Homeಮುಖಪುಟಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

- Advertisement -
- Advertisement -

ಕುವೈತ್ ಕಟ್ಟಡದಲ್ಲಿ ಅಗ್ನಿದುರಂತ ಮತ್ತು 45 ಭಾರತೀಯರು ಸಾವನ್ನಪ್ಪಿದ ದುರಂತದ ಘಟನೆಯ ಪ್ರಾಥಮಿಕ ತನಿಖೆಗಳು ಕಟ್ಟಡದಲ್ಲಿ ಅಗ್ನಿ ದುರಂತಕ್ಕೆ ಕಾರಣವಾದ ಪ್ರಾಥಮಿಕ ಅಂಶಗಳನ್ನು ಪತ್ತೆ ಹಚ್ಚಿದೆ. ಏಳು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಸುಮಾರು ಎರಡು ಡಜನ್ ಗ್ಯಾಸ್ ಸಿಲಿಂಡರ್‌ಗಳು, ಕಾಗದದಂತಹ ದಹಿಸುವ ವಸ್ತುಗಳನ್ನು ಇಡಲಾಗಿತ್ತು. ಮೇಲ್ಛಾವಣಿಯ ಮೇಲೆ ಬಾಗಿಲುಗಳಿಗೆ ಬೀಗ ಹಾಕಿದ ಕಾರಣ ಕಾರ್ಮಿಕರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ತನಿಖೆಯ ವೇಳೆ ಬಯಲಾಗಿದೆ.

ನೆಲ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಮೊದಲು ಸಂಭವಿಸಿದೆ. ಅದು ನೆಲ ಮಹಡಿಯಲ್ಲಿಟ್ಟಿದ್ದ ಗ್ಯಾಸ್‌ ಸಿಲಿಂಡರ್‌ಗಳಿಗೆ ತಗುಲಿದೆ. ಕೊಠಡಿಗಳು ಸಾಕಷ್ಟು ಕಾಗದದಂತಹ ದಹಿಸಬಹುದಾದ ವಸ್ತುಗಳನ್ನು ಹೊಂದಿದ್ದರಿಂದ ಬೆಂಕಿ ತ್ವರಿತವಾಗಿ  ಕಟ್ಟಡದ ಮೇಲ್ಬಾಗಕ್ಕೆ ವ್ಯಾಪಿಸಿದೆ.

ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಬದುಕುಳಿದವರನ್ನು ಭೇಟಿ ಮಾಡಿ ವಿಚಾರಣೆ ನಡೆಸಿದಾಗ ಈ ಮಹತ್ವದ ಅಂಶಗಳು ಬಯಲಾಗಿದೆ. ಕುವೈತ್‌ನ ತನಿಖಾಧಿಕಾರಿಗಳು ಕುವೈತ್ ನಗರದ ಸಮೀಪವಿರುವ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಬುಧವಾರ ಮುಂಜಾನೆ 49 ಜೀವಗಳನ್ನು ಬಲಿತೆಗೆದುಕೊಂಡ ಅಗ್ನಿ ದುರಂತ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಕುವೈತ್ ಅಧಿಕಾರಿಗಳ ಪ್ರಕಾರ, ಅಗ್ನಿ ದುರಂತದಲ್ಲಿ ಮೃತ 49 ಜನರಲ್ಲಿ 45 ಮಂದಿ ಭಾರತೀಯರು ಮತ್ತು ಮೂವರು ಫಿಲಿಪೈನ್ಸ್‌ನವರು ಎಂದು ಹೇಳಲಾಗಿದೆ. ಒಂದು ಮೃತದೇಹ ಇನ್ನೂ ಪತ್ತೆಯಾಗಬೇಕಿದೆ.

ಕುವೈತ್ ನಗರದ ದಕ್ಷಿಣದಲ್ಲಿರುವ ಮಂಗಾಫ್‌ನಲ್ಲಿ 196 ವಲಸೆ ಕಾರ್ಮಿಕರಿದ್ದ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 50 ಮಂದಿ ಗಾಯಗೊಂಡಿದ್ದಾರೆ.

ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್, ಕುವೈತ್‌ನ ಭಾರತೀಯ ರಾಯಭಾರಿ ಆದರ್ಶ್ ಸ್ವೈಕಾ ಅವರೊಂದಿಗೆ ಘಟನೆಯಲ್ಲಿ ಕೆಲವು ಬದುಕುಳಿದ ಸಂತ್ರಸ್ತರನ್ನು ಮತ್ತು ಕುವೈತ್ ಸರ್ಕಾರದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ.

ಸಾವನ್ನಪ್ಪಿದ 45 ಭಾರತೀಯರ ಮೃತದೇಹಗಳನ್ನು ಹೊತ್ತ ವಿಶೇಷ ವಾಯುಪಡೆಯ ವಿಮಾನವು ಕುವೈತ್‌ನಿಂದ ಟೇಕಾಫ್ ಆಗಿದೆ. ವಿಮಾನವು ಕೇರಳದ ಕೊಚ್ಚಿಯಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಇಳಿದು ನಂತರ ದೆಹಲಿಗೆ ಹೊರಡುವ ನಿರೀಕ್ಷೆಯಿದೆ. ವಿದೇಶಾಂಗ ಸಚಿವಾಲಯದಲ್ಲಿ ಕಿರಿಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಕುವೈತ್‌ಗೆ ಧಾವಿಸಿದ್ದ ಸಂಸದ ಕೀರ್ತಿ ವರ್ಧನ್ ಸಿಂಗ್ ಕೂಡ ಅದೇ ವಿಮಾನದಲ್ಲಿ ವಾಪಸಾಗುತ್ತಿದ್ದಾರೆ.

ಇದನ್ನು ಓದಿ: ರಾಜ್ಯಸಭಾ ಚುನಾವಣೆ; ಅಜಿತ್ ಪವಾರ್ ಪತ್ನಿ ಸುನೇತ್ರಾ ನಾಮಪತ್ರ ಸಲ್ಲಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...