Homeಕರ್ನಾಟಕಬಾಂಬೆ ಟೀಮ್‌ನಿಂದಾಗಿ ಬಿಜೆಪಿಯಲ್ಲಿ ಶಿಸ್ತು ಮಾಯವಾಗಿದೆ: ಕೆಎಸ್‌ ಈಶ್ವರಪ್ಪ ಗರಂ

ಬಾಂಬೆ ಟೀಮ್‌ನಿಂದಾಗಿ ಬಿಜೆಪಿಯಲ್ಲಿ ಶಿಸ್ತು ಮಾಯವಾಗಿದೆ: ಕೆಎಸ್‌ ಈಶ್ವರಪ್ಪ ಗರಂ

- Advertisement -
- Advertisement -

ಬಾಂಬೆ ಟೀಮ್‌ಅನ್ನು ಬಿಜೆಪಿಗೆ ಕರೆ ತಂದಿರುವುದೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಕಾರಣವಾಯಿತು ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಹೀನಾಯವಾಗಿ ಸೋತಿರುವುದಕ್ಕೆ ಪಕ್ಷದ ನಾಯಕರು ಆತ್ಮಾವಲೋಕನ ಸಭೆ ನಡೆಸುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ಕೆ.ಎಸ್.ಈಶ್ವರಪ್ಪ ಮಾತನಾಡುತ್ತಾ, ”ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್‌ ಮಾಡುತ್ತೇವೆ” ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

”ಬಿಜೆಪಿಯಲ್ಲಿ ಬಹಿರಂಗವಾಗಿ ಅಡ್ಜೆಸ್ಟ್​ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವದ ಸಂಗತಿ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ” ಎಂದರು.

”ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ” ಎನ್ನುತ್ತಾ ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಈಶ್ವರಪ್ಪ ಗರಂ ಆದರು.

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು.

”ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ದತೆ ನಡೆಸುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ನನ್ನ ಮಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್ ಈಶ್ವರಪ್ಪ ಹೇಳಿಕೆ

ಕಾಂಗ್ರೆಸ್‌ ಸುಳ್ಳು ಹೇಳಿ ಮೋಸ ಮಾಡಿದೆ!

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಅನುಷ್ಟಾನಕ್ಕೆ ಎಲ್ಲಿಂದ ಹಣ ಹೊಂದಿಸುತ್ತದೆ ಎಂಬುದನ್ನು ಶೀಘ್ರ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬೇಕು. ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ, ಅಧಿಕಾರಕ್ಕೆ ಬಂದ ಮೊದಲ‌ ಕ್ಯಾಬಿನೆಟ್‌ನಲ್ಲಿ ಎಲ್ಲವನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿ, ಒಂದುವರೆ ತಿಂಗಳು ಕಳೆಯುತ್ತಾ ಬಂದರೂ ಈವರೆಗೆ ಜಾರಿಗೆ ತರದೇ ರಾಜ್ಯದ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಇದೀಗ ಕೇವಲ ಮಾಧ್ಯಮಗಳ ಮುಂದೆ ಉಡಾಫೆ ಹೇಳಿಕೆ ಕೊಡುತ್ತಾ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

”ಈ ಐದು ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಕಾಂಗ್ರೆಸ್‌ನವರು ಸುಳ್ಳು ಹೇಳಿ ರಾಜ್ಯದ ಜನರಿಗೆ ಮೋಸ ಮಾಡಿದ್ದಾರೆ. ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಅಲ್ಲದೆ ನಿರುದ್ಯೋಗಿ ಯುವಕರಿಗೆ ಮೋಸ ಮಾಡಿದ್ದಾರೆ. ಒಬ್ಬರಿಗೂ ಒಂದು ರೂಪಾಯಿಯೂ ಕೊಟ್ಟಿಲ್ಲ” ಎಂದು ಆರೋಪ ಮಾಡಿದ್ದಾರೆ.

”ಮತ್ತೊಂದೆಡೆ ಕೇಂದ್ರ ಸರ್ಕಾರ ಕೊಡುವ 5 ಕೆಜಿ ಉಚಿತ ಅಕ್ಕಿಯ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಕಾಂಗ್ರೆಸ್ ನಾಯಕರು ಬಡ ಜನರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ” ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪ ಮಾಡಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...