Homeಮುಖಪುಟಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

- Advertisement -
- Advertisement -

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಚುನಾವಣೆಯ ದಿನ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ಸಲ್ಮಾನ್ ಖಾನ್ ಮೃತಪಟ್ಟಿದ್ದಾರೆ. ಸಲ್ಮಾನ್ ಖಾನ್ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ ನಾಯಕ ದಿಗ್ವಿಜಯ ಸಿಂಗ್‌, ಪಕ್ಷದ ಶಾಸಕ ವಿಕ್ರಮ್‌ ಸಿಂಗ್‌ ನಾಟಿ ರಾಜಾ ಮತ್ತಿತರರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ನ.17ರಂದು ಮಧ್ಯಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಛತ್ತರ್‌ಪುರ ಜಿಲ್ಲೆಯ ರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಸಲ್ಮಾನ್ ಖಾನ್ ಎಂಬ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದ. ಘಟನೆಯ ನಂತರ ದಿಗ್ವಿಜಯ ಸಿಂಗ್ ತಮ್ಮ ಬೆಂಬಲಿಗರೊಂದಿಗೆ ನವೆಂಬರ್ 18-19 ರಂದು ರಾಜನಗರದ ಬಿಜೆಪಿ ಅಭ್ಯರ್ಥಿ ಅರವಿಂದ್ ಪಟೇರಿಯಾ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಖಜುರಾಹೊ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಕುಳಿತಿದ್ದರು.

ಕಾಂಗ್ರೆಸ್ ನಾಯಕರು ಪಟೇರಿಯಾ ಅವರು ಖಾನ್ ಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ವಿಕ್ರಮ್ ಸಿಂಗ್ ಅವರು ಛತ್ತರ್‌ಪುರ ಹೆಚ್ಚುವರಿ ಜಿಲ್ಲಾಧಿಕಾರಿ ಸಲ್ಲಿಸಿದ ವರದಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆರೋಪದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ದಿಗ್ವಿಜಯ ಸಿಂಗ್, ರಾಜನಗರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಶಾಸಕ ರಾಜ ಮತ್ತು ಇತರ 60-70 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿಯ ಛತ್ತರ್‌ಪುರ ಜಿಲ್ಲಾಧ್ಯಕ್ಷ ಮಲ್ಖಾನ್ ಸಿಂಗ್ ಈ ಹಿಂದೆ ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ದಿಗ್ವಿಜಯ ಸಿಂಗ್ ಮತ್ತು ಇತರ ಕಾಂಗ್ರೆಸ್ ನಾಯಕರು ಅಧಿಕಾರಿಗಳಿಂದ ಅನುಮತಿ ಪಡೆಯದೆ ಧರಣಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆಗೆ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿಲ್ಲ ವರದಿಯನ್ನು ನೀಡಿದ್ದರು.

ಸಲ್ಮಾನ್ ಖಾನ್ ಸಾವಿನ ನಂತರ ಪೊಲೀಸರು ನ.17ರಂದು ಪಟೇರಿಯಾ ಮತ್ತು 20 ಬಿಜೆಪಿ ಕಾರ್ಯಕರ್ತರ ವಿರುದ್ಧ ಕೊಲೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಇದರ ಬಳಿಕ ಬಿಜೆಪಿ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ನ.19ರಂದು ನಡೆದ ಘಟನೆಗೆ ಸಂಬಂಧಿಸಿ ಬಿಜೆಪಿ ಪ್ರತಿ ದೂರು ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಟಿ ರಾಜಾ ವಿರುದ್ಧ ಕೊಲೆ ಯತ್ನ, ಗಲಭೆ ಮತ್ತು ಇತರ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣವನ್ನು ದಾಖಲಿಸಿದ್ದಾರೆ.

ಚುನಾವಣೆಯಲ್ಲಿ ಲಾಭ ಪಡೆಯಲು ನಾಟಿ ರಾಜಾ ಖಾನ್ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ನಾಟಿ ರಾಜಾ, ಸಲ್ಮಾನ್ ಖಾನ್ ಸಾವಿಗೆ ಬಿಜೆಪಿ ಅಭ್ಯರ್ಥಿ ಪಟೇರಿಯಾ ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ 751 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...