ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಜ್ಯಸಭಾ ಸಂಸದ ಮತ್ತು ಪ್ರಬಲ ಮುಖಂಡ ದಿನೇಶ್ ತ್ರಿವೇದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ಇದು ಮಮತಾ ಬ್ಯಾನರ್ಜಿಯವರ ಪಕ್ಷಕ್ಕೆ ಅತ್ಯಂತ ದೊಡ್ಡ ಹಿನ್ನಡೆಯಾಗಿದೆ.
ಈ ಕುರಿತು ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿರುವ ದಿನೇಶ್ ತ್ರಿವೇದಿ, “ಇಂದು ನಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನನ್ನು ಇಲ್ಲಿಗೆ ಕಳುಹಿಸಿರುವ ನನ್ನ ಪಕ್ಷಕ್ಕೆ ಕೃತಜ್ಞನಾಗಿದ್ದೇನೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನನ್ನಿಂದ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ಇಲ್ಲಿ ಕುಳಿತುಕೊಂಡು ಏನನ್ನೂ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು ಎಂದು ನನ್ನ ಆತ್ಮವು ಹೇಳುತ್ತಿದೆ. ಹಾಗಾಗಿ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ಆದರೆ ಪಶ್ಚಿಮ ಬಂಗಾಳದ ಜನರಿಗಾಗಿ ಸೇವೆ ಮಾಡುವುದನ್ನು ಮುಂದುವರೆಸುತ್ತೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ
ರಾಜೀನಾಮೆಗೂ ಮುನ್ನಾದಿನ ದಿನೇಶ್ ತ್ರಿವೇದಿಯವರು ಮೋದಿಯವರನ್ನು ಹೊಗಳಿ ಟ್ವೀಟ್ ಮಾಡಿದ್ದರು.
I am personally in agreement with this. The way forward is to let our young talented mind innovate, create and distribute wealth. Pay Govt levies, create jobs. For that, our Govt officers (babus) too, need to encourage the youth . https://t.co/iyDIP6NR4D
— Dinesh Trivedi (@DinTri) February 10, 2021
“ಇದು ದುರದೃಷ್ಟಕರವಾಗಿದ್ದು ನನಗೆ ಅತೀವ ದುಃಖವಾಗಿದೆ. ಅವರು ರಾಜೀನಾಮೆ ನೀಡಿರುವುದು ಒಳ್ಳೆಯದಲ್ಲ. ಅವರು ಅತೃಪ್ತರಾಗಿದ್ದಾರೆಂದು ನನಗೆ ತಿಳಿದಿತ್ತು. ಆದರೆ ಅವರು ಪಕ್ಷ ತ್ಯಜಿಸುತ್ತಾರೆ ಎಂದು ನನಗೆ ತಿಳಿದಿರಲಿಲ್ಲ” ಎಂದು ಟಿಎಂಸಿಯ ಹಿರಿಯ ಮುಖಂಡ ಸೌಗತ ರಾಯ್ ಹೇಳಿದ್ದಾರೆ.
ಇತ್ತೀಚೆಗೆ ಟಿಎಂಸಿ ತೊರೆದಿರುವ ಪ್ರಮುಖ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದರು. ಇದರ ಬೆನ್ನಲ್ಲೆ ತ್ರಿವೇದಿಯವರ ರಾಜೀನಾಮೆ ಟಿಎಂಸಿಗೆ ತುಂಬಲಾರದ ನಷ್ಟವಾಗಿದೆ.
ಇನ್ನೇನು ಕೆಲವೇ ತಿಂಗಳಲ್ಲಿ 5 ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಅದರಲ್ಲಿ ಪಶ್ಚಿಮ ಬಂಗಾಳ ರಾಜ್ಯವೂ ಒಂದು.
ಇದನ್ನೂ ಓದಿ: ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ


