Homeಮುಖಪುಟಎಡಿಟ್‌ ಆದ ವಿಡಿಯೋ ಟ್ವೀಟ್‌ ಮಾಡಿ ತೊಂದರೆಗೆ ಸಿಕ್ಕಿಕೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ಎಡಿಟ್‌ ಆದ ವಿಡಿಯೋ ಟ್ವೀಟ್‌ ಮಾಡಿ ತೊಂದರೆಗೆ ಸಿಕ್ಕಿಕೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ಸಂಬಂಧಿಸಿದ ಎಡಿಟ್‌ ವಿಡಿಯೋವೊಂದನ್ನು ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದ ಸಂಬಂಧಿಸಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಚೌಹಾಣ್‌ ಅವರ ಹೆಸರಿಗೆ ಮಸಿ ಬಳಿಯುವಂತ ವಿಡಿಯೋವನ್ನು ಸಿಂಗ್‌ ಅವರು ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸು ಕುಗ್ಗಿಸಲು ದಿಗ್ವಿಜಯ್ ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ವಿಡಿಯೋದಲ್ಲಿ ಮುಖ್ಯಮಂತ್ರಿಗಳು ಮದ್ಯ ಸೇವನೆಯನ್ನು ಉತ್ತೇಜಿಸುತ್ತಿದ್ದಾರೆ ಎಂದು ಹೇಳಲಾಗಿದ್ದು, “ಕಮಲ್ ನಾಥ್ ಸರ್ಕಾರವು ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಅಬಕಾರಿ ನೀತಿಯನ್ನು ರೂಪಿಸಿದಾಗ ಚೌಹಾಣ್‌ ಅವರ ಪ್ರತಿಕ್ರಿಯೆಯ ಭಾಗವಾಗಿದೆ” ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಈ ವಿಡಿಯೋವನ್ನು ಭಾನುವಾರ ಮಧ್ಯಾಹ್ನ ದಿಗ್ವಿಜಯ ಸಿಂಗ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್ ಹಂಚಿಕೊಂಡಿದ್ದು, ನಂತರ 10 ಮಂದಿ ಮರು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಪ್ರತಿಭಟನೆ ನಡೆಸಿದ ನಂತರ, ದಿಗ್ವಿಜಯ್‌ ಸಿಂಗ್ ಅವರ ಟ್ವಿಟ್ಟರ್ ಹ್ಯಾಂಡಲ್‌ನಿಂದ ವೀಡಿಯೊವನ್ನು ತೆಗೆದುಹಾಕಲಾಗಿದೆ.

ಆದರೆ ಮಾಜಿ ಗೃಹ ಸಚಿವ ಉಮಾಶಂಕರ್ ಗುಪ್ತಾ ನೇತೃತ್ವದ ಬಿಜೆಪಿ, ವಿಡಿಯೋಗೆ ಸಂಬಂಧಿಸಿದ ಸ್ಕ್ರೀನ್‌ಶಾಟ್‌ಗಳು ಮತ್ತು ಇತರ ಸಾಕ್ಷ್ಯಗಳನ್ನು ಅಪರಾಧ ವಿಭಾಗಕ್ಕೆ ಎರಡು ಪುಟಗಳ ದೂರಿನೊಂದಿಗೆ ಸಲ್ಲಿಸಿದೆ.

ಮುಖ್ಯಮಂತ್ರಿಯವರ ವಿರುದ್ಧ ಅಪಪ್ರಚಾರ ಮಾಡಲು ದಿಗ್ವಿಜಯ ಸಿಂಗ್ ಉದ್ದೇಶಪೂರ್ವಕವಾಗಿ ವಿಡಿಯೋ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ವೀಡಿಯೊವನ್ನು ರಿಟ್ವೀಟ್ ಮಾಡಿದ ಮತ್ತು ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ 11 ಜನರ ವಿರುದ್ಧ ಸೈಬರ್ ಸೆಲ್‌ನ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಘಟಕವು ಸಂಜೆ ಎಫ್ಐಆರ್ ಅನ್ನು ನೋಂದಾಯಿಸಿದೆ ಎಂದು ಅಪರಾಧ ಶಾಖೆಯ ಹಿರಿಯ ಅಧಿಕಾರಿ ನಿಶ್ಚಲ್‌ ಜಾರಿಯಾ ಹೇಳಿದ್ದಾರೆ. ಸಿಂಗ್ ವಿರುದ್ಧ ಮಾನಹಾನಿ ಮತ್ತು ಖೋಟಾ ಆರೋಪ ಹೊರಿಸಲಾಗಿದೆ.

ಬುಡಕಟ್ಟು ಜನಾಂಗದ ಪರಿಸ್ತಿತಿಯನ್ನು ಎತ್ತಿ ತೋರಿಸಿದ್ದಕ್ಕಾಗಿ ನಮ್ಮನ್ನು ಹಿಮ್ಮೆಟ್ಟಿಸುವುದು ಬಿಜೆಪಿಯ ರಾಜಕೀಯ ತಂತ್ರವಾಗಿದೆ ಮತ್ತು ವೀಡಿಯೊವನ್ನು ಯಾರು ಸಂಪಾದಿಸಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದು ದಿಗ್ವಿಜಯ್‌ ಸಿಂಗ್ ಹೇಳಿದರು.

“ಬುಡ್ನಿಯ ಬುಡಕಟ್ಟು ಜನಾಂಗದವರಿಗೆ ಶಿವರಾಜ್ ಸಿಂಗ್ ಚೌಹಾನ್ ಅವರ ಏಜೆಂಟರು 4.5 ಕೋಟಿ ರೂ. ವಂಚಿಸಿದ್ದಾರೆ. ಈ ಬಗ್ಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾನು ಅವರ ನಿವಾಸದಲ್ಲಿ ಧರಣಿ ಪ್ರತಿಭಟನೆ ನಡೆಸುತ್ತೇನೆ ಎಂದು ನಾನು ಅವರಿಗೆ ಪತ್ರ ಬರೆದಿದ್ದೇನೆ. ಇದು ಬಿಜೆಪಿಯನ್ನು ಗೊಂದಲಕ್ಕೀಡು ಮಾಡಿದೆ. ಹಾಗಾಗಿ ನನ್ನ ಮೇಲೆ ದೂರು ದಾಖಲಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...