Homeಅಂತರಾಷ್ಟ್ರೀಯಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ: ಕಿರ್ಗಿಸ್ತಾನ್ ನಲ್ಲಿರುವ 700 ತಮಿಳು ವಿದ್ಯಾರ್ಥಿಗಳ ಮನವಿ

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

- Advertisement -
- Advertisement -

ಕೊರೊನಾ ದಿನೇ ದಿನೇ ಉಲ್ಭಣಿಸುತ್ತಿರುವುದರ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್ ನಲ್ಲಿ ಸಿಕ್ಕಿಕೊಂಡಿರುವ 700 ತಮಿಳು ವಿದ್ಯಾರ್ಥಿಗಳು ಚೆನ್ನೈಗೆ ನೇರ ವಿಮಾನ ಸೇವೆ ಕಲ್ಪಿಸಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಕಿರ್ಗಿಸ್ತಾನ್ ಸರ್ಕಾರವು, ಕೊರೊನಾ ಕಾರಣದಿಂದ ನಾವು ನಮ್ಮ ಸ್ವಂತನೆಲಕ್ಕೆ ತೆರಳುವಂತೆ ತಮಿಳುನಾಡಿನ 700 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೇಳಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ಚೆನ್ನೈಗೆ ನೇರ ವಿಮಾನಗಳಿಲ್ಲದ ಕಾರಣ, ವಿದ್ಯಾರ್ಥಿಗಳು ತಮಿಳುನಾಡಿಗೆ ಮರಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಮಿಳುನಾಡಿಗೆ ವಿಶೇಷ ವಿಮಾನಯಾನ ವ್ಯವಸ್ಥೆ ಮಾಡುವಂತೆ ಅವರು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

62 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಕಿರ್ಗಿಸ್ತಾನ್‌ನಲ್ಲಿ 8,141 ಕೊರೊನಾ ಸೋಂಕಿತರಿದ್ದಾರೆ. ಇದರಲ್ಲಿ 6,366 ಪ್ರಕರಣಗಳು ಬಿಷ್ಕೆಕ್ ನಲ್ಲಿ ಕೇಂದ್ರೀಕೃತವಾಗಿವೆ. ಅಲ್ಲಿಯೇ ತಮಿಳುನಾಡಿನ ವೈದ್ಯಕೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಹಾಗಾಗಿ ಅವರು ಆದಷ್ಟು ಬೇಗ ತಾವು ತಮಿಳುನಾಡಿಗೆ ಮರಳಬೇಕೆಂದು ಮನವಿ ಮಾಡಿದ್ದಾರೆ.

ಸುಮಾರು 300 ವಿದ್ಯಾರ್ಥಿಗಳು ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತವನ್ನು ತಲುಪುವಲ್ಲಿ ಯಶಸ್ವಿಯಾದರು. ಆದರೆ ನೇರ ವಿಮಾನಗಳ ಕೊರತೆಯಿಂದಾಗಿ ಇತರೆ ಸುಮಾರು 700 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದಾರೆ. “ಸರ್ಕಾರವು ನೇರ ವಿಮಾನಗಳನ್ನು ಒದಗಿಸದಿದ್ದರೆ, ನಮ್ಮ ಆಯ್ಕೆ ದೆಹಲಿಗೆ ಹೋಗಿ 7 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಉಳಿಯುವುದು. ನಂತರ ನಾವು ತಮಿಳುನಾಡಿಗೆ ತೆರಳಬೇಕು. ತಮಿಳುನಾಡಿಗೆ ನೇರ ವಿಮಾನಗಳ ಕೊರತೆಯಿಂದ ನಮಗೆ ಕಷ್ಟವಾಗುತ್ತಿದೆ. ಟಿಕೆಟ್ ದರವೂ ಹೆಚ್ಚಾಗಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಸಂಸ್ಥೆಗಳು ಖಾಸಗಿ ವಿಮಾನಯಾನ ವ್ಯವಸ್ಥೆ ಮಾಡಿವೆ. ಆದರೆ ಅನೇಕರು ಸಹಾಯ ಸಿಗದೇ ಇಲ್ಲಿ ಉಳಿದಿದ್ದಾರೆ” ಎಂದು ಕಿರ್ಗಿಸ್ತಾನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿ ಸಂಸುದ್ದೀನ್ ಶಬೀರ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಮಾನ ಕಾರ್ಯಾಚರಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಹೇಳಿದೆ.

ಜೂನ್ 29 ರಂದು ಡಿಎಂಕೆ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ”ತಮಿಳುನಾಡು ಸರ್ಕಾರದ ಕೋರಿಕೆಯ ಆಧಾರದ ಮೇಲೆ ರಾಜ್ಯಕ್ಕೆ ಕಡಿಮೆ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಡೆಸಲಾಗುತ್ತಿದೆ” ಎಂದು ಕೇಂದ್ರವು ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಿರ್ಗಿಸ್ತಾನ್‌ನಲ್ಲಿ ವಿದ್ಯಾರ್ಥಿಗಳ ಅವಸ್ಥೆ:

ಕಿರ್ಗಿಸ್ತಾನ್‌ನಲ್ಲಿ ಲಾಕ್‌ಡೌನ್ ಹೇರಿದಾಗಿನಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ದೊರೆತಿಲ್ಲ. “ಚೆನ್ನೈಗೆ ಕೊನೆಯ ವಿಮಾನ ಜುಲೈ 4 ರಂದು ಇತ್ತು. ಮುಂದಿನ 15 ದಿನಗಳವರೆಗೆ ನಮಗೆ ವಿಮಾನಗಳಿಲ್ಲ. ಆದರೆ, ಕಿರ್ಗಿಸ್ತಾನ್ ಸರ್ಕಾರ ನಮ್ಮನ್ನು ಸ್ಥಳಾಂತರಗೊಳ್ಳಲು ಹೇಳಿದೆ. ಭಾರತೀಯ ವಿದ್ಯಾರ್ಥಿಗಳಿಗೆ ನಾವು ಜವಾಬ್ದಾರರಲ್ಲ ಎಂದು ಅವರು ನಮಗೆ ತಿಳಿಸಿದ್ದಾರೆ. ಆದ್ದರಿಂದ ನಾವು ಇಲ್ಲಿಂದ ಹೊರಡಲು ಬಯಸುತ್ತೇವೆ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ ಎಂದು ಸಂಸುದ್ದೀನ್ ತಿಳಿಸಿದರು.

“ಪಾಕಿಸ್ತಾನ ಮತ್ತು ಭಾರತದಿಂದ ಅಕ್ಕಿ ಪೂರೈಕೆ ಕೂಡ ಸ್ಥಗಿತಗೊಂಡಿದ್ದು, ನಾವು ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು. 


ಇದನ್ನೂ ಓದಿ : 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ

ವಿದ್ಯಾರ್ಥಿಗಳು ರಾಜಕಾರಣ ಮಾಡುವುದು ಸರಿಯೇ ತಪ್ಪೆ? ಇಲ್ಲಿದೆ ನೋಡಿ ಸ್ಪಷ್ಟ ಉತ್ತರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...