Homeಕರ್ನಾಟಕಜಾತಿ ಗಣತಿ ವರದಿ ಕುರಿತ ಚರ್ಚೆ ಅಪೂರ್ಣ: ಮೇ 2ಕ್ಕೆ ಅಂತಿಮ ನಿರ್ಧಾರ; ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ವರದಿ ಕುರಿತ ಚರ್ಚೆ ಅಪೂರ್ಣ: ಮೇ 2ಕ್ಕೆ ಅಂತಿಮ ನಿರ್ಧಾರ; ಸಿಎಂ ಸಿದ್ದರಾಮಯ್ಯ

- Advertisement -
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರದಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತ ವಿಶೇಷ ಸಂಪುಟ ಸಭೆಯಲ್ಲಿ ಜನ ಗಣತಿ ಕುರಿತ ಚರ್ಚೆ ಅಪೂರ್ಣವಾಗಿದೆ. ಮೇ 2ರಂದು ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ ಎಂದಿದ್ದಾರೆ.
ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ. ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ವರದಿ ಮಂಡನೆಯಾಗಿ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ರಾಷ್ಟ್ರಪತಿಗೆ ನಿರ್ದೇಶನ ನೀಡುವಂತಿಲ್ಲ | ಸುಪ್ರೀಂಕೋರ್ಟ್‌ ವಿರುದ್ಧ ಉಪ ರಾಷ್ಟ್ರಪತಿ ವಾಗ್ದಾಳಿ

- Advertisement -

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...