Homeಮುಖಪುಟಮತ್ತೆ ಮುನ್ನೆಲೆಗೆ ಬಂದ ದಿಶಾ ಸಾಲಿಯಾನ್ ಪ್ರಕರಣ: ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಆಗ್ರಹ

ಮತ್ತೆ ಮುನ್ನೆಲೆಗೆ ಬಂದ ದಿಶಾ ಸಾಲಿಯಾನ್ ಪ್ರಕರಣ: ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಆಗ್ರಹ

- Advertisement -
- Advertisement -

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಕೆಯ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದರಿಂದ ದಿಶಾ ಸಾಲಿಯಾನ್ ಸಾವನ್ನಪ್ಪಿ ಸುಮಾರು 5 ವರ್ಷಗಳ ಬಳಿಕ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಕಾಳಕಗಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿಯ ಸದಸ್ಯರು ಗುರುವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ದಿಶಾ ಸಾಲಿಯಾನ್ ಸಾವಿನ ವಿಚಾರವನ್ನು ಪ್ರಸ್ತಾಪಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಮಹಾಯುತಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗಿಳಿದು ದಿಶಾ ಸಾವಿನ ತನಿಖೆಗೆ ಒತ್ತಾಯಿಸಿದರು. ಗೃಹ ಖಾತೆ ಸಚಿವ ಯೋಗೇಶ್ ಕದಮ್ ಅವರು, ಪ್ರಕರಣದ ಎಸ್‌ಐಟಿ ತನಿಖೆ ಇನ್ನೂ ಮುಂದುವರೆದಿದೆ ಮತ್ತು ದಿಶಾ ಸಾಲಿಯಾನ್ ಅವರ ತಂದೆ ರಾಜ್ಯ ಸರ್ಕಾರವನ್ನು ತಮ್ಮ ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.

“ನಾವು ನ್ಯಾಯಾಲಯದ ಆದೇಶದಂತೆ ಕಾರ್ಯನಿರ್ವಹಿಸುತ್ತೇವೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಬಿಡುವುದಿಲ್ಲ” ಎಂದರು.

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ, ಜೂನ್ 8,2020 ರಂದು ಮುಂಬೈ ಉಪನಗರದ ಮಲಾಡ್‌ನಲ್ಲಿರುವ ಬಹುಮಹಡಿ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ಪೊಲೀಸರು ಇದು ಆಕಸ್ಮಿಕ ಸಾವು ಎಂದು ವರದಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, “ಸಿಐಡಿ ತನಿಖೆಯಲ್ಲಿ ಆದಿತ್ಯ ಠಾಕ್ರೆಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಕಂಡುಬಂದಿಲ್ಲ. ಆದರೂ, ಬಿಜೆಪಿ ನಮ್ಮ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಮಾನಹಾನಿ ಮಾಡುತ್ತಿದೆ. ಆದಿತ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಿರುವಾಗ, ಅವರು ಏಕೆ ಭಯಪಡಬೇಕು? ನಾವು ಯಾವುದೇ ತನಿಖೆಗೆ ಮುಕ್ತರಾಗಿದ್ದೇವೆ” ಎಂದಿದ್ದಾರೆ.

“ನಾಗ್ಪುರ ಹಿಂಸಾಚಾರದಲ್ಲಿ ಬಿಜೆಪಿ ನಾಯಕರ ಬೆರಳುಗಳು ಸುಟ್ಟುಹೋಗಿವೆ. ಆದ್ದರಿಂದ ದಿಶಾ ಸಾಲಿಯಾನ್ ವಿಷಯವನ್ನು ಉದ್ದೇಶಪೂರ್ವಕವಾಗಿ ಕೆಣಕಲಾಗಿದೆ” ಎಂದು ಹೇಳಿದ್ದಾರೆ.

“ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದ್ದರಿಂದ, ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಆದಿತ್ಯ ಠಾಕ್ರೆ ತಿಳಿಸಿದ್ದಾರೆ.

“ಜೂನ್ 8, 2020ರಂದು ದಿಶಾ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜಿಸಿದ್ದರು. ಅದರಲ್ಲಿ ಆದಿತ್ಯ ಠಾಕ್ರೆ, ನಟರಾದ ಸೂರಜ್ ಪಾಂಚೋಲಿ ಮತ್ತು ಡಿನೋ ಮೋರಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ದಿಶಾ ಮೇಲೆ ‘ಸಾಮೂಹಿಕ ಅತ್ಯಾಚಾರ’ ಎಸಗಲಾಗಿದೆ. ಆಕೆಯನ್ನು ಬಂಧಿಸಿಟ್ಟು ಕ್ರೂರ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ” ಎಂದು ದಿಶಾ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಒಡಿಶಾ| ಇನ್ನೂರು ರೂಪಾಯಿಗೆ ಮೊಮ್ಮಗನನ್ನು ಮಾರಾಟ ಮಾಡಿದ ವೃದ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...