Homeಮುಖಪುಟಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

ಮಣಿಪುರವನ್ನು ವಿಭಜಿಸಲು ಬಯಸುವವರೊಂದಿಗೆ ಕೆಲವು ರಾಜಕಾರಣಿಗಳು ಕೈಜೋಡಿಸಿದ್ದಾರೆ: ಸಿಎಂ ಬಿರೇನ್ ಸಿಂಗ್

- Advertisement -
- Advertisement -

ಮಣಿಪುರದ ಜನಾಂಗೀಯ ಸಮಸ್ಯೆಗಳ ಕುರಿತ ಅತಿರೇಕದ ರಾಜಕೀಯವು ಜನರನ್ನು ಗೊಂದಲಕ್ಕೀಡಾಗಿದ್ದು, ಆಂತರಿಕ ಸಂಘರ್ಷಗಳನ್ನು ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ಗುರುವಾರ ಹೇಳಿದ್ದಾರೆ. ಅಲ್ಲದೆ, ರಾಜಕಾರಣಿಗಳ ಒಂದು ವಿಭಾಗ ರಾಜ್ಯವನ್ನು ಒಡೆಯಲು ಬಯಸುವವರೊಂದಿಗೆ ಕೈಜೋಡಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಮಣಿಪುರವನ್ನು ವಿಭಜಿಸಲು

ತೌಬಲ್ ಜಿಲ್ಲೆಯ ಖಂಗಾಬೋಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿರೇನ್ ಸಿಂಗ್, “ಮೇ 2023 ರಿಂದ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದ ರಾಜ್ಯದಲ್ಲಿನ ಪ್ರಸ್ತುತ ಸಮಸ್ಯೆಗಳನ್ನು ಅನೇಕ ಜನರು ಇನ್ನೂ ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ವಿರೋಧ ಇರುವುದು ಮಾದಕವಸ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ಹೊಸ ವಲಸಿಗರೊಂದಿಗೆ ಹೊರತು, ಈ ಹಿಂದೆ ನೆಲೆಸಿದ ಯಾರ ವಿರುದ್ಧವೂ ಅಲ್ಲ ಎಂದು ಅವರು ಹೇಳಿದ್ದಾರೆ.

“ನಿಜವಾದ ವಿರೋಧಿಗಳು ಯಾರು ಮತ್ತು ನಮ್ಮ ಮೇಲೆ ದಾಳಿ ನಡೆಸಿದವರು ಯಾರು ಎಂಬುದನ್ನು ಅರ್ಥಮಾಡಿಕೊಳ್ಳುವುದು ಮತ್ತು ಅರಿತುಕೊಳ್ಳುವುದು ನಮ್ಮ ಕರ್ತವ್ಯ. ನಾವು ಅವರಿಂದ ನಮ್ಮನ್ನು ರಕ್ಷಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ. ಮಣಿಪುರವನ್ನು ವಿಭಜಿಸಲು

“ಆದಾಗ್ಯೂ, ಅತಿರೇಕದ ರಾಜಕೀಯವು ಜನರನ್ನು ಗೊಂದಲಕ್ಕೀಡು ಮಾಡಿದೆ ಮತ್ತು ಆಂತರಿಕ ಸಂಘರ್ಷಗಳನ್ನು ಸೃಷ್ಟಿಸಿದೆ. ಕೆಲವು ರಾಜಕಾರಣಿಗಳು ಸಹ ಮಣಿಪುರವನ್ನು ಒಡೆಯಲು ಬಯಸುವವರೊಂದಿಗೆ ಕೈಜೋಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ. ಈ ವೇಳೆ ಅವರು ಯಾವುದೇ ರಾಜಕಾರಣಿ ಅಥವಾ ರಾಜಕೀಯ ಪಕ್ಷದ ಹೆಸರನ್ನು ಹೆಸರಿಸಲಿಲ್ಲ.

“ಮಣಿಪುರವನ್ನು ಒಡೆಯಲು ಬಯಸುವವರು ನಮ್ಮನ್ನು ಕೆರಳಿಸಲು ಏಜೆಂಟರನ್ನು ಬಳಸಿಕೊಂಡಿದ್ದಾರೆ. ಅಂತಹ ಏಜೆಂಟರು ಇಂಫಾಲ್ ಕಣಿವೆಯಲ್ಲಿದ್ದಾರೆ ಮತ್ತು ಮಣಿಪುರವನ್ನು ಒಡೆಯಲು ಬಯಸುವವರ ಜೊತೆ ಇದ್ದಾರೆ. ನಾವು ಅವರ ಬಗ್ಗೆ ಜಾಗರೂಕರಾಗಿರಬೇಕು” ಎಂದು ಸಿಎಂ ಹೇಳಿದ್ದಾರೆ.

“ನಾವೆಲ್ಲರೂ ಒಂದೇ. ಥಡೌ, ಮಾಟೆ, ಗ್ಯಾಂಗ್ಟೆ, ವೈಫೆ, ಪೈಟೆ ಜೊತೆಗೆ ತಂಗ್ಖುಲ್, ಮಾವೋ ಮತ್ತು ಮಾರಮ್ ಎಲ್ಲರೂ ಪರಸ್ಪರ ಸಹೋದರರಾಗಿದ್ದೇವೆ. ಹಿಂದೆ ನೆಲೆಸಿದವರೆಲ್ಲರೂ ಒಟ್ಟಿಗೆ ಇದ್ದಾರೆ. ಮಾದಕವಸ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ಹೊಸ ವಲಸಿಗರಿಗೆ ಮಾತ್ರ ನಮ್ಮ ಜೊತೆಗೆ ವಿರೋಧವಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ವಕ್ಫ್ ತಿದ್ದುಪಡಿ ಮಸೂದೆ : ಲೋಕಸಭೆ ಸ್ಪೀಕರ್‌ಗೆ ವರದಿ ಸಲ್ಲಿಸಿದ ಜಂಟಿ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...