Homeಕರ್ನಾಟಕಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಮುಂದಾದ ದಿನೇಶ್ ಕಲ್ಲಹಳ್ಳಿ

ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಮುಂದಾದ ದಿನೇಶ್ ಕಲ್ಲಹಳ್ಳಿ

- Advertisement -
- Advertisement -

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ್ದ ದೂರನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ.

ರಮೇಶ್ ಜಾರಕಿಹೊಳಿ ಯುವತಿಯೋರ್ವಳಿಗೆ ಕೆಲಸ ಕೊಡುವುದಾಗಿ ಹೇಳಿ ವಂಚಿಸಿ, ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ವಿಡೀಯೋ ಸಹಿತ ದಿನೇಶ್ ದೂರು ನೀಡಿದ್ದರು.

ಮಾರ್ಚ್ 2ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಡಿಯೋ ಸಾಕ್ಷಿ ದೂರು ನೀಡಿದ್ದರು. ತಮ್ಮ ವಕೀಲರ ಮೂಲಕ ಪೊಲೀಸ್‌ ಠಾಣೆಗೆ ದೂರು ಹಿಂತೆಗೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಪ್ರಕರಣದಿಂದ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂಪಾಯಿ ಡೀಲ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.‌ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆ ದೂರು ನೀಡಿದ ನನಗೆ ಇದರಿಂದ ಮನಸ್ಸಿಗೆ ನೋವಾಗಿ ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾದ್ದೇನೆ. ಅದಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಮಾನ ಹರಾಜು ಹಾಕಲಾಗುತ್ತಿದೆ. ಪ್ರಕರಣದಲ್ಲಿ ದೂರುದಾರರನ್ನೇ ಗುರಿಯಾಯಿಸಲಾಯಿತು ಎಂದು ದಿನೇಶ್‌ ಕಲ್ಲಹಳ್ಳಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅನೇಕ ಕಡೆ ಸಚಿವ ರಮೇಶ್ ಜಾರಕಿಹೊಳಿ ಪರ- ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.

ಮಾರ್ಚ್‌ 2ರ ಸಂಜೆ  ಸಾಮಾಜಿಕ ಹೋರಾಟಗಾರ ದಿನೇಶ್‌ ಕಲ್ಲಹಳ್ಳಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಮಾಡಿದ ಈ ಆರೋಪ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಕಲ್ಲಹಳ್ಳಿ ಕಬ್ಬನ್ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡುವುದಕ್ಕೂ ಮೊದಲೇ ರಮೇಶ್‌ ಜಾರಕಿಹೊಳಿ ಇದ್ದಾರೆ ಎನ್ನಲಾದ ಲೈಂಗಿಕ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಸಾಮಾಜಿಕ ಜಾಲತಾಣಗಳಲ್ಲೆಲ್ಲ ಈ ವಿಡಿಯೋ ಹರಿದಾಡುತ್ತಿದೆ.

ರಮೇಶ್ ಜಾರಕಿಹೊಳಿ ಸಿಡಿ ಹೊರ ಬರುತ್ತಿದ್ದಂತೆ, ರಾಜ್ಯದ ಇನ್ನೂ 6 ಸಚಿವರು ಮಾಧ್ಯಮಗಳು ತಮ್ಮ ವಿರುದ್ಧ ಈ ರೀತಿಯ ಮಾನಹಾನಿಕರ ಸುದ್ದಿ ಪ್ರಕಟವಾಗಬಾರದೆಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.


ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...