Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್‌‌ರಿಂದ ತನಿಖೆ: ಬಿ. ಎಸ್. ಯಡಿಯೂರಪ್ಪ

ಡಿ.ಜೆ. ಹಳ್ಳಿ ಗಲಭೆ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್‌‌ರಿಂದ ತನಿಖೆ: ಬಿ. ಎಸ್. ಯಡಿಯೂರಪ್ಪ

- Advertisement -
- Advertisement -

ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆಯ ಕುರಿತು ಜಲ್ಲಾ ಮ್ಯಾಜಿಸ್ಟ್ರೇಟ್‌ ರವರಿಂದ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ “ಬೆಂಗಳೂರಿನ ದೇವರಜೀವನಹಳ್ಳಿ ಹಾಗು ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಈ ನಡೆವೆ ಗಲಭೆ ರಾಜಕೀಯ ಚದುರಂಗದಾಟಕ್ಕೆ ವೇದಿಕೆಯಾಗಿದ್ದು, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ, “ಗಲಭೆಯಲ್ಲಿ ಪಿಎಫ್‌ಐ ಹಾಗೂ ಎಸ್‌‌ಡಿಪಿಐ ಕೈವಾಡವಿದೆ” ಎಂದು ಹೇಳಿದ್ದಾರೆ.

ಮತ್ತೊಂಡೆ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್‍, ಗಲಭೆಯ ಆರೋಪಿ ’ನವೀನ್’ ಬಿಜೆಪಿಯ ಕಟ್ಟಾ ಬೆಂಬಲಿಗ ಎಂದು ಹೇಳಿದ್ದಾರೆ.

ಈ ಎಲ್ಲದರ ಮಧ್ಯೆ ಪುಲಿಕೇಶಿ ನಗರದ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ತನ್ನ ಅಕ್ಕನ ಮಗ ನವೀನ್‌ಗೂ ನನಗೂ ಹತ್ತು ವರ್ಷದಿಂದ ಸಂಪರ್ಕವಿಲ್ಲ. ಘಟನೆಯ ಹಿಂದೆ ಯಾರೇ ಇದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.


ಓದಿ: ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು.


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...