Homeಮುಖಪುಟಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

- Advertisement -
- Advertisement -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ (ಫೆ.15) ತಿಳಿಸಿದ್ದಾರೆ.

ಅಧಿವೇಶನದ ಮೊದಲ ಭಾಗದಲ್ಲಿ ಕಂಡುಬಂದಂತೆ ವಿರೋಧ ಪಕ್ಷಗಳು ಪ್ರತಿಭಟನೆಗಳನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೇ ಸಮಸ್ಯೆಯಾಗಲಿದೆ ಎಂದು ರಿಜಿಜು ಹೇಳಿದ್ದಾರೆ.

ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಭಾಗವು ಆಸಕ್ತಿದಾಯಕವಾಗಿರುತ್ತದೆ. ಹಲವಾರು ಪ್ರಮುಖ ಮಸೂದೆಗಳು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ ಎಂದು ರಿಜಿಜು ತಿಳಿಸಿದ್ದಾರೆ.

ಬಜೆಟ್ ಅಧಿವೇಶನವು ಜನವರಿ 28ರಂದು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುವುದರೊಂದಿಗೆ ಪ್ರಾರಂಭಗೊಂಡಿದ್ದು, ಫೆಬ್ರವರಿ 12 ರಂದು ಮೊದಲ ಹಂತದ ಕಲಾಪಗಳು ಮುಕ್ತಾಯಗೊಂಡಿದೆ. ಎರಡನೇ ಹಂತಹ ಕಲಾಪಗಳು ಮಾರ್ಚ್ 9ರಂದು ಪ್ರಾರಂಭಗೊಂಡು ಏಪ್ರಿಲ್ 2ರಂದು ಕೊನೆಗೊಳ್ಳಲಿದೆ. ಈ ನಡುವೆ ಫೆಬ್ರವರಿ 1ರಂದು 2026-27ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಿದೆ.

ತಮ್ಮ ಲೋಕಸಭಾ ಕ್ಷೇತ್ರವಾದ ಅರುಣಾಚಲ ಪಶ್ಚಿಮಕ್ಕೆ ಭೇಟಿ ನೀಡಿರುವ ರಿಜಿಜು, ಅಧಿವೇಶನದ ಎರಡನೇ ಭಾಗದಲ್ಲಿ ಚರ್ಚೆಗಾಗಿ ನಿರ್ದಿಷ್ಟ ಸಚಿವಾಲಯಗಳನ್ನು ಗುರುತಿಸಲು ಸರ್ಕಾರ ಯೋಜಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ, ನಾವು ಐದು ಸಚಿವಾಲಯಗಳಲ್ಲಿನ ಅನುದಾನದ ಬೇಡಿಕೆಗಳನ್ನು ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಇತರ ಐದು ಸಚಿವಾಲಯಗಳ ಕೆಲಸದ ಬಗ್ಗೆ ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಅನುದಾನದ ಬೇಡಿಕೆಗಳ ಮೇಲೆ ಅಲ್ಲ, ಸಚಿವಾಲಯಗಳ ಮೇಲಿನ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಚರ್ಚೆಗೆ ಐದು ಸಚಿವಾಲಯಗಳನ್ನು ಮತ್ತು ನಂತರ ಲೋಕಸಭೆಗೆ ಐದು ಸಚಿವಾಲಯಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಬಜೆಟ್ ಅಧಿವೇಶನದ ಎರಡನೇ ಭಾಗವು ಕುತೂಹಲಕಾರಿಯಾಗಿರಲಿದೆ. ಒಂದು ವೇಳೆ ಪ್ರತಿಪಕ್ಷಗಳು ಸದನ ನಡೆಯಲು ಬಿಡದಿದ್ದರೆ, ನಾವು ಗಿಲೋಟಿನ್ (ಚರ್ಚೆಯಿಲ್ಲದೆ ಅನುದಾನದ ಬೇಡಿಕೆಗಳಿಗೆ ಅನುಮೋದನೆ ಪಡೆಯುವ ಪ್ರಕ್ರಿಯೆ) ಮೊರೆ ಹೋಗುತ್ತೇವೆ. ಇದು ಅವರಿಗೆ ಆಗುವ ನಷ್ಟ ಎಂದಿದ್ದಾರೆ.

ಬಜೆಟ್ ಅಧಿವೇಶನದ ಈ ಭಾಗವು ಏಕೆ ವಿಶೇಷವಾಗಿ ಕುತೂಹಲಕಾರಿಯಾಗಿರಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಜಿಜು, “ಇದು ನಾಲ್ಕು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ, ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಮುಂಬರುವ ವಿಧಾನಸಭಾ ಚುನಾವಣೆಗಳ ಸಮಯದಲ್ಲೇ ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ.

“ನಾವು ಒಂದು ಅತ್ಯಂತ ನಿರ್ಣಾಯಕ ವಿಧೇಯಕ ಸೇರಿದಂತೆ ಕೆಲವು ಪ್ರಮುಖ ವಿಧೇಯಕಗಳನ್ನು ಮಂಡಿಸಲಿದ್ದೇವೆ. ಆ ವಿಧೇಯಕ ಯಾವುದು ಎಂಬುದನ್ನು ನಾವು ಈಗ ಬಹಿರಂಗಪಡಿಸುವುದಿಲ್ಲ, ಆದರೆ ಅಧಿವೇಶನದ ಎರಡನೇ ಭಾಗದಲ್ಲಿ ಒಂದು ಅತಿ ಮುಖ್ಯವಾದ ವ್ಯವಹಾರವನ್ನು ಕೈಗೆತ್ತಿಕೊಳ್ಳಲಿದ್ದೇವೆ. ನಾವು ಈ ಎಲ್ಲಾ ವಿಧೇಯಕಗಳಿಗೆ ಅಂಗೀಕಾರ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಧಿವೇಶನದ ಎರಡನೇ ಭಾಗದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಾದ ವಿಧೇಯಕವನ್ನು ಮಂಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಮಸೂದೆಯನ್ನು ಪರಿಶೀಲಿಸಲು ರಚಿಸಲಾದ ಸಂಸದೀಯ ಸಮಿತಿಯು ತನ್ನ ವರದಿಯನ್ನು ಇನ್ನೂ ಅಂತಿಮಗೊಳಿಸದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳು ಚರ್ಚೆಯಲ್ಲಿ ಪಾಲ್ಗೊಳ್ಳದಿದ್ದರೆ ಅದು ಅವರಿಗೇ ನಷ್ಟ ಎಂದಿದ್ದಾರೆ.

ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಮೂಡಿರಬಹುದು ಎಂದ ರಿಜಿಜು, ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಹಿ ಮಾಡಿಲ್ಲ ಎಂದು ತಿಳಿಸಿದರು. ಹೆಚ್ಚಿನ ಸಣ್ಣ ಪಕ್ಷಗಳಿಗೆ ಸದನದ ಕಲಾಪವನ್ನು ಸ್ಥಗಿತಗೊಳಿಸುವುದು ಇಷ್ಟವಿಲ್ಲ. ವಿಶೇಷವಾಗಿ ವಿಧಾನಸಭಾ ಚುನಾವಣೆಗಳು ಹತ್ತಿರವಿರುವುದರಿಂದ, ತಮ್ಮ ಭಾಗದ ಸಮಸ್ಯೆಗಳನ್ನು ಸದನದಲ್ಲಿ ಎತ್ತಲು ಅವು ಉತ್ಸುಕವಾಗಿವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...