Homeಕರ್ನಾಟಕಮರ್ಯಾದೆಗೇಡು ಹತ್ಯೆ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳ ಕತ್ತು ಕೊಯ್ದು ಬರ್ಬರ ಹತ್ಯೆಗೈದ ತಂದೆ

ಮರ್ಯಾದೆಗೇಡು ಹತ್ಯೆ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳ ಕತ್ತು ಕೊಯ್ದು ಬರ್ಬರ ಹತ್ಯೆಗೈದ ತಂದೆ

- Advertisement -
- Advertisement -

ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ತಂದೆಯೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಮರ್ಯಾದೆಗೇಡು ಕೃತ್ಯ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.

ಬಿದಲೂರು ಗ್ರಾಮದ ಕವನ (20) ಮೃತ ಯುವತಿ ಎಂದು ಗುರುತಿಸಲಾಗಿದೆ. ತಂದೆ ಮಂಜುನಾಥ್ ಎಂಬುವರು ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ.

ರಾತ್ರಿ ಮಲಗಿದ್ದ ವೇಳೆ‌ ಮಗಳ‌ ಕತ್ತು ಕೊಯ್ದು, ಕಟ್ಟಿಗೆಯಿಂದ ತಲೆಗೆ ಹೊಡೆದು ಭೀಕರವಾಗಿ ಮಗಳ ಕೊಲೆ ಮಾಡಿದ್ದಾರೆ. ಮಗಳು ಅನ್ಯ ಜಾತಿ ಯುವಕನನ್ನ ಪ್ರೀತಿ ಮಾಡುತ್ತಿದ್ದಾಳೆ ಎನ್ನುವ ಕಾರಣಕ್ಕೆ ಈ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಮಗಳನ್ನು ಕೊಲೆ ಮಾಡಿದ ನಂತರ ಪೊಲೀಸ್ ಠಾಣೆಗೆ ಬಂದ ತಂದೆ ಮಂಜುನಾಥ್ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಮಂಜುನಾಥ್ ಅವರ ಇಬ್ಬರು ಪುತ್ರಿಯರು ಪ್ರೀತಿಯಲ್ಲಿ ಬಿದ್ದಿದ್ದರು. ಕಳೆದ ಮಂಗಳವಾರವಷ್ಟೇ ಇವರ ಕಿರಿಯ ಮಗಳ ಪ್ರೀತಿಯ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಠಾಣೆಯಲ್ಲಿ ಪ್ರೀತಿಸಿದವನ ಜೊತೆ ಹೋಗೋದಾಗಿ ಕಿರಿ ಮಗಳು ಹೇಳಿದ್ದಳು. ಹೀಗಾಗಿ ಪೊಲೀಸರು ಮಂಜುನಾಥ್​ ಅವರ ಕಿರಿ ಮಗಳನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಕೊಟ್ಟಿದ್ದರು.

ಇದೀಗ ಹಿರಿ‌ಯ ಮಗಳು ಸಹ ಪ್ರೀತಿ ಮಾಡುತ್ತಿರುವ ವಿಚಾರ ತಂದೆಗೆ ತಿಳಿದಿದೆ. ಹೀಗಾಗಿ ಇಬ್ಬರ ನಡುವೆ ನಿನ್ನೆ ರಾತ್ರಿ ಜಗಳವಾಗಿದೆ. ಆ ಬಳಿಕ ರಾತ್ರಿ ಹೊತ್ತು ಮಲಗಿದ್ದ ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಇನ್ನು ಮಂಜುನಾಥ್​ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿ ತಂದೆ ಕೋಳಿ ಕೊಯ್ಯುವ ಚಾಕುವಿನಿಂದಲೇ ಮಗಳ ಕತ್ತು ಕೊಯ್ದು ಭೀಕರ ಕೊಲೆ ಮಾಡಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.

ಈ ಘಟನೆ ಕುರಿತು ವಿಶ್ವನಾಥಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಮೃತದೇಹವನ್ನು ಮಂಜುನಾಥ್​ ಸಂಬಂಧಿಕರಿಗೆ ಹಸ್ತಾಂತರಿಸಲಿದ್ದಾರೆ. ಸದ್ಯ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿರುವ ಆರೋಪಿ ಮಂಜನಾಥ್​ ವಿಚಾರಣೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಇನ್ನು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...