Homeಕರೋನಾ ತಲ್ಲಣಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ಔಷಧಿ ಸಿಂಪಡಣೆ ಮಾಡುವುದು ಮನುಷ್ಯನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ .ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ತಿಳಿಸಿದೆ.

- Advertisement -
- Advertisement -

ಮಾನವರ ಮೇಲೆ ಪೈಪುಗಳ ಮೂಲಕ, ವಾಕ್-ಇನ್ ಸುರಂಗಮಾರ್ಗಗಳ ಮೂಲಕ ಸೋಂಕು ನಿವಾರಕ ಸಿಂಪಡಿಸುವುದನ್ನು ಎಲ್ಲೂ ಶಿಫಾರಸು ಮಾಡಲಾಗಿಲ್ಲ. ಆದರೂ ಎಲ್ಲಾ ಕಡೆ ಅವುಗಳನ್ನು ಸ್ಥಾಪಿಸಿದ್ದರೂ ಸಹ ನೀವು ಏಕೆ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಹೀಗೆ ಔಷಧಿ ಸಿಂಪಡಣೆ ಮಾಡುವುದು ಮನುಷ್ಯನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ .ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ತಿಳಿಸಿದೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಸೋಂಕು ನಿವಾರಕ ಔಷಧಿಯನ್ನು ಸಿಂಪಡಿಸಲಾಗಿತ್ತು. ಅಲ್ಲದೇ ಈಗ ಎಲ್ಲಾ ಕಚೇರಿಗಳು, ಕೆಲಸದ ಸ್ಥಳಗಳು, ರಸ್ತೆಗಳಲ್ಲಿ ಜನರ ಮೇಲೆ ಔಷಧಿ ಸಿಂಪಡಿಸಲಾಗುತ್ತಿದೆ.

ಸೋಂಕು ನಿವಾರಕ ಸಿಂಪಡಣೆ ನಿಲ್ಲುಸುವಂತೆ ಶೀಘ್ರದಲ್ಲೇ ಅಗತ್ಯ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂದು ಸಾಲಿಟರಿ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.

PC: Deccan Herald

ಸೋಂಕುನಿವಾರಕಕ್ಕಾಗಿ ರಾಸಾಯನಿಕ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸೇರಿ ಸೋಂಕುಗಳ ಸುರಂಗಗಳ ಬಳಕೆ, ಸ್ಥಾಪನೆ, ಉತ್ಪಾದನೆ, ಜಾಹೀರಾತುಗಳನ್ನು ನಿಷೇಧಿಸಲು ಕೋರಿರುವ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಪೀಠ ಈ ವಿಚಾರಗಳನ್ನು ಪ್ರಸ್ತಾಪಿಸಿದೆ.

ಇದನ್ನೂ ಓದಿ: ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ನ್ಯಾಯಾಲಯದ ನೋಟಿಸ್‌ಗೆ ಪ್ರತಿಕ್ರಿಯಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಫಿಡವಿಟ್‌ನಲ್ಲಿ, ವಾಕ್-ಇನ್ ಸುರಂಗಗಳ ಮೂಲಕ ಜನರು ಅಂತಹ ರಾಸಾಯನಿಕಗಳಿಗೆ ಒಡ್ಡಿಕೊಳ್ಳುತ್ತಾರೆ ಎಂಬ ವರದಿಗಳನ್ನು ಬಂದ ನಂತರ ಸಲಹಾ ಸಮಿತಿ ಜೊತೆಗೆ ಏಪ್ರಿಲ್ 8 ರಂದು ಸಭೆ ನಡೆಸಲಾಗಿದೆ. ಜೊತೆಗೆ ಮಾನವರ ಮೇಲೆ ಸೋಂಕು ನಿವಾರಕಗಳನ್ನು ಸಿಂಪಡಿಸುವುದನ್ನು ಯಾವುದೇ ಸಂದರ್ಭದಲ್ಲೂ ಶಿಫಾರಸು ಮಾಡುವುದಿಲ್ಲ ಮತ್ತು ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ಸಮಿತಿ ಹೇಳಿದೆ.

ರಾಸಾಯನಿಕಗಳು ಮಾನವನ ಚರ್ಮಕ್ಕೆ ಹಾನಿಕಾರಕ ಮತ್ತು ಉಸಿರಾಟದ ತೊಂದರೆಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಯಾವುದೇ  ರಾಸಾಯನಿಕ ಸೋಂಕು ನಿವಾರಕವನ್ನು ಬಾಹ್ಯವಾಗಿ ಸಿಂಪಡಿಸುವುದರಿಂದ ಮೊದಲೇ ವ್ಯಕ್ತಿಯ ದೇಹಕ ಪ್ರವೇಶಿಸಿದ ವೈರಸ್ ಅನ್ನು ಕೊಲ್ಲುವುದಿಲ್ಲ ಎಂದು ಸಮಿತಿ ಏಪ್ರಿಲ್ 18 ರಂದು ನೀಡಿದ ವರದಿಯನ್ನು ನ್ಯಾಯಾಲಯದಲ್ಲಿ ಸಚಿವಾಲಯ ಪ್ರಸ್ತುತಪಡಿಸಿತು.

ಆದರೂ ಎಲ್ಲೆಡೆ ಸೋಂಕು ನಿವಾರಕಗಳನ್ನು ಅಳವಡಿಸಲಾಗುತ್ತಿದೆ. ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.


ಇದನ್ನೂ ಓದಿ: ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...