HomeUncategorizedದೀಪಾವಳಿಯಂದು ಗಿಗ್ ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ ಘೋಷಣೆ

ದೀಪಾವಳಿಯಂದು ಗಿಗ್ ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ ಘೋಷಣೆ

- Advertisement -
- Advertisement -

ಭಾರತದ ಮೊದಲ ಮಹಿಳಾ ನೇತೃತ್ವದ ಗಿಗ್ ಕಾರ್ಮಿಕರ ಒಕ್ಕೂಟ ದೀಪಾವಳಿಯಂದು ರಾಷ್ಟ್ರವ್ಯಾಪಿ ಡಿಜಿಟಲ್ ಮುಷ್ಕರಕ್ಕೆ ಕರೆ ನೀಡಿದೆ. ಆನ್‌ಲೈನ್ ಡೆಲೆವೆರಿ ಮಾಡುವ ಆಪ್‌ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಈ ಹೋರಾಟವು ದೇಶದ ಗಮನ ಸೆಳೆದಿದೆ. ಗಿಗ್ ಕಾರ್ಮಿಕರಿಂದ

ಗಿಗ್ & ಪ್ಲಾಟ್‌ಫಾರ್ಮ್ ಸರ್ವಿಸ್ ವರ್ಕರ್ಸ್ ಯೂನಿಯನ್ (GIPSWU) 2024ರ ಅಕ್ಟೋಬರ್ 31ರಂದು ಮುಷ್ಕರ ನಡೆಯಲಿದೆ ಎಂದು ಘೋಷಿಸಿದೆ. ಅಂದು ಗಿಗ್‌ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡುವಂತೆ ಮತ್ತು ಪ್ರತಿಭಟನಾ ಸಂದೇಶಗಳೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಲು ಸಂಘಟನೆಯು ಯೋಜಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗಿಗ್ ಕಾರ್ಮಿಕರನ್ನು ನೌಕರರನ್ನಾಗಿ ಗುರುತಿಸುವುದು, ಕನಿಷ್ಠ ವೇತನ ಜಾರಿಗೊಳಿಸುವುದು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸೇರ್ಪಡೆಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಒಕ್ಕೂಟವು ಮುಂದಿಟ್ಟಿದೆ ಎಂದು ಯೂನಿಯನ್ ಮುಖಂಡರು ಶನಿವಾರ ಹೇಳಿದ್ದಾರೆ.

“ನಮ್ಮನ್ನು ಗುಲಾಮರಂತೆ ನಡೆಸಿಕೊಳ್ಳಲಾಗುತ್ತಿದೆ. ಕಷ್ಟಪಟ್ಟು ದುಡಿಯುತ್ತೇವೆಯಾದರೂ, ಅದಕ್ಕೆ ಪ್ರತಿಯಾಗಿ ಏನನ್ನೂ ಪಡೆಯಲಾಗುತ್ತಿಲ್ಲ. ಬಯಸಿದಾಗ ಕೆಲಸ ಮಾಡಲು ನಾವು ಸ್ವತಂತ್ರರು ಎಂದು ಅವರು ಹೇಳುತ್ತಾರೆ, ಆದರೆ ಅದು ಕೇವಲ ಸುಳ್ಳು” ಎಂದು ಬೆಂಗಳೂರಿನ GIPSWU ನಾಯಕಿ ಸೆಲ್ವಿ ಹೇಳಿದ್ದಾರೆ.

ಕಾರ್ಮಿಕರನ್ನು ಕಂಪನಿಯ ಉದ್ಯೋಗಿಗಳೆಂದು ಗುರುತಿಸುವುದು, ಶಾಸನಬದ್ಧ ಕನಿಷ್ಠ ವೇತನವನ್ನು ಜಾರಿಗೊಳಿಸುವುದು ಮತ್ತು ಕುಂದುಕೊರತೆ ನಿವಾರಣಾ ಕಾರ್ಯವಿಧಾನಗಳನ್ನು ಸ್ಥಾಪಿಸುವ ಬೇಡಿಕೆಯನ್ನು ಒಕ್ಕೂಟವು ಮುಂದಿಟ್ಟಿದೆ. ಜೊತೆಗೆ ಸಾಮೂಹಿಕ ಚೌಕಾಸಿಗೆ ತಮ್ಮ ಹಕ್ಕನ್ನು ಅಂಗೀಕರಿಸಲು ಸಹ ಒಕ್ಕೂಟ ಬಯಸಿದೆ.

ಕಾರ್ಮಿಕ ಕಾನೂನುಗಳ ಮೂಲಕ ಗಿಗ್ ಆರ್ಥಿಕತೆಯಲ್ಲಿ ಉದ್ಯೋಗವನ್ನು ನಿಯಂತ್ರಿಸಲು ಹಾಗೂ ಇಪಿಎಫ್ ಮತ್ತು ಪಿಂಚಣಿ ಯೋಜನೆಗಳು ಸೇರಿದಂತೆ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ವಿಸ್ತರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು GIPSWU ಒತ್ತಾಯಿಸಿದೆ.

ಮಾತೃತ್ವ ಪ್ರಯೋಜನಗಳ ಕಾಯಿದೆಯನ್ನು ವಿಸ್ತರಿಸಿ ಗಿಗ್ ಕಾರ್ಮಿಕರನ್ನು ಅದರಲ್ಲಿ ಒಳಗೊಳ್ಳುವಂತೆ ಒಕ್ಕೂಟವು ಒತ್ತಾಯಿಸುತ್ತಿದೆ.

“ದೀಪಾವಳಿಯನ್ನು ಇತರರು ಪಟಾಕಿ ಮೂಲಕ ಸಂತೋಷದಿಂದ ಆಚರಿಸುತ್ತಿದ್ದರೆ, ನಾವು ನಮ್ಮದೇ ರೀತಿಯ ಶಬ್ದವನ್ನು ಮಾಡುತ್ತಿದ್ದೇವೆ. ಇದು ನಮ್ಮ ಹೋರಾಟಗಳನ್ನು ಪ್ರತಿಧ್ವನಿಸುವ ಪ್ರತಿಭಟನೆಯಾಗಿದೆ” ಎಂದು ಮಹಾರಾಷ್ಟ್ರದ GIPSWU ನಾಯಕಿ ನಿಶಾ ಪನ್ವಾರ್ ಹೇಳಿದ್ದಾರೆ.

ಇದನ್ನೂ ಓದಿ: ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...