Homeಮುಖಪುಟಬೈಬಲ್ ಹಂಚುವುದು ಧಾರ್ಮಿಕ ಮತಾಂತರದ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್

ಬೈಬಲ್ ಹಂಚುವುದು ಧಾರ್ಮಿಕ ಮತಾಂತರದ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತಮ ಬೋಧನೆಗಳನ್ನು ನೀಡುವುದು, ಪವಿತ್ರ ಬೈಬಲ್ ಪುಸ್ತಕಗಳನ್ನು ವಿತರಿಸುವುದು ಉತ್ತರ ಪ್ರದೇಶದ ”ಕಾನೂನುಬಾಹಿರ ಧರ್ಮದ ಮತಾಂತರ ನಿಷೇಧ ಕಾಯಿದೆ 2021 ರ” ಅಡಿಯಲ್ಲಿ ಧಾರ್ಮಿಕ ಮತಾಂತರಕ್ಕೆ ‘ಆಮಿಷ’ ಆಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಮತಾಂತರಗೊಂಡ ವ್ಯಕ್ತಿ ಅಥವಾ ಅವರ ಕುಟುಂಬದವರು ಮಾತ್ರ ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಸಬಹುದು ಎಂದು ಹೈಕೋರ್ಟ್‌ನ ಲಕ್ನೋ ಪೀಠ ಹೇಳಿದೆ.

ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರು, ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಇಬ್ಬರು ವ್ಯಕ್ತಿಗಳಿಗೆ ಜಾಮೀನು ನೀಡುವಾಗ ಈ ಆದೇಶವನ್ನು ನೀಡಿದ್ದಾರೆ.

ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸಲು ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ದೂರನ್ನು ದಾಖಲಿಸಿದ ನಂತರ ಜೋಸ್ ಪಾಪಚೆನ್ ಮತ್ತು ಶೀಜಾ ಅವರನ್ನು ಈ ವರ್ಷದ ಆರಂಭದಲ್ಲಿ ಜೈಲಿಗೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ತಂದೆಯ ಹತ್ಯೆ; ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್

ಜಿಲ್ಲೆಯ ವಿಶೇಷ ನ್ಯಾಯಾಧೀಶರು ತಮ್ಮ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪಾಪಚೆನ್ ಮತ್ತು ಶೀಜಾ ಅವರು ನಿರಪರಾಧಿಗಳಾಗಿದ್ದು, ರಾಜಕೀಯವಾಗಿ ಈ ಪ್ರಕರಣದಲ್ಲಿ ಅವರನ್ನು ಸಿಲುಕಿಸಲಾಗಿದೆ ಎಂದು ಅವರ ವಕೀಲರು ನ್ಯಾಯಾಧೀಶರಿಗೆ ತಿಳಿಸಿದರು.

ಉತ್ತಮ ಬೋಧನೆಗಳನ್ನು ನೀಡುವುದು, ಪವಿತ್ರ ಬೈಬಲ್ ಪುಸ್ತಕಗಳನ್ನು ವಿತರಿಸುವುದು, ಮಕ್ಕಳಿಗೆ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವುದು, ಗ್ರಾಮಸ್ಥರ ಸಭೆಯನ್ನು ಆಯೋಜಿಸುವುದು ಮತ್ತು ‘ಭಂಡಾರ’ [ಸಮುದಾಯ ಹಬ್ಬ] ನಡೆಸುವುದು ಮತ್ತು ಜಗಳಕ್ಕೆ ಇಳಿಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡುವುದು ಮತ್ತು ಮದ್ಯಪಾನ ಮಾಡಬಾರದು, ಬದಲಿಗೆ ಅಗತ್ಯವಿರುವ ವ್ಯಕ್ತಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ತಪ್ಪಲ್ಲ” ಎಂದು ವಕೀಲರು ಹೇಳಿದರು.

”ಜೋಸ್ ಪಾಪಚೆನ್ ಮತ್ತು ಶೀಜಾ ಅವರು ಮಕ್ಕಳಿಗೆ ಉತ್ತಮ ಬೋಧನೆಗಳನ್ನು ನೀಡುವಲ್ಲಿ ಮತ್ತು ಗ್ರಾಮಸ್ಥರಲ್ಲಿ ಸಹೋದರತ್ವದ ಮನೋಭಾವವನ್ನು ಉತ್ತೇಜಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಬಲವಂತವಾಗಿ ಮತಾಂತರವನ್ನು ಮಾಡಿಲ್ಲ” ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...