Homeಮುಖಪುಟದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್ 2020ರಲ್ಲಿ ಮುಂಬೈನ ಉಪನಗರ ಮಲಾಡ್‌ನ ಬಹುಮಹಡಿ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಅವರು ನಿಗೂಢವಾಗಿ ಮೃತಪಟ್ಟಿದ್ದರು.

ದಿಶಾ ಸಾಲಿಯಾನ್ ಅವರ ತಂದೆ ಸತೀಶ್ ಸಾಲಿಯಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಾರಂಗ್ ಕೋತ್ವಾಲ್ ಮತ್ತು ನ್ಯಾಯಮೂರ್ತಿ ರಂಜಿತ್‌ಸಿನ್ಹಾ ಭೋಂಸ್ಲೆ ಅವರಿದ್ದ ವಿಭಾಗೀಯ ಪೀಠ, ಈ ಪ್ರಕರಣದ ತನಿಖೆಯನ್ನು ಕೈಗೊಳ್ಳಲು ಒಬ್ಬ ಹಿರಿಯ ಮತ್ತು ಅನುಭವಿ ಅಧಿಕಾರಿಯನ್ನು ನೇಮಿಸುವಂತೆ ಸಿಬಿಐಗೆ ಆದೇಶಿಸಿದೆ.

ಆದಾಗ್ಯೂ, ತನಿಖಾಧಿಕಾರಿಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಾದ ಅಥವಾ ಅಗತ್ಯ ಸಾಕ್ಷ್ಯಾಧಾರಗಳು ಸಿಗುವವರೆಗೆ, ಯಾರನ್ನೂ ಆರೋಪಿ ಎಂದು ಪರಿಗಣಿಸಬಾರದು ಎಂದು ಹೈಕೋರ್ಟ್ ಇದೇ ವೇಳೆ ಎಚ್ಚರಿಕೆ ನೀಡಿದೆ.

ಪ್ರಕರಣದಲ್ಲಿ ಕಾಗ್ನಿಸಬಲ್ ಅಫೆನ್ಸ್ ಕಂಡುಬಂದಲ್ಲಿ, ತನಿಖಾಧಿಕಾರಿಯು ಆದಷ್ಟು ಬೇಗ ದೋಷಾರೋಪಣೆ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಒಂದು ವೇಳೆ ಯಾವುದೇ ಕಾಗ್ನಿಸಬಲ್ ಅಫೆನ್ಸ್ ಸಾಬೀತಾಗದಿದ್ದರೆ, ಸಂಬಂಧಪಟ್ಟ ಸಕ್ಷಮ ನ್ಯಾಯಾಲಯದ ಮುಂದೆ ಸೂಕ್ತ ಕ್ಲೋಸರ್ ವರದಿಯನ್ನು (ಪ್ರಕರಣ ಮುಕ್ತಾಯದ ವರದಿ) ಸಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಇಂತಹ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ ಆಕ್ಷೇಪಣಾ ಅರ್ಜಿ ಸಲ್ಲಿಸಲು ದಿಶಾ ಅವರ ತಂದೆಗೆ ಮುಕ್ತ ಸ್ವಾತಂತ್ರ್ಯವನ್ನು ನೀಡಿದ್ದಾರೆ.

ತಮ್ಮ ಮಗಳ ಹಠಾತ್ ಸಾವು ಕೇವಲ ಆತ್ಮಹತ್ಯೆಯಲ್ಲ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪ್ರತಿಪಾದಿಸಿದ್ದ ತಂದೆ ಸತೀಶ್ ಸಾಲಿಯಾನ್ ಅವರು, ಈ ಘಟನೆಗೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಂತೆ ಕೋರಿ ಕಳೆದ ವರ್ಷವೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆದಾಗ್ಯೂ, ದಿಶಾ ಸಾಲಿಯಾನ್ ಅವರು ಬಹುಮಹಡಿ ಕಟ್ಟಡದಿಂದ ಬಿದ್ದೇ ಮೃತಪಟ್ಟಿದ್ದಾರೆ ಎಂದು ಮುಂಬೈ ಪೊಲೀಸರು ತಮ್ಮ ವಾದವನ್ನು ಮುಂದುವರಿಸಿದ್ದರು.

ಸತೀಶ್ ಸಾಲಿಯಾನ್ ಪರ ಹಾಜರಾಗಿದ್ದ ವಕೀಲ ನಿಲೇಶ್ ಓಜಾ ಅವರು ವಾದ ಮಂಡಿಸಿ, ಮುಂಬೈ ಪೊಲೀಸರು ದಿಶಾ ಅವರ ಮರಣೋತ್ತರ ಪರೀಕ್ಷೆಯ (ಪೋಸ್ಟ್‌ಮಾರ್ಟಮ್) ವರದಿಯನ್ನು ಅವರ ತಂದೆಯೊಂದಿಗೆ ಹಂಚಿಕೊಂಡಿಲ್ಲ ಮತ್ತು ಅವರು ಹೈಕೋರ್ಟ್ ಮೆಟ್ಟಿಲೇರಿದ ಐದು ವರ್ಷಗಳ ನಂತರವಷ್ಟೇ ಅದನ್ನು ನೀಡಲಾಗಿದೆ ಎಂದು ಆರೋಪಿಸಿದ್ದರು. ಇದರೊಂದಿಗೆ, ತಂದೆ ನೀಡಿದ್ದ ದೂರಿನಲ್ಲಿದ್ದ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಮತ್ತು ಇತರರ ಹೆಸರುಗಳ ವಿರುದ್ಧ ಪೊಲೀಸರು ಇದುವರೆಗೆ ಏಕೆ ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಎಂಬ ಪ್ರಶ್ನೆಯನ್ನೂ ಅವರು ಇದೇ ವೇಳೆ ಎತ್ತಿದ್ದರು.

ಮತ್ತೊಂದೆಡೆ, ಮಹಾರಾಷ್ಟ್ರ ಸರ್ಕಾರ ಮತ್ತು ಮುಂಬೈ ಪೊಲೀಸರು ದಿಶಾ ಸಾಲಿಯಾನ್ ಸಾವು ಪ್ರಕರಣದಲ್ಲಿ ಯಾರನ್ನೂ ಆರೋಪಿಗಳನ್ನಾಗಿ ಮಾಡಲು ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಮುಖ್ಯ ಸರ್ಕಾರಿ ಅಭಿಯೋಜಕ (ಚೀಫ್ ಪಬ್ಲಿಕ್ ಪ್ರಾಸಿಕ್ಯೂಟರ್) ಶಿಶಿರ್ ಹಿರೇ ಅವರು ವಾದ ಮಂಡಿಸಿ, ದಿಶಾ ಸಾಲಿಯಾನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಥವಾ ಸದರಿ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ ಎಂಬುದನ್ನು ಲಭ್ಯವಿರುವ ಸಾಕ್ಷ್ಯಗಳು ಸೂಚಿಸುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದಿಶಾ ಅವರ ತಂದೆ ಸತೀಶ್ ಮತ್ತು ಅವರ ಪತ್ನಿ ಇಬ್ಬರೂ ಪೊಲೀಸರ ಮುಂದೆ ಒಂದಕ್ಕಿಂತ ಹೆಚ್ಚು ಬಾರಿ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಆದರೂ ಆ ಸಮಯದಲ್ಲಿ ಅವರು ಯಾರ ಮೇಲೆಯೂ ಏಕೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಸರ್ಕಾರಿ ಅಭಿಯೋಜಕ ಶಿಶಿರ್ ಹಿರೇ ಅವರು ಪ್ರಶ್ನಿಸಿದ್ದಾರೆ.

ಈಗ ಆಧಾರಗಳ ಮೇರೆಗೆ ತಂದೆ ಈಗ ತನ್ನ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ, ಲಲಿತಾ ಕುಮಾರಿ ತೀರ್ಪಿಗೆ (Lalita Kumari judgment) ಬದ್ಧವಾಗಿ ಪೊಲೀಸರು ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ ಎಂದು ವಾದಿಸಿದ್ದಾರೆ.

ಆದರೆ ಆದಿತ್ಯ ಠಾಕ್ರೆ ಪರ ಹಾಜರಾಗಿದ್ದ ಹಿರಿಯ ವಕೀಲ ಸುದೀಪ್ ಪಾಸ್ಬೋಲಾ ಅವರು, ಈ ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದು, ಪ್ರಸ್ತುತ ನಡೆಯುತ್ತಿರುವ ಈ ಎಲ್ಲಾ ಕಾನೂನು ಪ್ರಕ್ರಿಯೆಗಳು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿವೆ ಎಂದು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಮೌಖಿಕವಾಗಿ ಪ್ರತಿಕ್ರಿಯಿಸಿ, ತಂದೆ ಮಾಡಿರುವ ಆರೋಪಗಳು ನಿಜವಿರಬಹುದು ಅಥವಾ ಸುಳ್ಳಾಗಿರಬಹುದು, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಿ ಆಕೆಯ ಸಾವಿನ ಕುರಿತು ಕುಟುಂಬಕ್ಕೆ ಅಂತಿಮ ಕ್ಲೋಸರ್ (ವರದಿ) ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಶೇಷವಾಗಿ ಪೊಲೀಸರು ಸುಮಾರು ಐದರಿಂದ ಆರು ವರ್ಷಗಳ ಕಾಲ ಎಡಿಆರ್ (ಅಸ್ವಾಭಾವಿಕ ಸಾವು ವರದಿ – ADR) ಅಡಿಯಲ್ಲಿ ತನಿಖೆಯನ್ನು ಮುಂದುವರಿಸಿದ್ದನ್ನು ಗಮನಿಸಿದರೆ, ಈ ಕ್ರಮ ಅನಿವಾರ್ಯವಾಗಿತ್ತು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಸರ್ಕಾರಿ ಅಭಿಯೋಜಕ ಶಿಶಿರ್ ಹಿರೇ ಅವರು ಸ್ಪಷ್ಟನೆ ನೀಡಿ, ಅಸ್ವಾಭಾವಿಕ ಸಾವು ವರದಿಯನ್ನು ಅಕ್ಟೋಬರ್ 2020ರಲ್ಲೇ ಮುಚ್ಚಲಾಗಿತ್ತು ಮತ್ತು ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಮಾಜಿಕ ಜಾಲತಾಣಗಳ ಆರೋಪಗಳ ಹಿನ್ನೆಲೆಯಲ್ಲಿ ಮರುತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹೆಚ್ಚಿನ ತನಿಖೆಯಲ್ಲೂ ಸಹ ಕೊಲೆ ಆರೋಪ ಹೊರಿಸಲು ಯಾವುದೇ ಬಲವಾದ ಪುರಾವೆಗಳು ಲಭ್ಯವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...