Homeಮುಖಪುಟರಾಜ್ಯಸಭೆಯಲ್ಲಿ ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್ ಅಂಗೀಕಾರ

ರಾಜ್ಯಸಭೆಯಲ್ಲಿ ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಯಾವುದೇ ಚರ್ಚೆ ನಡೆಯದ ಕಾರಣ ಪ್ರತಿಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು. ಆ ನಂತರ ಆಡಳಿತ ಪಕ್ಷದ ಸದಸ್ಯರು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಧ್ವನಿ ಮತದ ಮೂಲಕ ರಾಜ್ಯಸಭೆ ಬುಧವಾರ ಅಂಗೀಕರಿಸಿದರು.

ಸೋಮವಾರ ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಿದ್ದು, ರಾಷ್ಟ್ರಪತಿಗಳ ಒಪ್ಪಿಗೆ ದೊರೆತ ನಂತರ ಮಸೂದೆ ಕಾನೂನಾಗಲಿದೆ.

ಡೇಟಾ ರಕ್ಷಣೆಗಾಗಿ ಶಾಸನವನ್ನು ರೂಪಿಸುವಲ್ಲಿ ಇದು ಕೇಂದ್ರದ ಎರಡನೇ ಪ್ರಯತ್ನವಾಗಿದೆ. ”ಪ್ರತಿಪಕ್ಷಗಳು ಸದನದಲ್ಲಿ ಮಸೂದೆಯನ್ನು ಚರ್ಚಿಸಿದ್ದರೆ ಅದು ಚೆನ್ನಾಗಿರುತ್ತಿತ್ತು. ಆದರೆ ಯಾವುದೇ ವಿರೋಧ ಪಕ್ಷದ ನಾಯಕ ಅಥವಾ ಸದಸ್ಯರಿಗೆ ನಾಗರಿಕರ ಹಕ್ಕುಗಳ ಬಗ್ಗೆ ಕಾಳಜಿ ಇಲ್ಲ” ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮೇಲ್ಮನೆಗೆ ಹೇಳಿದರು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದ ಜಾನ್ ಬ್ರಿಟಾಸ್ ಮತ್ತು ವಿ ಶಿವದಾಸನ್ ಅವರು ಗಿಲ್ ಅವರನ್ನು ಆಯ್ಕೆ ಸಮಿತಿಗೆ ಕಳುಹಿಸುವ ಪ್ರಸ್ತಾವನೆಯನ್ನು ಮಂಡಿಸಿದ್ದರೂ, ಅವರ ಅನುಪಸ್ಥಿತಿಯ ಕಾರಣ ಅದನ್ನು ಮತಕ್ಕೆ ಹಾಕಲಿಲ್ಲ.

ನಾಗರಿಕರ ದತ್ತಾಂಶಗಳ ಸಂಗ್ರಹಣೆ ಮತ್ತು ಸಂಸ್ಕರಣೆಯ ಸುತ್ತ ಖಾಸಗಿ ಮತ್ತು ಸರ್ಕಾರಿ ಘಟಕಗಳ ಮೇಲೆ ಕಟ್ಟುಪಾಡುಗಳನ್ನು ಈ ಮಸೂದೆ ಹೇಳುತ್ತದೆ.

ನಾಗರಿಕರ ವೈಯಕ್ತಿಕ ಡೇಟಾವನ್ನು ಸಾರ್ವಜನಿಕ ವಿಷಯವಾಗಿಸಲು ವ್ಯಕ್ತಿಯ ಒಪ್ಪಿಗೆಯನ್ನು ಪಡೆಯುವುದು ಮತ್ತು ಅವರ ಡೇಟಾವನ್ನು ಪ್ರವೇಶಿಸಲು, ಸರಿಪಡಿಸಲು, ಅಳಿಸಲು ಮತ್ತು ನಿರ್ಬಂಧಿಸಲು ಆ ವ್ಯಕ್ತಿಗೆ ಹಕ್ಕನ್ನು ನೀಡುತ್ತದೆ. ವ್ಯಕ್ತಿಗಳ ಡಿಜಿಟಲ್ ಡೇಟಾವನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ರಕ್ಷಿಸಲು ವಿಫಲವಾದ ಘಟಕಗಳ ಮೇಲೆ 250 ಕೋಟಿ ರೂಪಾಯಿಗಳವರೆಗೆ ದಂಡವನ್ನು ಇದು ಪ್ರಸ್ತಾಪಿಸುತ್ತದೆ.

ಡೇಟಾ ಗೌಪ್ಯತೆ ಬಗ್ರುಗೆ ಕೆಲವರು ಕಾನೂನಿನ ಕೆಲವು ನಿಬಂಧನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಒಬ್ಬ ವ್ಯಕ್ತಿ ತಮ್ಮ ಡೇಟಾವನ್ನು ಹಂಚಿಕೊಳ್ಳುವ ಮೂರನೇ ವ್ಯಕ್ತಿಗಳ ಆ ಬಗ್ಗೆ ತಿಳಿಸಬೇಕಾಗಿಲ್ಲ, ಅವರ ಡೇಟಾವನ್ನು ಯಾವ ಅವಧಿಯವರೆಗೆ ಸಂಗ್ರಹಿಸಲಾಗುತ್ತದೆ ಎಂಬ ಬಗ್ಗೆ ತಿಳಿಸಿಲ್ಲ ಎಂದು ಇಂಟರ್ನೆಟ್ ಫ್ರೀಡಂ ಫೌಂಡೇಶನ್ ಹೇಳಿದೆ.

“ರಾಜ್ಯಕ್ಕೆ ವ್ಯಾಪಕ ವಿನಾಯಿತಿಗಳನ್ನು ಒದಗಿಸುವುದರ ಜೊತೆಗೆ, DPDPB [ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್], 2023ರ ಭಾರತೀಯ ನಾಗರಿಕರ ಗೌಪ್ಯತೆಯ ಹಕ್ಕನ್ನು ದುರ್ಬಲಗೊಳಿಸುವ ಮಿತಿಮೀರಿದ ಕಣ್ಗಾವಲು ವಿರುದ್ಧ ಯಾವುದೇ ಅರ್ಥಪೂರ್ಣ ಸುರಕ್ಷತೆಗಳನ್ನು ಜಾರಿಗೆ ತರಲು ವಿಫಲವಾಗಿದೆ” ಎಂದು ಇಂಟರ್ನೆಟ್ ಫ್ರೀಡಂ ಫೌಂಡೇಶನ್ ಹೇಳಿದೆ. .

ಸಾರ್ವಜನಿಕರ ಹಿತದೃಷ್ಟಿಯಿಂದ ಅಂತಹ ಮಾಹಿತಿಯನ್ನು ನಿರ್ಬಂಧಿಸಲು ಡೇಟಾ ಸಂರಕ್ಷಣಾ ಮಂಡಳಿಯಿಂದ ನಿರ್ದೇಶನವನ್ನು ಪಡೆಯಬೇಕು. ಮಾಹಿತಿಯ ಸಾರ್ವಜನಿಕಗೊಳಿಸುವುದನ್ನು ನಿರ್ಬಂಧಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ. ದತ್ತಾಂಶ ಸಂರಕ್ಷಣಾ ಮಂಡಳಿಯ ನೇಮಕಾತಿಗಳನ್ನು ಕೇಂದ್ರ ಸರ್ಕಾರ ಮಾಡುತ್ತದೆ.

ಇದನ್ನೂ ಓದಿ: 2018ರಿಂದ ಹೈಕೋರ್ಟ್‌ಗಳಲ್ಲಿ ಕೇವಲ 3% SC, 1.5% ST ನ್ಯಾಯಾಧೀಶರ ನೇಮಕ: ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...