Homeಕರ್ನಾಟಕವಿಕಲಚೇತನರಿಗಾಗಿ ಬಸ್‌ಗಳಲ್ಲಿ ಧ್ವನಿವರ್ಧಕ ಅಳವಡಿಸಿ - ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಿಕಲಚೇತನರಿಗಾಗಿ ಬಸ್‌ಗಳಲ್ಲಿ ಧ್ವನಿವರ್ಧಕ ಅಳವಡಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಮ್‌ಗಳನ್ನು (ಎಎಎಸ್) ಬಳಸುವಂತೆ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಜೊತೆಗೆ ವಿಕಲಚೇತನರ ಪ್ರಯಾಣವನ್ನು ಸುಲಭಗೊಳಿಸಲು ಬಸ್‌ ನಿಲ್ದಾಣಗಳಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ಧ್ವನಿವರ್ಧಕ ವ್ಯವಸ್ಥೆಯನ್ನು ಮಾಡಬೇಕು ಎಂದು ಹೇಳಿದೆ. ವಿಕಲಚೇತನರಿಗಾಗಿ

ವಿಕಲಚೇತನರ ಅನುಕೂಲವಾಗುವ ನಿಟ್ಟಿನಲ್ಲಿ ಸುಧಾರಿತ ತಾಂತ್ರಿಕ ಉಪಕರಣಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ. ಜೊತೆಗೆ, ಈ ಯೋಜನೆಯು ನಿರಂತರವಾಗಿ ಕಾರ್ಯನಿರ್ವಹಿಸಲು ಸ್ಥಳೀಯ ಅಧಿಕಾರಿಗಳು ಸಾಕಷ್ಟು ಹಣವನ್ನು ಬಜೆಟ್ ನಿಬಂಧನೆಯಲ್ಲಿ ಮೀಸಲಿಡಬೇಕು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಂದಿನ ಎರಡು ವರ್ಷಗಳಲ್ಲಿ, ರಾಜ್ಯ ಸರ್ಕಾರವು ವಿಕಲಚೇತನರ ಅನುಕೂಲಕ್ಕಾಗಿ ಎಎಎಸ್ ಅನ್ನು ನಿರ್ವಹಿಸಬೇಕು ಮತ್ತು ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲಿನ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳು ಮತ್ತು ಪಾಯಿಂಟ್‌ಗಳಲ್ಲಿ ಅದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಹಾಗೂ ಅದರ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠವು 2022 ರಲ್ಲಿ ದೃಷ್ಟಿ ವಿಕಲಚೇತನ ಪರ ಹೋರಾಟಗಾರ ಎನ್. ಶ್ರೇಯಸ್ ಮತ್ತು ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಶಿಯಲ್ ಕಾಸ್ ಸಿಇಒ ಕೃತಿಕಾ ಎನ್. ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಿಲೇವಾರಿ ಮಾಡುವಾಗ ಈ ನಿರ್ದೇಶನಗಳನ್ನು ನೀಡಿದೆ.

ವಿಕಲಾಂಗ ವ್ಯಕ್ತಿಗಳಿಗೆ ದೈಹಿಕವಾಗಿ ಮಾರ್ಗದರ್ಶನ, ಸಹಕಾರ ಮತ್ತು ಸಹಾಯ ಮಾಡಲು ಪ್ರಮುಖ ಸ್ಥಳಗಳು/ಬಸ್ ನಿಲ್ದಾಣಗಳಲ್ಲಿ ಮೇಲ್ವಿಚಾರಣಾ ನೌಕರರ ತಂಡವನ್ನು ನಿಯೋಜಿಸಬೇಕು. ಹೀಗೆ ಮಾಡಿದರೆ ಅವರು ಅದರಿಂದ ಪ್ರಯೋಜನಗಳನ್ನು ಪರಿಣಾಮಕಾರಿಯಾಗಿ ಮತ್ತು ಫಲಪ್ರದವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ವಿಕಲಚೇತನರಿಗಾಗಿ

ಬಸ್ ನಿಲ್ದಾಣಗಳಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ಆಡಿಯೋ ಅನೌನ್ಸ್‌ಮೆಂಟ್ ಸೌಲಭ್ಯವನ್ನು ಪ್ರಾರಂಭಿಸುವ ಮೂಲಕ ವಿಕಲಚೇತನರಿಗೆ ಅನುಕೂಲವಾಗುವಂತೆ ಮಾಡಿರುವ ಅಧಿಕಾರಿಗಳ ಪ್ರಯತ್ನವನ್ನು ಸುಪ್ರಿಂಕೋರ್ಟ್ ಸಂತಸ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...