Homeಕರ್ನಾಟಕಬಜೆಟ್‌ನಲ್ಲಿ ತಾರತಮ್ಯ : ನೀತಿ ಆಯೋಗದ ಸಭೆ ಬಹಿಷ್ಕರಿಸಿದ 7 ರಾಜ್ಯಗಳು

ಬಜೆಟ್‌ನಲ್ಲಿ ತಾರತಮ್ಯ : ನೀತಿ ಆಯೋಗದ ಸಭೆ ಬಹಿಷ್ಕರಿಸಿದ 7 ರಾಜ್ಯಗಳು

ನೀತಿ ಆಯೋಗ ರದ್ದುಪಡಿಸಲು ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಕೇಂದ್ರ ಬಜೆಟ್‌ನಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಇಂದು (ಜು.27) ನಡೆಯಲಿರುವ ನೀತಿ ಆಯೋಗದ ಸಭೆಗೆ ಕರ್ನಾಟಕ ಸಹಿತ ಏಳು ರಾಜ್ಯಗಳು ಬಹಿಷ್ಕಾರ ಹಾಕಿವೆ.

ಕರ್ನಾಟಕದ ಮಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು, ತೆಲಂಗಾಣದ ಎ. ರೇವಂತ್ ರೆಡ್ಡಿ, ತಮಿಳುನಾಡಿನ ಎಂ.ಕೆ ಸ್ಟಾಲಿನ್, ಕೇರಳದ ಪಿಣರಾಯಿ ವಿಜಯನ್ ಮತ್ತು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಅವರು ಸಭೆಗೆ ಹಾಜರಾಗುವುದು ಅಸಾಧ್ಯವಾಗಿದೆ. ಆದರೆ, ದೆಹಲಿ ಸರ್ಕಾರ ಕೂಡ ಸಭೆಯನ್ನು ಬಹಿಷ್ಕರಿಸಿದೆ.

‘ವಿಕಸಿತ ಭಾರತ @ 2047’ ಎಂಬುವುದು ಈ ವರ್ಷದ ನೀತಿ ಆಯೋಗದ ಥೀಮ್ ಆಗಿದೆ. ಕೇಂದ್ರ ಸರ್ಕಾರ ‘ಮೇಕಿಂಗ್ ಇಂಡಿಯಾ’ಕ್ಕೆ ಹೆಚ್ಚು ಒತ್ತು ಕೊಡುವ ಗುರಿ ಹೊಂದಿದೆ.

ಮಮತಾ, ಸೊರೇನ್ ಭಾಗಿ?

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡು ಬಜೆಟ್‌ನಲ್ಲಿ ತಾರತಮ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಪ್ರತಿಭಟನೆ ವ್ಯಕ್ತಪಡಿಸಲಿದ್ದಾರೆ ಎಂದು ಹೇಳಲಾಗಿದೆ. ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಮತಾ ಬ್ಯಾನರ್ಜಿ ಗುರುವಾರವೇ ದೆಹಲಿಗೆ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರು ಪ್ರಯಾಣ ರದ್ದುಗೊಳಿಸಿದ್ದಾರೆ. ಹಾಗಾಗಿ, ಸಭೆಯಲ್ಲಿ ಭಾಗಿಯಾಗುತ್ತಾರೋ, ಇಲ್ಲವೋ ಎಂಬುವುದು ಖಚಿತವಾಗಿಲ್ಲ.

ನೀತಿ ಆಯೋಗ ರದ್ದತಿಗೆ ಮಮತಾ ಬ್ಯಾನರ್ಜಿ ಆಗ್ರಹ

ನೀತಿ ಆಯೋಗವನ್ನು ರದ್ದುಪಡಿಸಿ ಈ ಹಿಂದಿನ ಯೋಜನಾ ಆಯೋಗವನ್ನು ಮರುಸ್ಥಾಪಿಸಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ನೀತಿ ಆಯೋಗ ಆಧಾರರಹಿತವಾಗಿದೆ. ಅದು ಕೇವಲ ಸಭೆಗಳನ್ನು ನಡೆಸುವುದಕ್ಕಷ್ಟೇ ಸೀಮಿತವಾಗಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ : ರಾಮನಗರವನ್ನು ‘ಬೆಂಗಳೂರು ದಕ್ಷಿಣ’ ಜಿಲ್ಲೆ ಎಂದು ಮರುನಾಮಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...