ಸುಪ್ರಿಂಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಅಧಿಕಾರ ವಹಿಸಿಕೊಂಡ ತರುವಾಯ ಮುಂಬೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರಿಗೆ ನೀಡಲಾದ ಶಿಷ್ಟಾಚಾರದ ಕೊರತೆಯು ಭಾರತವನ್ನು ಕಾಡುತ್ತಿರುವ ನಿರಂತರ ಜಾತಿ ತಾರತಮ್ಯದ ಸ್ಪಷ್ಟ ಉದಾಹರಣೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಲಿತ ಎಂಬ ಕಾರಣಕ್ಕೆ
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನ್ಯಾಯಮೂರ್ತಿ ಗವಾಯಿ ಅವರಿಗೆ ಮಹಾರಾಷ್ಟ್ರ ಸರ್ಕಾರವು ಆತ್ಮೀಯ ಸ್ವಾಗತವನ್ನು ನೀಡಬೇಕಿತ್ತು. ಬದಲಾಗಿ, ಅವರನ್ನು ಅಗೌರವದಿಂದ ನಡೆಸಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಭಾರತದ ಹಿಂದುತ್ವ ಆಡಳಿತಗಾರರು ಮೂಲಭೂತವಾಗಿ ದಲಿತ ವಿರೋಧಿಗಳಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
“ಮುಖ್ಯ ನ್ಯಾಯಮೂರ್ತಿಯೊಬ್ಬರು ಮೊದಲ ಬಾರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ರಾಜ್ಯದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಅಥವಾ ಮುಂಬೈ ಪೊಲೀಸ್ ಆಯುಕ್ತರು ಹಾಜರಾಗದಿರಲು ನಿರ್ಧರಿಸಿದರೆ, ಅವರು ತಮ್ಮ ನಿರ್ಧಾರದ ಸೂಕ್ತತೆಯ ಬಗ್ಗೆ ಚಿಂತಿಸಬೇಕು” ಎಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅಸಮಾಧಾನ ವ್ಯಕ್ತಪಡಿಸಿದ್ದರು.
‘ಶಿಷ್ಟಾಚಾರಗಳು ಹೊಸ ಪರಿಕಲ್ಪನೆಯಲ್ಲ; ಅವು ಒಂದು ಸಾಂವಿಧಾನಿಕ ಸಂಸ್ಥೆಯು ಮತ್ತೊಂದು ಸಂಸ್ಥೆಗೆ ನೀಡುವ ಗೌರವವನ್ನು ಪ್ರತಿನಿಧಿಸುತ್ತವೆ’ ಎಂದು ಬೇಬಿ ಹೇಳಿದ್ದಾರೆ. “ಈ ಘಟನೆಯು ಬಿಜೆಪಿ ಸರ್ಕಾರದ ದಲಿತ ವಿರೋಧಿ ನಿಲುವಿನ ಮತ್ತೊಂದು ಉದಾಹರಣೆಯಾಗಿದೆ” ಎಂದು ಅವರು ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಅಗೌರವದ ವರ್ತನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಬೇಬಿ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.
महाराष्ट्र सरकार ने CJI गवई को परमानेंट स्टेट गेस्ट बनाया: प्रोटोकॉल गाइडलाइन जारी की; चीफ जस्टिस को राज्य के चीफ सेक्रेटरी-DGP ने रिसीव नहीं किया थाhttps://t.co/hFyxsQhNtk#Maharashtra #cjibrgavai pic.twitter.com/epZ2q3IOFN
— Dainik Bhaskar (@DainikBhaskar) May 21, 2025
ದಲಿತ ಎಂಬ ಕಾರಣಕ್ಕೆ