Homeಮುಖಪುಟಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಭಾರತದಲ್ಲಿ ನಾಪತ್ತೆಯಾದ ಎಂಟು ದಿನಗಳ ನಂತರ ಕೋಲ್ಕತ್ತಾ ಪೊಲೀಸರು ಅವರ ತುಂಡರಿಸಿದ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.

ಕೋಲ್ಕತ್ತಾ ಪೊಲೀಸರು ಹತ್ಯೆಯು ಪೂರ್ವ ನಿಯೋಜಿತ ಎಂದು ಹೇಳಿಕೊಂಡಿದ್ದಾರೆ. ಅನಾರ್ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಲಾಗಿದೆ, ಅವುಗಳಲ್ಲಿ ಕೆಲವನ್ನು ಕೋಲ್ಕತ್ತಾದ ನ್ಯೂ ಟೌನ್‌ನಲ್ಲಿರುವ ಸಂಜೀವ ಗಾರ್ಡನ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೃತದೇಹ ಸಿಕ್ಕ ಅಪಾರ್ಟ್‌ಮೆಂಟ್‌ ಅಬಕಾರಿ ಅಧಿಕಾರಿಗೆ ಸೇರಿದೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಝೀಂ ಅವರ ಮೃತದೇಹವನ್ನು ಕೋಲ್ಕತ್ತಾದಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ವಿಷಯದ ಬಗ್ಗೆ ನಮಗೆ ಇನ್ನೂ ಸಂಪೂರ್ಣವಾಗಿ ಮಾಹಿತಿ ಇಲ್ಲ. ನಮ್ಮ ಇನ್ಸ್‌ಪೆಕ್ಟರ್ ಜನರಲ್ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಎಲ್ಲವನ್ನೂ ದೃಢಪಡಿಸಿದ ನಂತರ ನಾನು ಮಾದ್ಯಮಗಳ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಮೃತ ಸಂಸದರ ಆಪ್ತ ಕಾರ್ಯದರ್ಶಿ ಅಬ್ದುರ್ ರೌಫ್, ಸಂಸದರ ಸಾವಿನ ಬಗ್ಗೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ, ಆದರೆ ಅವರ ಕುಟುಂಬವು ಭಾರತೀಯ ವೀಸಾ ಅನುಮೋದನೆಗಾಗಿ ಢಾಕಾದಲ್ಲಿ ಕಾಯುತ್ತಿದೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅವರು ಕೊಲ್ಕತ್ತಾ ಪೊಲೀಸರ ಜೊತೆ ಸಂಪರ್ಕದಲ್ಲಿದ್ದಾರೆ. ಕೊಲೆಯ ಬಗ್ಗೆ ಇನ್ನೂ ನಿರ್ದಿಷ್ಟ ಮಾಹಿತಿ ಇಲ್ಲ, ಕೊಲೆಯು ಚಿನ್ನ ಕಳ್ಳಸಾಗಣೆಯ ಭಾಗಿಯಾಗಿದೆಯೇ ಅಥವಾ ಇಲ್ಲವೇ ಎಂಬುವುದನ್ನು ತನಿಖೆ ನಡೆಸುತ್ತಿದ್ದೇವೆ ಎಂದು ಇನ್ಸ್‌ಪೆಕ್ಟರ್ ಜನರಲ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಬಂದ ನಂತರ ಸಂಸದ ಅನಾರ್ ಮೇ 13ರಿಂದ ಕಾಣೆಯಾಗಿದ್ದಾರೆ ಎಂದು ಈ ಮೊದಲು ಹೇಳಿಕೆ ಬಿಡುಗಡೆ ಮಾಡಿದ್ದರು. ಅನ್ವರುಲ್ ಅಝೀಂ ಅನಾರ್ ಮೇ 12ರಂದು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದ್ದು ಬಾರಾನಗರದಲ್ಲಿರುವ ತನ್ನ ಸ್ನೇಹಿತನ ಸ್ಥಳದಲ್ಲಿ ತಂಗಿದ್ದರು. ಮೇ 13ರಂದು ಅವರು ಯಾರನ್ನೋ ಭೇಟಿಯಾಗಲು ಹೋಗಿದ್ದರು, ಆದರೆ ಹಿಂತಿರುಗಲಿಲ್ಲ. ಈ ಬಗ್ಗೆ ಅವರ ಸ್ನೇಹಿತ ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಿದ್ದರು.

ಅನಾರ್ ಸಂಪರ್ಕಕ್ಕೆ ಸಿಗದ ಬಗ್ಗೆ ಅವರ ಕುಟುಂಬವು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮಾಹಿತಿ ನೀಡಿತ್ತು, ಅನಾರ್ ಪುತ್ರಿ ಮುಮ್ತಾರಿನ್ ಫಿರ್ದೌಸ್ ಢಾಕಾ ಮೆಟ್ರೋಪಾಲಿಟನ್ ಪೊಲೀಸರಿಗೆ ನಾಪತ್ತೆ ಬಗ್ಗೆ ದೂರು ನೀಡಿದ್ದರು.

ಇದನ್ನು ಓದಿ: ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ನಾಪತ್ತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...