Homeಮುಖಪುಟಅನರ್ಹ ಸಂಸದ ರಾಹುಲ್ ಏ. 22ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಬೇಕು: ಸೆಕ್ರೆಟರಿಯೇಟ್ ನೋಟಿಸ್

ಅನರ್ಹ ಸಂಸದ ರಾಹುಲ್ ಏ. 22ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಬೇಕು: ಸೆಕ್ರೆಟರಿಯೇಟ್ ನೋಟಿಸ್

- Advertisement -
- Advertisement -

ಲೋಕಸಭೆಯ ಸೆಕ್ರೆಟರಿಯೇಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ನಂತರ ದೆಹಲಿಯಲ್ಲಿ ಅವರಿಗೆ ನೀಡಲಾದ ಸರ್ಕಾರಿ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೋಮವಾರ ನೋಟಿಸ್ ನೀಡಿದೆ.

2019 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಭಾಷಣದ ಮಧ್ಯೆ ”ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಸಾಮಾನ್ಯವಾಗಿ ಇರುವುದು ಹೇಗೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಮುಖ್ಯ ನ್ಯಾಯಾಂಗೀಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ರಾಹುಲ್‌ ಅವರಿಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಕಾರಣದಿಂದ ಅವರ ಲೋಕಸಭಾ ಸದಸ್ಯತ್ವ ರದ್ದಾಗಿದೆ ಎಂದು ಲೋಕಸಭಾ ಕಾರ್ಯಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ. ತೀರ್ಪು ಪ್ರಕಟವಾದ 2023ರ ಮಾರ್ಚ್‌ 23ರಿಂದಲೇ ಅನರ್ಹತೆ ಅನ್ವಯ ಎಂದೂ ಹೇಳಲಾಗಿದೆ.

ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ.

ಇದನ್ನೂ ಓದಿ: ‘ಗಾಂಧಿ ತತ್ವಗಳಿಗೆ ಎಸಗಿದ ದೊಡ್ಡ ದ್ರೋಹ’: ರಾಹುಲ್ ಅಮಾನತ್ತಿಗೆ ಅಮೆರಿಕ ಸಂಸದರಿಂದ ಖಂಡನೆ

ಅನರ್ಹಗೊಂಡ ಲೋಕಸಭಾ ಸದಸ್ಯರು ಸದಸ್ಯತ್ವವನ್ನು ಕಳೆದುಕೊಂಡ ಒಂದು ತಿಂಗಳೊಳಗೆ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸೋಮವಾರ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ರಾಹುಲ್ ಗಾಂಧಿ ಅವರು 2014ರಿಂದ 12, ತುಘಲಕ್ ಲೇನ್ ಬಂಗಲೆಯಲ್ಲಿ ತಂಗಿದ್ದರು.

ಬಂಗಲೆಯಲ್ಲಿ ಹೆಚ್ಚಿನ ಅವಧಿಯವರೆಗೆ ವಾಸ್ತವ್ಯಕ್ಕಾಗಿ ರಾಹುಲ್ ಗಾಂಧಿ ಲೋಕಸಭೆಯ ವಸತಿ ಸಮಿತಿಗೆ ಪತ್ರ ಬರೆಯಬಹುದು ಎಂದು ಹೆಸರು ಹೇಳಲಿಚ್ಚಿಸದ ಮತ್ತೊಬ್ಬ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ,

”ನಿಮಗೆ ನೀಡಲಾಗಿದ್ದ ಸಕಾರದ ವಸತಿ ಸೌಲಭ್ಯವನ್ನು 23.04.2023ರಂದು ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಬೇಕು” ಎಂದು ಲೋಕಸಭೆಯ ಸಚಿವಾಲಯವು ನೋಟಿಸ್‌ನಲ್ಲಿ ತಿಳಿಸಿದೆ.

ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್ ಎನ್‌ಡಿಟಿವಿ ಜೊತೆ ಮಾತನಾಡಿ, ”ಬಿಜೆಪಿ ಸರ್ಕಾರವು ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡಿದೆ. ಬಿಜೆಪಿಯು ಮಾಟಗಾತಿ ಬೇಟೆಯಲ್ಲಿ ತೊಡಗಿರುವ ಕಾರಣ ಬಿಜೆಪಿಯಿಂದ ಇದನ್ನು ನಾವು ನಿರೀಕ್ಷೆ ಮಾಡಿದ್ದೆವು. ಅವರು ಭಿನ್ನಾಭಿಪ್ರಾಯದ ಧ್ವನಿಗಳನ್ನು ಮೌನಗೊಳಿಸಲು ಎಲ್ಲಾ ರೀತಿಯ ತಂತ್ರಗಳನ್ನು ಬಳಸುತ್ತಾರೆ. ಅವರು ನಮ್ಮ ಪ್ರಮುಖ ನಾಯಕರೊಬ್ಬರನ್ನು ನೀಚತನದಿಂದ ಸಂಸತ್ತಿನಿಂದ ಹೊರಹಾಕಿದ್ದಾರೆ ಮತ್ತು ಇದು ಹೊಸದೇನಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...