Homeಕರ್ನಾಟಕಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: HD ಕುಮಾರಸ್ವಾಮಿ ಭರವಸೆ

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಬಿಡದಿಯಲ್ಲಿ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಅಧ್ಯಕ್ಷೆ ಎಸ್. ವರಲಕ್ಷ್ಮೀ ಮತ್ತು ಇತರ ನಾಯಕರು ಸಲ್ಲಿಸಿದ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನ: ಪ್ರಿಯಾಂಕಾ ಗಾಂಧಿ ಭರವಸೆ

ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದುಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ ಅಸಂಖ್ಯಾತ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆಂದು ಕುಮಾರಸ್ವಾಮಿ ಹೇಳಿದ್ದಾರೆ.

ಸರಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರನ್ನು ನಿರ್ಲಕ್ಷ್ಯ ಮಾಡುವುದು ಬೇಡ. ಅವರ ಗೌರವ ಧನ ಹೆಚ್ಚಳ ಮಾಡುವುದರ ಜತೆಗೆ, ಎನ್‌‌ಪಿಎಸ್‌ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕೆ ಅಗತ್ಯವಾದ 339.49 ಲಕ್ಷ ರೂ.ಗಳನ್ನು ಬಜೆಟ್‌‌ನಲ್ಲಿ ತೆಗೆದಿರಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳು, ಗರ್ಭಿಣಿಯರಿಗಾಗಿ ನಿತ್ಯ 18 ಕಿಮೀ ಸಂಚರಿಸುವ ಅಂಗನವಾಡಿ ಕಾರ್ಯಕರ್ತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...