಿ ಮಾಧ್ಯಮಗಳಿಗಿಂತಲೂ ಪರಿಣಾಮಕಾರಿಯಾಗಿದೆ. ವೀಕ್ಷಕರು ಮತ್ತು ಓದುಗರನ್ನು ಹೆಚ್ಚು ತಲುಪಲು ತನ್ನದೇ ಆದ ಸಾಮರ್ಥ್ಯ ಹೊಂದಿದೆ. ಹೀಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಡಿಜಿಟಲ್ ಮಾಧ್ಯಮಗಳಿಗೆ ಒತ್ತು ನೀಡಿವೆ” ಎಂದರು.

ಪಕ್ಕದ ರಾಜ್ಯಗಳಾದ ಆಂದ್ರಪ್ರದೇಶ ಮತ್ತು ತಮಿಳು ನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಡಿಜಿಟಲ್ ಮಾಧ್ಯಮ ಒಕ್ಕೂಟ ಅಸ್ಥಿತ್ವದಲ್ಲಿವೆ. ಕರ್ನಾಟಕದಲ್ಲಿ ಡಿಜಿಟಲ್ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ನಮ್ಮ ಸಂಘಟನೆ ಮಾಧ್ಯಮ ಲೋಕದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವವರ ಹಿತಾಸಕ್ತಿ ಕಾಪಾಡಲು ಬದ್ದವಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಇದರ ಅಗತ್ಯತೆ ಎಂದಿಗಿಂತ ಈಗ ಹೆಚ್ಚಿದೆ. ಹೀಗಾಗಿ ಡಿಜಿಟಲ್ ಮಿಡಿಯಾ ಪೋರಮ್ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಪತ್ರಿಕೆ ಮತ್ತು ಮಾಧ್ಯಮಗಳಿಗೆ ನೀಡಿರುವಂತೆಯೇ ನಮಗೂ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ನೂರಾರು ಡಿಜಿಟಲ್ ಮಾಧ್ಯಮ ಪತ್ರಕರ್ತರು, ತಂತ್ರಜ್ಞರು ಹಾಜರಿದ್ದರು.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...