Homeಕರ್ನಾಟಕಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಭಾರೀ ಅನಾಹುತಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರನ್ನು ಸಂಪುಟದಿಂದ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ನಾಡಿನ ಜನತೆಯ ಆಕ್ರೋಶದ ಬಳಿಕ ಬಹಳ ತಡವಾಗಿಯಾದರೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದ್ದೀರಿ. ಆದರೆ, ಈ ಸಮಿತಿ ಪಠ್ಯದೊಳಗೆ ತುರುಕಿರುವ ಸಂವಿಧಾನ ವಿರೋಧಿ ಮತ್ತು ಸಂಗತಿಗಳನ್ನು ಹಾಗೇ ಉಳಿಸಿಕೊಂಡಿದ್ದೀರಿ. ಜಾತಿ ಶ್ರೇಷ್ಠತೆಯ ವ್ಯಸನದ ಸಂಗತಿಗಳನ್ನು ಪಠ್ಯದೊಳಗೆ ಉಳಿಸಿಕೊಳ್ಳುವುದು ಹಾಗೂ ಪ್ರಧಾನವಾಗಿ ಒಂದು ಜಾತಿಯವರ ಬರಹಗಳನ್ನು, ವಿಚಾರಗಳನ್ನು ನಾಡಿನ ಮೇಲೆ ಹೇರಲು ಹೊರಟಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಅಗತ್ಯವಾದ ಬೌದ್ಧಿಕ ತಿಳಿವಳಿಕೆ ಮತ್ತು ಅರ್ಹತೆಗಳಿಲ್ಲದ, ಸಾಮಾಜಿಕ ತಾಣಗಳಲ್ಲಿ ಶೂದ್ರ-ದಲಿತ ಪರಂಪರೆ ಮತ್ತು ಸಂಸ್ಕೃತಿ ಬಗೆಗೆ ವಿಕೃತಿ ಕಾರಿಕೊಳ್ಳುವುದನ್ನೇ ಪಾಂಡಿತ್ಯ ಎಂದುಕೊಂಡಿರುವ ಹಾಗೂ ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗವಾಗಿ ಪೋಸ್ಟ್‌ಗಳನ್ನು ಹಾಕಿ ಅಸಹ್ಯ ಆಚರಿಸುತ್ತಿದ್ದ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿ ಸರ್ಕಾರ ಗಂಭೀರ ಅಪರಾಧ ಮಾಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಎನ್ನುವ ಸಾಲಿನಿಂದ “ಸಂವಿಧಾನ ಶಿಲ್ಪಿ” ಎನ್ನುವ ಪದಕ್ಕೆ ಕತ್ತರಿ ಹಾಕಲಾಗಿದೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಮನುವಾದಿ ವಿಕೃತ ರೋಗಿಷ್ಠರಿಗೆ ಮಾತ್ರ ಬಾಬಾಸಾಹೇಬರು ಕನಸಿನಲ್ಲೂ ದಿಗಿಲು ಬೀಳಿಸುತ್ತಾರೆ. ನಿಮ್ಮ ಸರ್ಕಾರಕ್ಕೆ ಇದನ್ನು ಕತ್ತರಿಸಿ ಹಾಕುವ ರೋಗ ಬಂದಿದೆ. ಜತೆಗೆ ಕನ್ನಡ ರಾಜ್ಯೋತ್ಸವದ ಕುರಿತ ಪಠ್ಯವನ್ನೂ ಕಿತ್ತುಹಾಕಿ ಬಿಜೆಪಿ ನಾಡದ್ರೋಹಿ ಪರಂಪರೆಯನ್ನು ಮುಂದುವರೆಸಿದೆ. ಇಂಥಾ ಅಸಹ್ಯದ ನೂರಾರು ಅಧ್ವಾನಗಳನ್ನು ಪಠ್ಯ ಪರಿಷ್ಕರಣ ಸಮಿತಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನೂರು ಮಹದೇವ, ಮೂಡ್ನಾಕೂಡು ಚಿನ್ನಸ್ವಾಮಿಯವರಂತಹ ಹಿರಿಯ ಬರಹಗಾರರು ತಮ್ಮ ತಕರಾರುಗಳನ್ನು ವ್ಯಕ್ತಪಡಿಸಿದಾಗ ಆ ತಕರಾರುಗಳನ್ನು ಕೇಳಿಸಿಕೊಳ್ಳುವ ಸೌಜನ್ಯವೂ ಇಲ್ಲದಂತೆ ಸರ್ಕಾರ ಮತ್ತು ಪಠ್ಯ ಪುಸ್ತಕ ಸಮಿತಿ ವಿಕೃತಿ ಮೆರೆದಿದೆ. ನಾಡಿನ ಹಿರಿಯ ಮಠಾಧೀಶರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದಾಗ ಅವರುಗಳ ಸಾತ್ವಿಕ ಸಿಟ್ಟನ್ನೂ ಲೇವಡಿ ಮಾಡುವ ರೀತಿಯಲ್ಲಿ ಸಚಿವರು ಮತ್ತು ಪಕ್ಷದ ಮುಖಂಡರಿಂದ ರಾಜಕೀಯ ಹೇಳಿಕೆ ಕೊಡಿಸಲಾಗಿದೆ. ಮಠಾಧೀಶರನ್ನು ಕಾಂಗ್ರೆಸ್ ವಕ್ತಾರರು ಎನ್ನುವ ಅರ್ಥ ಬರುವಂತೆ ಸಚಿವರುಗಳಿಂದ ಪರೋಕ್ಷ ಹೇಳಿಕೆ ಕೊಡಿಸಿ ಮಠ ಪರಂಪರೆಗೆ ಅವಮಾನ ಎಸಗಿದಂತೆ ಸರ್ಕಾರ ವರ್ತಿಸಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ನಮ್ಮ ನಾಡಗೀತೆಯು ಸರ್ಕಾರದ ಅಧಿಕೃತ ಗುರುತು. ನಾಡಿನ ಸಾರ್ವಭೌಮತೆಯ ಸಂಕೇತ. ಇಂತಹ ಗುರುತರವಾದ ಸಂಗತಿಗೆ ಅವಮಾನ ಮಾಡಿರುವ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಅಕ್ಷಮ್ಯ. ಈತನ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎನ್ನುವ ನಾಡಿನ ಜನತೆಯ, ಲೇಖಕ-ಬರಹಗಾರರ ಮತ್ತು ಸ್ವಾಮೀಜಿಗಳ ಆಗ್ರಹವನ್ನು ಸರ್ಕಾರ ತಕ್ಷಣ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಡೆ ಹಿಡಿಯಬೇಕು. ಹಿಂದಿನ ಬರಗೂರು ಸಮಿತಿಯ ಪಠ್ಯಗಳನ್ನೇ ಈ ಸಾಲಿಗೂ ಮಕ್ಕಳಿಗೆ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಕೂಡಲೇ ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗಳಿಗೆ ನೇಮಿಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...