Homeಕರ್ನಾಟಕಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ...

ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ನಡೆದ ಗಲಭೆ ಸಂಬಂಧ ಪೊಲೀಸರು ಅವಹೇಳನಕಾರಿ ಪೋಸ್ಟ್ ಮಾಡಿದನೆನ್ನಲಾದ ಆರೋಪಿ ನವೀನ್ ಸೇರಿದಂತೆ ಇದುವರೆಗೂ 110 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಸಿಸಿಬೆ ಜಂಟಿ ಕಮೀಷನರ್‍ ಸಂದೀಪ್ ಪಾಟೀಲ ಹೇಳಿದ್ದಾರೆ.

ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಿದ್ದು, ಅವರನ್ನು ಬಂಧಿಸುವಂತೆ ಜನರು ಶಾಸಕರ ನಿವಾಸದ ಮುಂದೆ ಹಾಗೂ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆದಿದ್ದವು. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಗಲಭೆ ಪ್ರಾರಂಭವಾಗಿತ್ತು.

ಗಲಭೆಯಲ್ಲಿ ನಡೆದ ಪೊಲೀಸರ ಗುಂಡೇಟಿನಿಂದ ಇದುವರೆಗು ಮೂವರು ಮೃತಪಟ್ಟಿದ್ದು ಹಲವಾರು ಜನರಿಗೆ ಗಾಯಗಳಾಗಿದೆ. ಹಲವು ಪೊಲೀಸರಿಗೆ ಗಾಯಗಳಾಗಿದ್ದು, ಗಲಭೆ ಒಮ್ಮೆಲೆ ಶುರುವಾಯಿತು, ಪೂರ್ವನಿರ್ಧರಿತವೆ ಎಂದು ಇನ್ನು ತನಿಖೆ ಮಾಡಬೇಕಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್‍ ಕಮಲ್ ಪಂತ್ ಹೇಳಿದ್ದಾರೆ.

ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ನವೀನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಗಲಭೆಕೋರರನ್ನು ಕೂಡಾ ಬಂಧಿಸಲಾಗಿದೆ. ನಗರದಲ್ಲಿ ಶಾಂತಿ ಕಾಪಾಡಲು ನಾಗರೀಕರು ಪೊಲೀಸರೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ “ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ.

ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಈ ಸಂದರ್ಭ ಶಾಸಕ ಝಮೀರ್‍ ಅಹ್ಮದ್, ಯಾವುದೇ ಸಮಸ್ಯೆಗೂ ಗಲಭೆ ಪರಿಹಾರವಲ್ಲ. ಘಟನೆ ನೂರಕ್ಕೆ ನೂರರಷ್ಟು ಹತೋಟಿಗೆ ಬಂದಿದೆ.  ಕೋಮು ಪ್ರಚೋದಕ ಪೋಸ್ಟ್ ಹಾಕಿದವನಿಗೆ ಶಿಕ್ಷೆಯಾಗಬೇಕು. ದಯಮಾಡಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಶಾಸಕ ರಿಝ್ವಾನ್ ಅರ್ಶದ್ ಮಾತನಾಡಿ, ಇದು ದುಃಖದ ಸಂಗತಿ. ಈ ರೀತಿಯ ಪರಿಸ್ಥಿತಿ ಆಗಬಾರದಿತ್ತು. ಇದನ್ನು ಯಾರೂ ಸಮರ್ಥನೆ ಮಾಡುತ್ತಿಲ್ಲ. ಇದು ಬಹಳ ನೋವಿನ ಸಂಗತಿ. ಮುಂದೆ ಎಂದಿಗೂ ಈ ರೀತಿಯ ಘಟನೆ ಆಗಬಾರದು ಎಂದು ತಿಳಿಸಿದ್ದಾರೆ.

ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಮಾಡುವುದು ಕಾನೂನು ಬಾಹಿರ ಕೃತ್ಯ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದರು. ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ರವಾನೆ ಮಾಡಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇನೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಾರೆ. ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...