Homeಕರ್ನಾಟಕಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಬಿಜೆಪಿ  ಅಭ್ಯರ್ಥಿ ರಾಜೇಶ್ ಗೌಡ ಮತ್ತು ಪಕ್ಷದ ಕಾರ್ಯಕರ್ತರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

- Advertisement -
- Advertisement -

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುಖಂಡರು ಮತದಾರರಿಗೆ ಹಣ, ಮದ್ಯ ಮತ್ತು ಇತರೆ ಮೌಲ್ಯಯುತ ಉಡುಗೊರೆಗಳನ್ನು ನೀಡುತ್ತಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು (ರಾಜೇಶ್ ಗೌಡ) ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿ ಒತ್ತಾಯಿಸಿದ್ದಾರೆ.

ಕೆಪಿಸಿಸಿಯ ಕಾನೂನು ಸುಧಾರಣಾ ವಿಭಾಗದ ಅಧ್ಯಕ್ಷ ಮತ್ತು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ, ಬಿಜೆಪಿ  ಅಭ್ಯರ್ಥಿ ರಾಜೇಶ್ ಗೌಡ ಮತ್ತು ಅವರ ಏಜೆಂಟರು ಮತ್ತು ಪಕ್ಷದ ಕಾರ್ಯಕರ್ತರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ.  ಹಣ ಹಂಚಿಕೆ ಅಡೆತಡೆಯಿಲ್ಲದೆ ಸಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಹುಲಿಕುಂಟೆ ಹೋಬಳಿಯ ಚಿರತಹಳ್ಳಿಯಲ್ಲಿ ಅಕ್ಟೋಬರ್ 26ರಂದು ರಾತ್ರಿ 9.30ರ ಸಮಯದಲ್ಲಿ ಮಹಿಳೆಯರನ್ನು ಒಂದೆಡೆ ಸೇರಿಸಿ ಹಣ ಹಂಚಿಕೆ ಮಾಡಿದ್ದಾರೆ. ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರೆಂದು ಹಣ ಹಂಚಿಕೆ ಮಾಡುತ್ತಿದ್ದೇವೆ ಎಂದು ಭಾಷಣಕಾರರು ಹೇಳಿದ್ದಾರೆ. ಮತದಾರರ ಮೇಲೆ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಲಂಚ, ಭ್ರಷ್ಟಾಚಾರಕ್ಕೆ ಬಿಜೆಪಿ ಅಭ್ಯರ್ಥಿ, ಏಜೆಂಟರು ಮತ್ತು ಬಿಜೆಪಿ ಮುಖಂಡರು ಎಡೆಮಾಡಿಕೊಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಶಿರಾ ಕ್ಷೇತ್ರದ ಸುಮಾರು ಒಂದು ಲಕ್ಷ ಮತದಾರರಿಗೆ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆಂಬ ಆರೋಪ ಇದೆ. ಕನಿಷ್ಠ 2 ಕೋಟಿ ರೂಗಳಷ್ಟು ಹಣ ಹಂಚಿಕೆ ಮಾಡಲಾಗಿದೆ. ಇದು ಭಾರತ ದಂಡ ಸಂಹಿತೆ 171 ಬಿ, ಸಿ, ಇ, ಮತ್ತು ಜಿ ಪ್ರಕಾರ ಅಪರಾಧವಾಗಿದ್ದು ಅಭ್ಯರ್ಥಿಯನ್ನು ಕೂಡಲೇ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಕಾಂಗ್ರೆಸ್ ಆಗ್ರಹಿಸಿದೆ.

ಚುನಾವಣೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಬೇಕು. ಆದರೆ ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಮೂಲಕ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಇದು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ. ಇದೇ ವೇಳೆ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡರು ಕೂಡ ಹಣ ಹಂಚಿಕೆ ಮಾಡಿದ್ದಾರೆ ಎಂಬುದಕ್ಕೆ ಅವರು ಮಾತನಾಡಿರುವ ಆಡಿಯೋವನ್ನು ದೂರಿನ ಜೊತೆ ನೀಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿದೆ. ಹೀಗಾಗಿ ಈ ಅಕ್ರಮದಲ್ಲಿ ತೊಡಗಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಪೊನ್ನಣ್ಣ ಹಾಗೂ ಬಸವರಾಜು ಇದ್ದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...