Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...