Homeಕರ್ನಾಟಕಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಅಗೆದಷ್ಟು ಬ್ರಾಹ್ಮಣೀಕರಣ, ಮೊಗೆದಷ್ಟು ಎಡವಟ್ಟುಗಳು ಬಿಚ್ಚಿಕೊಳ್ಳತೊಡಗಿವೆ. ಹಳೆಯ ಪಠ್ಯದಲ್ಲಿದ್ದ ಹಲವಾರು ಮೌಲ್ಯಯುತ ವಿಚಾರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ಸಮಿತಿಯು, ‘ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಕುರಿತ ವಿಚಾರಗಳನ್ನೂ ತಿರುಚುವ ಕೆಲಸ ಮಾಡಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿದ್ದು ಏಕೆಂಬ ವಿಷಯವನ್ನು ಹೊಸ ಪಠ್ಯದಲ್ಲಿ ಮರೆಮಾಚಿರುವುದು ಬೆಳಕಿಗೆ ಬಂದಿತ್ತು. ಇತಿಹಾಸವಷ್ಟೇ ಅಲ್ಲದೇ ರಾಜಶಾಸ್ತ್ರ ವಿಭಾಗದಲ್ಲೂ ಬಾಬಾ ಸಾಹೇಬರ ವಿಚಾರಗಳಲ್ಲಿ ಕತ್ತರಿ ಪ್ರಯೋಗ ಮಾಡಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ರಾಜ್ಯಶಾಸ್ತ್ರ’ ವಿಭಾಗದಲ್ಲಿನ ‘ನಮ್ಮ ಸಂವಿಧಾನ’ ಪಾಠದಲ್ಲಿ ಬದಲಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ ಪಠ್ಯದಲ್ಲಿನ ಸಾಲುಗಳು

ಇದನ್ನೂ ಓದಿರಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಹೊಸಪಠ್ಯದಲ್ಲಿ ‘ಸಂವಿಧಾನದ ಶಿಲ್ಪಿ’ ಬಿರುದು ತೆರವು

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿರುವ ವಕ್ರತೀರ್ತನ ವಿರುದ್ಧ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕು.

  2. ಸಂವಿಧಾನ ಶಿಲ್ಪಿ ಗೆ ಈ ರೀತಿಯ ಅಪಮಾನ ಅಕ್ಷಮ್ಯ ಅಪರಾಧ. ಚಕ್ರ ತೀರ್ಥ ರವರಿಗೆ ಶಿಕ್ಷೆಯಾಗಲೇಬೇಕು

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...