Homeಕರ್ನಾಟಕಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಎಂದು ಗ್ರಾಮಸ್ಥರ ಆರೋಪ

- Advertisement -
- Advertisement -

ಗ್ರಾಮ ಪಂಚಾಯತಿ ಮತ್ತು ಊರಿನ ಬಹುಸಂಖ್ಯಾತ ಜನರ ವಿರೋಧದ ನಡುವೆಯು ಎರಡು ಹಳ್ಳಿಗಳ ನಾಲ್ಕು ಕಿ.ಮೀ. ಅಂತರದ ನಡುವೆ ಎರಡು ‘ಮದ್ಯದ ಅಂಗಡಿ’ ತೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮಗಳಲ್ಲಿ ನಡೆದಿದೆ. ಇದರ ವಿರುದ್ಧ ಜನರು ಕಳೆದ ಒಂದು ವಾರದಿಂದ ಹೋರಾಟ ನಡೆಸುತ್ತಿದ್ದು, ಯಾವುದೇ ಜನಪ್ರತಿನಿಧಿಗಳು ತಮ್ಮ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಮದ್ಯ ವಿರೋಧಿ ಹೋರಾಟ ಸಮಿತಿಯು ಏಳು ದಿನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಜನ ಪ್ರತಿನಿಧಿಗಳಿಂದ ಪ್ರತಿಭಟನೆಗೆ  ಈ ವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದು, ಮದ್ಯದಂಗಡಿಯ ಸುತ್ತ ಪೋಲೀಸರ ಸರ್ಪಗಾವಲು ಮಾಡಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗ್ರಾಮ ಪಂಚಾಯತ್‌‌ನ ಆಡಳಿತ, ಊರಿನ ಜನರ ವಿರೋಧ ನಡುವೆಯೂ ಬಾರ್ ಪ್ರಾರಂಭಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನರು ಮದ್ಯದಂಗಡಿ ಬಂದ್ ಮಾಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌‌ ವಿಶೇಷ ಗ್ರಾಮ ಸಭೆಯನ್ನು ಕರೆದು, ಸಭೆಯಲ್ಲಿ ‘ಮದ್ಯ ಮುಕ್ತ ಗ್ರಾಮ’ವೆಂದು ಘೋಷಿಸಿ ನಿರ್ಣಯ ಕೈಗೊಂಡಿದೆ.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಉನ್ನತ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮೀಣ ಭಾಗದಲ್ಲಿ ಎರಡು ಬಾರ್‌ ತೆರೆಯಲಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಈ ನಡುವೆ ಹರಿಹರ ಪಲ್ಲತ್ತಡ್ಕದಲ್ಲಿ ಬಾರ್‌‌ ತೆರೆಯುವಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸ ಅವರ ಕೈವಾಡ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಹೋರಾಟಗಾರರು ಅವರ ಪ್ರತಿಕೃತಿ ಧಹಿಸಿ ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.

ಮಧ್ಯದ ಅಂಗಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಎರಡು ಗ್ರಾಮ ಪಂಚಾಯತ್‌‌‌ ಕೂಡಾ ಆಡಳಿತರೂಢ ಬಿಜೆಪಿಯನ್ನು ನಿರಂತರವಾಗಿ ಗೆಲ್ಲಿಸಿಕೊಂಡು ಬರುತ್ತಿರುವ ಸುಳ್ಯ ಕ್ಷೇತ್ರದಲ್ಲಿ ಇದ್ದು, ಎರಡು ಗ್ರಾಮ ಪಂಚಾಯತ್‌ನಲ್ಲಿ ಕೂಡಾ ಬಿಜೆಪಿ ಅಧಿಕಾರದಲ್ಲಿ ಇವೆ.

“ಮಧ್ಯದ ಅಂಗಡಿ ತೆರೆಯಲು ಅನುಮತಿ ನೀಡದಂತೆ ಸ್ಥಳೀಯ ಶಾಸಕ, ಸಚಿವರೂ ಆಗಿರುವ ಎಸ್‌. ಅಂಗಾರ ಅವರಿಗೆ ಮನವಿ ನೀಡಿದರೂ ಮರು ದಿನ ಬಾರ್‌ ಓಪನ್ ಆಗಿದೆ” ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್‌ ಕರೆಕೋಡಿ ಕಿಡಿ ಕಾರಿದ್ದಾರೆ.

ಈ ನಡುವೆ ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್‌ ಪಿಡಿಒ ಬಾರ್‌ ಕಟ್ಟಡಕ್ಕೆ ಅನುಮತಿ ನೀಡಿ ಎರಡು ತಿಂಗಳ ರಜೆ ಹಾಕಿ ಹೋಗಿದ್ದಾರೆ ಎಂದು ಗ್ರಾಮಸ್ಥರೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸತೀಶ್‌ ಕೆರೆಕೋಡಿ, “ಕೊಲ್ಲಮೊಗ್ರುವಿನಲ್ಲಿ ಕಳೆದ ತಿಂಗಳು ಅಕ್ಟೋಬರ್‌ 19ರಂದು ಬಾರ್‌ ಪ್ರಾರಂಭವಾಗಿತ್ತು. ಅದರ ನಂತರ ನಾವು ಶಾಲಾ ಅಭಿವೃದ್ಧಿ ಸಮತಿ ಸೇರಿದಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಪಂಚಾಯತ್‌‌ಗೆ ಮನವಿ ನೀಡಿದೆವು. ಗ್ರಾಮ ಸಭೆಯಲ್ಲಿ ಗ್ರಾಮದ ಒಳಗೆ ಯಾವುದೆ ಮದ್ಯದ ಅಂಗಡಿ ತೆರೆಯಬಾರದು ಎಂದು ನಿರ್ಣಯ ಕೂಡಾ ಮಾಡಿದೆವು. ಆದರೆ ಮದ್ಯದ ಅಂಗಡಿಗೆ ಲೈಸನ್ಸ್‌ ನೀಡುವುದರಲ್ಲಿ ಪಂಚಾಯತ್‌ನ ಅನುಮತಿ ಬೇಡ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಬಾರ್‌ ತೆರೆಯಲಾಗಿರುವ ಎರಡೂ ಗ್ರಾಮಗಳು ಸುಳ್ಯ ತಾಲೂಕು ಕೇಂದ್ರದಿಂದ 40 ಕಿ.ಮೀ ದೂರವಿದ್ದು, ಬಾರ್‌ ತೆರೆದ ಪರಿಣಾಮದಿಂದ 18 ವರ್ಷದ ಮಕ್ಕಳು ಕೂಡಾ ಮಧ್ಯದ ಅಮಲಿನಲ್ಲಿ ತೇಲಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೊಲ್ಲಮೊಗ್ರುವಿನಲ್ಲಿ ತೆರೆಯಲಾಗಿರುವ ಬಾರ್‌ ಮತ್ತು ಶಾಲೆಯ ನಡುವಿನ ಅಂತರ ನೂರು ಮೀಟರ್‌ ಕೂಡಾ ಇಲ್ಲ. ಹಲವಾರು ನಿಯಮಗಳನ್ನು ಮೀರಿ ಅಬಕಾರಿ ಇಲಾಖೆ ಬಾರ್‌ಗೆ ಅನುಮತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಇದನ್ನು ವಿರೋಧಿಸಿ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಇದೀಗ ಹರಿಹರ ಪಲ್ಲತಡ್ಕದಲ್ಲಿ ಕೂಡಾ ಬಾರ್‌ ತೆರೆಯಲಾಗಿದ್ದು, ಅದನ್ನು ವಿರೋಧಿಸಿ ಒಂದು ವಾರದಿಂದ ಹೋರಾಟ ನಡೆಯುತ್ತಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

“ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಜನರೊಂದಿಗೆ ಧರಣಿಗೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೊಲ್ಲಮೊಗ್ರುವಿನ ಅಧ್ಯಕ್ಷರು ಇದರ ವಿರುದ್ಧ ಧ್ವನಿಯೆತ್ತುತ್ತಾ ಇಲ್ಲ, ಯಾಕೆಂದರೆ ಅಲ್ಲಿನ ಬಾರ್‌ ಇರುವ ಕಟ್ಟಡವು ಅವರ ಚಿಕ್ಕಪ್ಪದ್ದಾಗಿದೆ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೋರಾಟ ಸಮಿತಿ ಅಧ್ಯಕ್ಷ ಸತೀಶ್ ಕೆರೆಕೋಡಿ ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೇಡಿಗಳನ್ನ ಶಾಸನ ಸಭೆಗೆ ಆರಿಸಿ ಕಳಿಸಿದ ಪ್ರಜೆಗಳಿಗೆ ಸರಿಯಾದ ಉತ್ತರ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...