Homeಕರ್ನಾಟಕಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

ಆರೋಪಿಯ ಜೀವಕ್ಕೆ ಅಪಾಯವಿದೆ ಎನ್ನುವ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತದೆ. ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್​ಬುಕ್​​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿ ನವೀನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ನವೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಆರೋಪಿಯ ಜೀವಕ್ಕೆ ಅಪಾಯವಿದೆ ಎನ್ನುವ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತದೆ. ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟ ಬಿ.ಎ.ಪಾಟೀಲ್  ನ್ಯಾಯಪೀಠವು ಆರೋಪಿ ನವೀನ್‌ಗೆ ಜಾಮೀನು ಮಂಜೂರು ಮಾಡಿತು.

ಅವಹೇಳನಕಾರಿ ಪೋಸ್ಟ್​ ಫಾರ್ವರ್ಡ್ ಮಾಡಿ ಡಿಲೀಟ್ ಮಾಡಿದ್ದಾಗಿ ಆರೋಪಿ ನವೀನ್ ಒಪ್ಪಿಕೊಂಡಿದ್ದ ಎನ್ನಲಾಗಿದೆ. ನವೀನ್ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಳಿಯ. ರಾಜಕೀಯವಾಗಿ ನವೀನ್‌ನ ಟಾರ್ಗೇಟ್ ಮಾಡಲಾಗಿದೆ ಎಂದು ನವೀನ್ ಪರ ವಕೀಲರು ಹೈಕೋರ್ಟ್​​ನಲ್ಲಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ಕೆಜೆ ಹಳ್ಳಿ-ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೇ ಕಾರಣ: ಕುಮಾರಸ್ವಾಮಿ ಆರೋಪ

ಆರೋಪಿ ನವೀನ್ ವಿರುದ್ಧ ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲೂ ಪ್ರಕರಣ ದಾಖಲಾಗಿತ್ತು. ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಕಾರಣಕ್ಕೆ ಈ ಕಾಯ್ದೆಗಳ ಅಡಿ ಪ್ರಕರಣ ದಾಖಲಾಗಿತ್ತು.

ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್‌ನಲ್ಲಿ 4 ಜನ ಯುವಕರು ಬಲಿಯಾಗಿದ್ದರು. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿದೆ.

ಆಗಸ್ಟ್ 11ರಂದು ನಡೆದಿದ್ದ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ವಹಿಸಿಕೊಂಡಿದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಹಾಗೂ ಕರ್ನಾಟಕ ಆಸ್ತಿಪಾಸ್ತಿ ನಾಶ ಮತ್ತು ನಷ್ಟ ತಡೆ ಕಾಯ್ದೆಯ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಆಡಳಿತ ಮತ್ತು ವಿರೋಧ ಪಕ್ಷಗಳು ಇಂದಿಗೂ ಆರೋಪ-ಪ್ರತ್ಯಾರೋಪಗಳಲ್ಲೇ ಮುಳುಗಿವೆ.

ಕೆಜೆ ಹಳ್ಳಿ-ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೆ ಕಾರಣ. ಅವರ ಪಕ್ಷದ ಶಾಸಕರ ಮನೆಗೆ ಬೆಂಕಿ ಇಟ್ಟು, ಜೀವಹಾನಿ ಮಾಡಲು ಹೊರಟ ಕಾಂಗ್ರೆಸ್ ನಾಯಕರು, ಬೆಂಗಳೂರನ್ನು ರಕ್ಷಣೆ ಮಾಡುತ್ತೇವೆ ಎಂದು ಯಾವ ಮುಖವಿಟ್ಟುಕೊಂಡು ಮತ ಕೇಳಲು ಹೋಗುತ್ತಾರೆ ಎಂದು ಹೆಚ್‌‌.ಡಿ. ಕುಮಾರಸ್ವಾಮಿ ಹೇಳಿದ್ದರು.


ಇದನ್ನೂ ಓದಿ: ಎನ್​ಐಎ ತನಿಖೆಗೆ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...