Homeಮುಖಪುಟಪಡಿತರ ಚೀಟಿ ಇಲ್ಲದಿದ್ದರೂ ಆಹಾರ ಧಾನ್ಯ ವಿತರಣೆ: ಯಡಿಯೂರಪ್ಪ

ಪಡಿತರ ಚೀಟಿ ಇಲ್ಲದಿದ್ದರೂ ಆಹಾರ ಧಾನ್ಯ ವಿತರಣೆ: ಯಡಿಯೂರಪ್ಪ

- Advertisement -
- Advertisement -

ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕೂಲಿ ಕಾರ್ಮಿಕರು, ಬಡವರು ಕೊರೊನ ಲಾಕ್‌ಡೌನ್‌ನಿಂದ ತೊಂದರೆಗೊಳಗಾಗಿರುವ ಹಿನ್ನಲೆಯಲ್ಲಿ ಜನ ಹಸಿವಿನಿಂದ ಪರಿತಪಿಸಬಾರದು ಎಂದು ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ಚೀಟಿ ಇಲ್ಲದಿರುವರು ಸಂಬಂಧಪಟ್ಟ ಇಲಾಖೆಗಳಲ್ಲಿ ಹೋಗಿ ನಾಳೆಯಿಂದ ಆಹಾರ ಧಾನ್ಯಗಳನ್ನು ಪಡೆಯಬಹುದು. ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿಲಾಗಿದೆ, ಹಾಪ್ ಕಾಮ್ಸ್ ಮೂಲಕ ನಗರ ಪ್ರದೇಶಗಳಲ್ಲಿ ತರಕಾರಿ ಒದಗಿಸಲಾಗುತ್ತಿದೆ ಎಂದರು.

ಇದೇ ಸಮಯದಲ್ಲಿ ವಿನಾಕಾರಣ ಮನೆಯಿಂದ ಹೊರಬಂದು ಲಾಕ್‌ಡೌನ್ ನಿಯಮ ಉಲ್ಲಂಘಿಸಬೇಡಿ ಎಂದು ಮುಖ್ಯಮಂತ್ರಿ ಜನತೆಯೊಂದಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನ ನಿಯಂತ್ರಣ ವಿಷಯವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರಿನ ಶಾಸಕರು, ಸಚಿವರು, ಸಂಸದರು ಹಾಗೂ ಪಾಲಿಕೆ ಸದಸ್ಯರು ಭಾಗಿಯಾಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...