ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಮ್‌ಗಳನ್ನು (ಎಎಎಸ್) ಬಳಸುವಂತೆ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಜೊತೆಗೆ ವಿಕಲಚೇತನರ ಪ್ರಯಾಣವನ್ನು ಸುಲಭಗೊಳಿಸಲು ಬಸ್ ನಿಲ್ದಾಣಗಳಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ಧ್ವನಿವರ್ಧಕ ವ್ಯವಸ್ಥೆಯನ್ನು ಮಾಡಬೇಕು ಎಂದು ಹೇಳಿದೆ. ವಿಕಲಚೇತನರಿಗಾಗಿ
ವಿಕಲಚೇತನರ ಅನುಕೂಲವಾಗುವ ನಿಟ್ಟಿನಲ್ಲಿ ಸುಧಾರಿತ ತಾಂತ್ರಿಕ ಉಪಕರಣಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ. ಜೊತೆಗೆ, ಈ ಯೋಜನೆಯು ನಿರಂತರವಾಗಿ ಕಾರ್ಯನಿರ್ವಹಿಸಲು ಸ್ಥಳೀಯ ಅಧಿಕಾರಿಗಳು ಸಾಕಷ್ಟು ಹಣವನ್ನು ಬಜೆಟ್ ನಿಬಂಧನೆಯಲ್ಲಿ ಮೀಸಲಿಡಬೇಕು ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮುಂದಿನ ಎರಡು ವರ್ಷಗಳಲ್ಲಿ, ರಾಜ್ಯ ಸರ್ಕಾರವು ವಿಕಲಚೇತನರ ಅನುಕೂಲಕ್ಕಾಗಿ ಎಎಎಸ್ ಅನ್ನು ನಿರ್ವಹಿಸಬೇಕು ಮತ್ತು ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲಿನ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳು ಮತ್ತು ಪಾಯಿಂಟ್‌ಗಳಲ್ಲಿ ಅದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಹಾಗೂ ಅದರ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠವು 2022 ರಲ್ಲಿ ದೃಷ್ಟಿ ವಿಕಲಚೇತನ ಪರ ಹೋರಾಟಗಾರ ಎನ್. ಶ್ರೇಯಸ್ ಮತ್ತು ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಶಿಯಲ್ ಕಾಸ್ ಸಿಇಒ ಕೃತಿಕಾ ಎನ್. ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಿಲೇವಾರಿ ಮಾಡುವಾಗ ಈ ನಿರ್ದೇಶನಗಳನ್ನು ನೀಡಿದೆ.
ವಿಕಲಾಂಗ ವ್ಯಕ್ತಿಗಳಿಗೆ ದೈಹಿಕವಾಗಿ ಮಾರ್ಗದರ್ಶನ, ಸಹಕಾರ ಮತ್ತು ಸಹಾಯ ಮಾಡಲು ಪ್ರಮುಖ ಸ್ಥಳಗಳು/ಬಸ್ ನಿಲ್ದಾಣಗಳಲ್ಲಿ ಮೇಲ್ವಿಚಾರಣಾ ನೌಕರರ ತಂಡವನ್ನು ನಿಯೋಜಿಸಬೇಕು. ಹೀಗೆ ಮಾಡಿದರೆ ಅವರು ಅದರಿಂದ ಪ್ರಯೋಜನಗಳನ್ನು ಪರಿಣಾಮಕಾರಿಯಾಗಿ ಮತ್ತು ಫಲಪ್ರದವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ವಿಕಲಚೇತನರಿಗಾಗಿ
ಬಸ್ ನಿಲ್ದಾಣಗಳಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ಆಡಿಯೋ ಅನೌನ್ಸ್‌ಮೆಂಟ್ ಸೌಲಭ್ಯವನ್ನು ಪ್ರಾರಂಭಿಸುವ ಮೂಲಕ ವಿಕಲಚೇತನರಿಗೆ ಅನುಕೂಲವಾಗುವಂತೆ ಮಾಡಿರುವ ಅಧಿಕಾರಿಗಳ ಪ್ರಯತ್ನವನ್ನು ಸುಪ್ರಿಂಕೋರ್ಟ್ ಸಂತಸ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ


