HomeಮುಖಪುಟCAAಕುರಿತು ಚರ್ಚೆ: ಅಮಿತ್‌ ಜಿ 5 ದಿನಗಳು ಮುಗಿದಿವೆ ಮತ್ತು ಕಣ್ಣನ್‌ ಗೋಪಿನಾಥ್‌ ಕಾಯುತ್ತಲೇ ಇದ್ದಾರೆ..

CAAಕುರಿತು ಚರ್ಚೆ: ಅಮಿತ್‌ ಜಿ 5 ದಿನಗಳು ಮುಗಿದಿವೆ ಮತ್ತು ಕಣ್ಣನ್‌ ಗೋಪಿನಾಥ್‌ ಕಾಯುತ್ತಲೇ ಇದ್ದಾರೆ..

ಸಿಎಎ ಬಗ್ಗೆ ‘ತಪ್ಪು ಕಲ್ಪನೆಗಳನ್ನು’ ಹೋಗಲಾಡಿಸಲು ಕೇಂದ್ರ ಗೃಹ ಸಚಿವರು ಯಾರೊಂದಿಗೆ ಬೇಕಾದರೂ ಚರ್ಚೆಗೆ ಸಿದ್ದ ಎಂದು ಭರವಸೆ ನೀಡಿದ್ದರು.

- Advertisement -
- Advertisement -

CAA, NRC, NPR ಕುರಿತು ಗೃಹ ಸಚಿವ ಅಮಿತ್‌ ಶಾರವರು ಚರ್ಚೆಗೆ ಆಹ್ವಾನಿಸಿದ್ದರ ಕುರಿತು ಪತ್ರ ಬರೆದಿದ್ದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌, ಭೇಟಿಗೆ ಸಮಯ ನೀಡಬೇಕೆಂದು ಆಗ್ರಹಿಸಿದ್ದರು.

ಫೆಬ್ರವರಿ 13, ಗುರುವಾರ: ಸಿಎಎ ಯಿಂದ ದೇಶಕ್ಕೆ ಯಾವುದೇ ಅಪಾಯಗಳಿಲ್ಲ. ಈ ಕುರಿತು ಯಾರಾದರೂ ನನ್ನೊಡನೆ ಬಹಿರಂಗ ಚರ್ಚೆಗೆ ಬರಬಹುದು. ನಿಮ್ಮ ತಪ್ಪು ಕಲ್ಪನೆಗಳನ್ನು ತೆಗೆದುಹಾಕುತ್ತೇವೆ. ಮೂರು ದಿನ ಸಮಯ ಕೊಡುತ್ತೇವೆ ನಮ್ಮ ಕಚೇರಿಯಲ್ಲಿಯೇ ಚರ್ಚಿಸಬಹುದು ಎಂದು ಗೃಹ ಸಚಿವ ಅಮಿತ್‌ ಶಾ ಈ ಹಿಂದೆ ಘೋಷಿಸಿದ್ದರು.

ಫೆಬ್ರವರಿ 14, ಶುಕ್ರವಾರ: ಈ ಕುರಿತು ಅವರಿಗೆ ಇಮೇಲ್‌ ಮೂಲಕ ಪತ್ರ ಬರೆದಿರುವ ಗೋಪಿನಾಥನ್‌, ಚರ್ಚೆಗೆ ಬರುತ್ತೇನೆ, ಸಮಯ ತಿಳಿಸಿ ಎಂದು ಮನವಿ ಮಾಡಿದ್ದರು.

ಫೆಬ್ರವರಿ 17, ಸೋಮವಾರ: “ಮೂರು ದಿನಗಳ ಗಡುವು ಮುಗಿದಿದೆ ಆದರೆ ಸಚಿವರು ನನ್ನ ಮೇಲ್‌ಗೆ ಇನ್ನೂ ಪ್ರತಿಕ್ರಿಯಿಸಿಲ್ಲ” ಎಂದು ಗೋಪಿನಾಥನ್ ತಿಳಿಸಿದ್ದಾರೆ.

ಸಿಎಎ ಬಗ್ಗೆ ಚರ್ಚಿಸಲು ‘ಮೂರು ದಿನಗಳಲ್ಲಿ’ ಯಾರಿಗಾದರೂ ಸಮಯ ನೀಡುತ್ತೇನೆ ಎಂದು ಅಮಿತ್ ಶಾ ಹೇಳಿದ್ದರು. ಈಗ ಐದು ದಿನಗಳು ಕಳೆದಿವೆ ಮತ್ತು ಅಮಿತ್ ಶಾ ಇನ್ನೂ ತಮ್ಮ ಭರವಸೆಯನ್ನು ಉಳಿಸಿಕೊಂಡಿಲ್ಲ ಎಂದು ಗೋಪಿನಾಥನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಷಾ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಸಿಗದ ನಂತರ, ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿ “ಮೂರು ದಿನಗಳು ಮುಗಿದಿವೆ. ಯಾವುದೇ ಪ್ರತಿಕ್ರಿಯೆ ಇಲ್ಲ. ಅಮಿತ್‌ಶಾ ಅವರ ಮಾತುಗಳಿಗೆ ಯಾವುದೇ ಬೆಲೆ ನೀಡಬಾರದು. ಅವರನ್ನು ಬ್ಲಫ್ ಎಂದು ಕರೆಯಬೇಕಾಗುತ್ತದೆ. ಒಂದು ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸಿರುವಾಗ ಟಿವಿಯಲ್ಲಿ ಕೂತು ಬಾಯಿಗೆ ಬಂದಹಾಗೆ ಮಾತನಾಡಬಾರದು. ನಾನು ಮತ್ತೆ ನಿಮಗೆ ನೆನಪಿಸಿ ತೊಂದರೆ ಕೊಡುವುದಿಲ್ಲ ಚಿಂತಿಸಬೇಡಿ. ಆದರೆ ದಯವಿಟ್ಟು ಇದನ್ನು ಪ್ರಜಾಪ್ರಭುತ್ವದ ಪಾಠ ಎಂದು ತೆಗೆದುಕೊಳ್ಳಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...