Homeಕರ್ನಾಟಕಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ: ಶಾಂತಿ ಕಾಪಾಡಲು ಪಾಪ್ಯುಲರ್ ಫ್ರಂಟ್ ಮನವಿ

ಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ: ಶಾಂತಿ ಕಾಪಾಡಲು ಪಾಪ್ಯುಲರ್ ಫ್ರಂಟ್ ಮನವಿ

- Advertisement -
- Advertisement -

ಶಾಸಕರ ಸಂಬಂಧಿಯೋರ್ವ ಪ್ರವಾದಿ ನಿಂದನೆಯ ಪೋಸ್ಟ್ ಹಾಕಿದ ಕಾರಣದಿಂದಾಗಿ ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಜನತೆ ಶಾಂತಿ ಕಾಪಾಡಿ ಸಹಕರಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಮನವಿ ಮಾಡಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯವು ಸಂವಿಧಾನ ವಿರೋಧಿಯಾಗಿದೆ. ಪರಸ್ಪರರ ಧಾರ್ಮಿಕ ನಂಬಿಕೆಗಳನ್ನು ಗೌರವಿಸುವುದು ಇಲ್ಲಿನ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿರುವುದು ಅಕ್ಷಮ್ಯ ಅಪರಾಧವಾಗಿದೆ‌.

ಇಂತಹ ಕೃತ್ಯಗಳ ಕುರಿತು ಜನರು ಭಾವೋದ್ವೇಗಕ್ಕೆ ಒಳಗಾಗದೆ ಸಂಯಮವನ್ನು ವಹಿಸಬೇಕು, ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಲು ಮುಂದಾಗಬೇಕು. ಕಾನೂನು ಕೈಗೆತ್ತಿಕೊಳ್ಳದೇ ಕಾನೂನಾತ್ಮಕವಾಗಿ ಪ್ರತಿಭಟನೆ ನಡೆಸಬೇಕು. ಹಾಗೆಯೇ ಸಾರ್ವಜನಿಕರ ಆಸ್ತಿಪಾಸ್ತಿಗೆ ಯಾವುದೇ ಹಾನಿ ಉಂಟಾಗದಂತೆ ಎಚ್ಚರವಹಿಸಬೇಕು. ಅದೇ ರೀತಿ ಪೊಲೀಸ್ ಇಲಾಖೆಯು ಪ್ರಚೋದನಾಕಾರಿ ಪೋಸ್ಟ್ ಹಾಕಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ ಅವಹೇಳನ: ಕಠಿಣ ಕ್ರಮಕ್ಕೆ ದಲಿತ ಸೇನೆ ಮಹಿಳಾ ಘಟಕ ಆಗ್ರಹ: ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಕೆ 

ಬೆಂಗಳೂರು: ಫೇಸ್‌ಬುಕ್‌ನಲ್ಲಿ 15ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಸೃಷ್ಟಿಸಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುತ್ತಾ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ದ್ವೇಷ ಮತ್ತು ಗಲಭೆ ಹುಟ್ಟುಹಾಕುವ ಪ್ರಯತ್ನ...

ರಾಜ್ಯಪಾಲರ ನಡೆ ಸಂಪೂರ್ಣ ಅಸಂವಿಧಾನಿಕ; ಕರ್ನಾಟಕಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ: ಬಿ.ಕೆ. ಹರಿಪ್ರಸಾದ್

'ಜಂಟಿ ಸದನಳನ್ನು ಉದ್ದೇಶಿಸಿ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಸಂಪೂರ್ಣ ಅಸಂವಿಧಾನಿಕ; ಅವರು ಕರ್ನಾಟಕದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ' ಎಂದು ವಿಧಾನಪರಿಷತ್ ಸದಸ್ಯ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ...

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...