Homeಮುಖಪುಟಮದುವೆಗೆ ಅಸಮ್ಮತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ - ಸುಪ್ರೀಂ ಕೋರ್ಟ್

ಮದುವೆಗೆ ಅಸಮ್ಮತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ – ಸುಪ್ರೀಂ ಕೋರ್ಟ್

- Advertisement -
- Advertisement -

ಮದುವೆಗೆ ಅಸಮ್ಮತಿ ವ್ಯಕ್ತಪಡಿಸುವುದು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ದ್ವಿಸದಸ್ಯ ಪೀಠವು ಈ ತೀರ್ಪು ನೀಡದೆ. ಮದುವೆಗೆ ಅಸಮ್ಮತಿ

ತನ್ನ ಮಗನನ್ನು ಪ್ರೀತಿಸುತ್ತಿದ್ದ ಯುವತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತ ಮಹಿಳೆಯ ವಿರುದ್ಧದ ಆರೋಪಪಟ್ಟಿಯನ್ನು ರದ್ದುಗೊಳಿಸುವಾಗ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.  ಆರೋಪಪಟ್ಟಿ ಮತ್ತು ಸಾಕ್ಷಿಗಳ ಹೇಳಿಕೆಗಳು ಸೇರಿದಂತೆ ದಾಖಲೆಯಲ್ಲಿರುವ ಎಲ್ಲಾ ಪುರಾವೆಗಳು ಸರಿಯಾಗಿದ್ದರೂ ಸಹ, ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಿದವರ (ಆರೋಪಿ) ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದೆ. ಮದುವೆಗೆ ಅಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೇಲ್ಮನವಿ ಸಲ್ಲಿಸಿದವರ ಕೃತ್ಯಗಳು ಐಪಿಸಿಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಅಪರಾಧವನ್ನು ರೂಪಿಸಲು ಸಾಧ್ಯವಿಲ್ಲ. ಈ ಸಾವು ಪರೋಕ್ಷವಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮೃತ ವ್ಯಕ್ತಿಗೆ ಆತ್ಮಹತ್ಯೆಯಂತಹ ದುರದೃಷ್ಟಕರ ಕೃತ್ಯವನ್ನು ಮಾಡುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬುವುದು ಸರಿಯಲ್ಲ” ಎಂದು ಪೀಠವು ಹೇಳಿದೆ.

ಈ ಆರೋಪಗಳು ಮೃತ ಯುವತಿ ಮತ್ತು ಮೇಲ್ಮನವಿ ಸಲ್ಲಿಸಿದ ವ್ಯಕ್ತಿಯ ಮಗನ ನಡುವಿನ ವಿವಾದಗಳನ್ನು ಆಧರಿಸಿವೆ. ಆದರೆ ಮಹಿಳೆಯು ತನ್ನ ಮಗ ಈ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದರು. ಮೇಲ್ಮನವಿ ಸಲ್ಲಿಸಿದವರ ಮೇಲೆ ಮದುವೆಯನ್ನು ವಿರೋಧಿಸಿದ ಮತ್ತು ಮೃತರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಹೊರಿಸಲಾಗಿತ್ತು.

ಮೃತ ಯುವತಿಯು ತಮ್ಮ ಪ್ರಿಯಕರನನ್ನು ಮದುವೆಯಾಗದೆ ಬದುಕಿರಲು ಸಾಧ್ಯವಾಗುವುದಿಲ್ಲ ಎಂಬ ಹೇಳಿಕೆಯು ಸರಿಯಲ್ಲ. ಅಷ್ಟಕ್ಕೆ ಅವರ ಆತ್ಮಹತ್ಯೆಗೆ ಪ್ರಿಯಕರ ತಾಯಿ ಕಾರಣವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...