Homeಮುಖಪುಟಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿದ ಕಾಂಗ್ರೆಸ್ 2017 ರಲ್ಲಿ 93 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದೆ.

- Advertisement -
- Advertisement -

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೆಂದು ಆರೋಪಿಸಿದ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜಂಗಲ್ ರಾಜ್ ಇದ್ದು, ಯೋಗಿ ಆದಿತ್ಯನಾಥ್ ಸರ್ಕಾರದ ಆಡಳಿತದಲ್ಲಿ ಪೊಲೀಸರು ಕೂಡ ಸುರಕ್ಷಿತವಾಗಿಲ್ಲ ಎಂದು ಅವರು ಟೀಕಿಸಿದ್ದಾರೆ.

ಕಾನ್ಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಪೊಲೀಸರು ಹತರಾಗಿರುವುದನ್ನು ಉಲ್ಲೇಖಿಸಿರುವ ಲಲ್ಲು, ಗೂಂಡಾಗಳನ್ನು ಅಧಿಕಾರದಲ್ಲಿರುವವರು ಹೇಗೆ ಸಲಹುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಾಗಿದೆ. ಅಲ್ಲದೇ ಇದಕ್ಕೆ ಮುಖ್ಯಮಂತ್ರಿ ಕಚೇರಿಯ ಪೋಷಣೆಯು ಇದೆ ಎಂದು ಆರೋಪಿಸಿದ್ದಾರೆ.

ಬಾರಾಬಂಕಿಯಿಂದ ಚಿತ್ರಕೂಟ್‌ವರೆಗೆ ಗಣಿಗಳಲ್ಲಿ ಕೆಲಸ ಮಾಡುವ ಹುಡುಗಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರವು ರಾಜ್ಯದಲ್ಲಿ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆಯನ್ನು ತೋರಿಸುತ್ತದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಅಪರಾಧ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಲ್ಲೆ, ಅಪಹರಣ, ಕೊಲೆ ಮತ್ತು ಅತ್ಯಾಚಾರ ಘಟನೆಗಳು ಸಾಮಾನ್ಯವಾಗಿಬಿಟ್ಟಿದೆ ಎಂದು ಲಲ್ಲು ಆರೋಪಿಸಿದ್ದಾರೆ.

ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿರುವ ಲಲ್ಲು, 2017 ರಲ್ಲಿ 93 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

2018 ರಲ್ಲಿ 70 ಪೊಲೀಸ್ ಸಿಬ್ಬಂದಿಗಳು ಕರ್ತವ್ಯದ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ. ದೇಶದಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳಲ್ಲಿ ಮೂರನೇ ಒಂದು ಭಾಗದಷ್ಟು ಪ್ರಕರಣಗಳು ಉತ್ತರ ಪ್ರದೇಶ ರಾಜ್ಯವೊಂದರಿಂದಲೇ ವರದಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಪ್ರಯತ್ನ, ವರದಕ್ಷಿಣೆ ಪೀಡನೆ ಘಟನೆಗಳು ಮತ್ತು ಕೊಲೆ ಪ್ರಯತ್ನಗಳ ಪಟ್ಟಿಯಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ. ಆದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವಲ್ಲಿ ಹಾಗೂ ಮಾಧ್ಯಮಗಳ ಮುಖ್ಯಾಂಶಗಳಲ್ಲಿ ಸ್ಥಾನ ಪಡೆಯುವಲ್ಲಿ ನಿರತರಾಗಿದ್ದಾರೆ ಎಂದು ಲಲ್ಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ: 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...