Homeಮುಖಪುಟಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಇಂದಿನ ಮನ್-ಕಿ-ಬಾತ್ ಕಾರ್ಯಕ್ರಮದಲ್ಲಿ ಗೊಂಬೆಗಳ ಉದ್ಯಮದ ಬಗ್ಗೆ ಮಾತನಾಡಿದ್ದರು. 

- Advertisement -
- Advertisement -

ದೇಶದಾದ್ಯಂತ ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಕೂಗು ಕೇಳಿ ಬರುತ್ತಿದ್ದರೂ ಸಹ, ಅದರ ಕುರಿತು ಚರ್ಚಿಸುವುದನ್ನು ಬಿಟ್ಟು, ಪ್ರಧಾನಿ ಮೋದಿ ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ ಎಂದು ರಾಹುಲ್ ಗಾಂಧಿ ಅಣಕಿಸಿದ್ದಾರೆ.

ಕೊರೊನಾ ಮಧ್ಯೆ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ನಂತರ ಜೆಇಇ-ನೀಟ್ ಆಕಾಂಕ್ಷಿಗಳ ಕುಂದುಕೊರತೆಗಳನ್ನು ಪರಿಹರಿಸದ ಕಾರಣಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಇಂದಿನ ಮನ್-ಕಿ-ಬಾತ್ ಕಾರ್ಯಕ್ರಮದಲ್ಲಿ ಗೊಂಬೆಗಳ ಉದ್ಯಮದ ಬಗ್ಗೆ ಮಾತನಾಡಿದ್ದರು.

ಇದರ ಬಗ್ಗೆ ರಾಹುಲ್ ಗಾಂಧಿ, “ಜೆಇಇ-ನೀಟ್ ಆಕಾಂಕ್ಷಿಗಳು ಪ್ರಧಾನಮಂತ್ರಿ “ಪರಿಕ್ಷ ಪೆ ಚಾರ್ಚಾ” ಮಾಡಬೇಕೆಂದು ಬಯಸಿದ್ದರು ಆದರೆ ಪ್ರಧಾನಿ “ಖಿಲೋನ್ ಪೆ ಚಾರ್ಚಾ” ಮಾಡಿದರು” ಎಂದು ಟ್ವೀಟ್ ಮಾಡಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಸೆಪ್ಟೆಂಬರ್ 30 ರೊಳಗೆ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗಕ್ಕೆ ಅನುಮತಿ ನೀಡಿತು.

ಸೆಪ್ಟೆಂಬರ್ 13 ರಂದು ನೀಟ್ ನಡೆಸಲಾಗುವುದು. ಜೆಇಇ ಅನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಜೆಇಇ ಮತ್ತು ನೀಟ್‌ಗೆ ಕ್ರಮವಾಗಿ ಸುಮಾರು 9.53 ಲಕ್ಷ ಮತ್ತು 15.97 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ಈಗಾಗಲೇ ಎರಡು ಬಾರಿ ಮುಂದೂಡಲಾಗಿದೆ.

ಕೊರೊನಾ ವೈರಸ್ ಪ್ರಕರಣಗಳು ದೇಶದಲ್ಲಿ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣಿಸದ ಕಾರಣ ಈ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧದ ದನಿಗಳು ಹೆಚ್ಚುತ್ತಿವೆ.

ಕಾಂಗ್ರೆಸ್ ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿ, ನಿರ್ಧಾರದ ವಿರುದ್ಧ ಆನ್‌ಲೈನ್ ಅಭಿಯಾನ ನಡೆಸಿದ್ದು, ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವಂತೆ ಸೋನಿಯಾ ಗಾಂಧಿ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ, ವಿವಿಧ ವಿಶ್ವವಿದ್ಯಾಲಯಗಳ ಸುಮಾರು 150 ಶಿಕ್ಷಣ ತಜ್ಞರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, “ಯೋಜಿಸಿದಂತೆ ಪರೀಕ್ಷೆಗಳೊಂದಿಗೆ ಮುಂದುವರಿಯಿರಿ ಮತ್ತು ವಿರೋಧದ ದನಿಗಳಿಗೆ ಅವಕಾಶ ನೀಡಬಾರದು” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...