HomeUncategorizedಚುನಾವಣೆ ಸೋಲು; ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಕಮಲ್ ನಾಥ್?

ಚುನಾವಣೆ ಸೋಲು; ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಕಮಲ್ ನಾಥ್?

- Advertisement -
- Advertisement -

2018ರಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 114 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಪಕ್ಷ, ಪಕ್ಷೇತರ ಶಾಸಕರ ಬೆಂಬಲ ಪಡೆದು ಸರ್ಕಾರ ರಚಿಸಿತ್ತು. ರಾಷ್ಟ್ರ ರಾಜಕಾರಣದಿಂದ ಮರಳಿದ್ದ ಕಮಲ್ ನಾಥ್ ಮುಖ್ಯಮಂತ್ರಿಯಾಗಿದ್ದರು. ಆದರೆ, ನಂತರದ ದಿನಗಳಲ್ಲಿ ನಡೆದ ಆಪರೇಷನ್ ಕಮಲಕ್ಕೆ ತುತ್ತಾಗಿ ಅಧಿಕಾರ ಕಳೆದುಕೊಳ್ಳಬೇಕಾಯಿತು. ಮರಳಿ ಅಧಿಕಾರ ಪಡೆಯುವ ಉಮೇದಿನಲ್ಲಿದ್ದ ಕಮಲ್ ನಾಥ್ ಅವರಿಗೆ 2023ರ ಚುನಾವಣಾ ಫಲಿತಾಂಶ ಆಘಾತ ನೀಡಿದ್ದು, ಕೇವಲ 66 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ಬಳಿಕ ಎಂಪಿಸಿಸಿ ಅಧ್ಯಕ್ಷ ಕಮಲ್ ನಾಥ್ ಅವರು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದೂ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಳೆದ ತಿಂಗಳು ರಾಜ್ಯದಲ್ಲಿ ಚುನಾವಣೆ ನಡೆದಿದ್ದು, ಭಾನುವಾರ ಮತ ಎಣಿಕೆ ನಡೆದಿತ್ತು. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ 116 ಮ್ಯಾಜಿಕ್ ಸಂಖ್ಯೆಯಾಗಿದೆ. ಬಿಜೆಪಿಯು 163 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತ ಪಡೆದರೆ, ಕಾಂಗ್ರೆಸ್ 66 ಸ್ಥಾನ ಗಳಿಸಿಕೊಳ್ಳುವುದಕ್ಕೆ ಏದುಸಿರು ಬಿಟ್ಟಿದೆ. ಈ ಎಲ್ಲ ಬೆಳವಣಿಗೆಗಳ ನಂತರ ಕಮಲ್ ನಾಥ್ ಇಂದು ಖರ್ಗೆ ಅವರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎನ್ನಲಾಗಿದೆ.

ಚುನಾವಣೆಗೂ ಮೊದಲು ಸೀಟು ಹಂಚಿಕೆ ಕುರಿತಂತೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಇಂಡಿಯಾ (I.N.D.I.A)) ಬ್ಲಾಕ್‌ನ ಅನೇಕ ನಾಯಕರ ವಿರುದ್ಧ ಕಮಲ್ ನಾಥ್ ನೀಡಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ವರಿಷ್ಠರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಚುನಾವಣಾ ಪೂರ್ವ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದ ಸಮಾಜವಾದಿ ಪಕ್ಷವು ಕೇವಲ ನಾಲ್ಕರಿಂದ ಆರು ಸ್ಥಾನಗಳನ್ನು ಮಾತ್ರ ಕೇಳಿತ್ತು. ಜೆಡಿಯು ಕೇವಲ ಒಂದು ಸ್ಥಾನವನ್ನು ಮಾತ್ರ ಕೇಳಿದ್ದರೂ ಕಮಲ್ ನಾಥ್ ಒಪ್ಪಿರಲಿಲ್ಲ ಎನ್ನಲಾಗಿದೆ. ಅವರ ಈ ನಡೆ ‘ಇಂಡಿಯಾ ಕೂಟ’ದ ನಾಯಕರನ್ನು ಕೆಣಕಿತ್ತು. ಜತೆಗೆ, ಚುನಾವಣೆ ಫಲಿತಾಂಶದ ನಂತರ ಕಮಲ್ ನಾಥ್ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗದೆ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದ ಬಗ್ಗೆಯೂ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ; ರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...