Homeಮುಖಪುಟಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

ಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

- Advertisement -
- Advertisement -

ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಲೋಕಸಭೆ ಸದಸ್ಯತ್ವವನ್ನು ಸಂಸತ್ತಿನ ಕೆಳಮನೆ ಬುಧವಾರ ಮರುಸ್ಥಾಪಿಸಿದೆ. ಮೊಹಮ್ಮದ್ ಫೈಝಲ್ ಅವರನ್ನು ಕಳೆದ ಜನವರಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಫೈಜಲ್‌ ಅವರು ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ಲಕ್ಷದ್ವೀಪವನ್ನು ಪ್ರತಿನಿಧಿಸುವ ಫೈಝಲ್ ಅವರು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಫೈಝಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿತ್ತು.

“ಕೇರಳದ ಹೈಕೋರ್ಟಿನ 25.01.2023ರ ಆದೇಶದ ದೃಷ್ಟಿಯಿಂದ, ಮೊಹಮ್ಮದ್ ಫೈಜಲ್ ಅವರ ಅನರ್ಹತೆಯನ್ನು ತಡೆಯಲಾಗಿದೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8ರೊಂದಿಗೆ ಓದಲಾದ ಭಾರತದ ಸಂವಿಧಾನದ 102 (1) (ಇ) ವಿಧಿಗಳ ನಿಬಂಧನೆಗಳು ಮುಂದಿನ ನ್ಯಾಯಾಂಗ ತೀರ್ಪುಗಳಿಗೆ ಒಳಪಟ್ಟಿವೆ. ಹೀಗಾಗಿ ಅನರ್ಹತೆಯನ್ನು ತಡೆಯಲಾಗಿದೆ” ಎಂದು ಲೋಕಸಭೆಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸರ್ವೋಚ್ಚ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಮುಂಚಿತವಾಗಿ ಫೈಝಲ್ ಅವರ ಅನರ್ಹತೆಯನ್ನು ತಡೆಹಿಡಿಯಲಾಗಿದೆ.

ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ ಎಂದು ವಾದಿಸಿರುವ ಫೈಝಲ್‌, ಲೋಕಸಭೆಯಿಂದ ಮಾಡಲಾಗಿರುವ ಅನರ್ಹತೆಯನ್ನು ಹಿಂಪಡೆಯಲು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

“ಕೇರಳ ಹೈಕೋರ್ಟ್ ಜನವರಿ 25 ರಂದು ಫೈಝಲ್‌ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶವನ್ನು ಜಾರಿಗೊಳಿಸಿದೆ. ತಕ್ಷಣ ಅನರ್ಹತೆಯನ್ನು ಹಿಂತೆಗೆದುಕೊಳ್ಳಬೇಕಿತ್ತು, ತಡವಾಗಿಯಾದರೂ ಇದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಪ್ರತಿಕ್ರಿಯಿಸಿದ್ದಾರೆ.

ಜನವರಿ 13 ರಂದು ಫೈಝಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು, ಅವರು ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ನೀಡಿತ್ತು.

2009ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಪ್ರಯತ್ನಿಸಿದ್ದಾರೆಂದು ತೀರ್ಪು ನೀಡಿದ್ದ ಕವರಟ್ಟಿ ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಅಪರಾಧಿಗಳೆಲ್ಲರೂ ಸಂಬಂಧಿಕರಾಗಿದ್ದಾರೆ.

ಮೊಹಮ್ಮದ್ ಫೈಜಲ್ ಅವರು ಕೊಲೆ ಯತ್ನ ಪ್ರಕರಣದಲ್ಲಿ ತನಗೆ ಮತ್ತು ಇತರ ಮೂವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೆಷನ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಫೈಝಲ್ ಮತ್ತು ಇತರ ಮೂವರು ಆರೋಪಿಗಳನ್ನು ಐಪಿಸಿ ಸೆಕ್ಷನ್ 143, 147, 148, 448, 427, 324, 342, 307, 506 ಆರ್/ಡಬ್ಲ್ಯು 149 ರ ಅಡಿಯಲ್ಲಿ ಶಿಕ್ಷಾರ್ಹ ದೋಷಿಗಳೆಂದು ಕವರಟ್ಟಿ ನ್ಯಾಯಾಲಯ ಘೋಷಿಸಿತ್ತು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಜನವರಿ 30ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದರು. “ಲಕ್ಷದ್ವೀಪದಿಂದ ಎರಡು ಅವಧಿಗೆ ಸದಸ್ಯರಾಗಿರುವ ಫೈಝಲ್ ಅವರ ಅಮಾನತು ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಅನರ್ಹತೆಯ ನಂತರ, ಚುನಾವಣಾ ಆಯೋಗವು ಜನವರಿ 18 ರಂದು ಲಕ್ಷದ್ವೀಪ ಸಂಸದೀಯ ಸ್ಥಾನಕ್ಕೆ ಉಪಚುನಾವಣೆ ಘೋಷಿಸಿತ್ತು. ಆದರೆ ಕೇರಳ ಹೈಕೋರ್ಟ್ ತಡೆಯಾಜ್ಞೆಯ ನಂತರ ಉಪಚುನಾವಣೆಯನ್ನು ಹಿಂಪಡೆಯಲು ಜನವರಿ 30ರಂದು ಆಯೋಗ ನಿರ್ಧರಿಸಿತು.

ರಾಹುಲ್ ಗಾಂಧಿಯವರು ‘ಮೋದಿ ಸರ್‌ನೇಮ್‌’ ಬಳಸಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಜೈಲು ಶಿಕ್ಷೆಯನ್ನು ಸೂರತ್‌ ನ್ಯಾಯಾಲಯ ವಿಧಿಸಿದೆ. ಆದರೆ ಮೇಲ್ಮನವಿಯ ಪ್ರಕ್ರಿಯೆಗಳು ಚಾಲ್ತಿಯಲ್ಲಿರುವಾಗಲೇ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅಮಾನತು ಮಾಡಲಾಯಿತು ಎಂಬ ಆರೋಪಗಳು ಬಂದಿವೆ. ರಾಹುಲ್ ಗಾಂಧಿಯವರು ಏಪ್ರಿಲ್ 22 ರೊಳಗೆ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸೋಮವಾರ ನೋಟೀಸ್‌ ನೀಡಲಾಗಿದೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ದನಿ ಎತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...