Homeಕರ್ನಾಟಕದ.ಕ. | ಅಡಿಕೆ ಕಳ್ಳತನದ ಆರೋಪ, ಬಾಲಕನಿಗೆ ಮಾರಣಾಂತಿಕ ಹಲ್ಲೆ- ಆರೋಪಿಗಳಿಗೆ ಜಾಮೀನು

ದ.ಕ. | ಅಡಿಕೆ ಕಳ್ಳತನದ ಆರೋಪ, ಬಾಲಕನಿಗೆ ಮಾರಣಾಂತಿಕ ಹಲ್ಲೆ- ಆರೋಪಿಗಳಿಗೆ ಜಾಮೀನು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಡತಲ್ ಕಜೆ ಎಂಬಲ್ಲಿ, ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ 16 ವರ್ಷದ ಬಾಲಕನನ್ನು ಯುವಕರ ಗುಂಪೊಂದು ಕ್ರೂರವಾಗಿ ಥಳಿಸಿತ್ತು. ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ನಂತರ 10 ಜನ ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಇದೀಗ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ ಎಂದು ಸುಬ್ರಹ್ಮಣ್ಯ ಠಾಣೆಯ ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಘಟನೆಯು ಅಕ್ಟೋಬರ್‌ 27ರಂದು ಸಂಜೆ 7 ಗಂಟೆಗೆ ನಡೆದಿತ್ತು. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ನಂತರ ಈ ಬಗ್ಗೆ ನವೆಂಬರ್‌ 2 ರಂದು ಗುತ್ತಿಗಾರು ಗ್ರಾಮದ ಹತ್ತು ಜನರ ಮೇಲೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಘಟನೆಯ ವಿವರ

ಗುತ್ತಿಗಾರು ಗ್ರಾಮದ ಕುವ್ವೆಕೋಡಿ ಮನೆ ನಿವಾಸಿ ಸೋಮಪ್ಪ ಗೌಡ ಎಂಬವರ ಮಗ 16 ವರ್ಷದ ವೇಣುಗೋಪಾಲ ಪಿ.ಎಸ್. ತಮ್ಮ ಮನೆಯವರು ಲೀಸ್‌ಗೆ ಪಡೆದುಕೊಂಡಿದ್ದ ಅಡಿಕೆ ತೋಟದಿಂದ 20 ರಿಂದ 25 ಕೆಜಿ ಹಣ್ಣು ಅಡಿಕೆಯನ್ನು ಹೊತ್ತು ತರುತ್ತಿದ್ದರು. ಈ ವೇಳೆ ಅವರಿಗೆ ಪರಿಚಯದವರೇ ಆಗಿರುವ ಯುವಕರ ಗುಂಪೊಂದು ಅಡ್ಡಗಟ್ಟಿ “ಅಡಿಕೆಯನ್ನು ಈಶ್ವರ ಎಂಬವರ ತೋಟದಿಂದ ಕದ್ದು ತಂದಿದ್ದಾರೆ” ಎಂದು ಆರೋಪಿಸಿದ್ದಾರೆ. ಈ ವೇಳೆ ಬಾಲಕನೂ ತಾನು ತಮ್ಮದೇ ತೋಟದಿಂದ ಅಡಿಕೆ ತಂದಿದ್ದೇನೆ ಎಂದು ಕೇಳಿಕೊಂಡರೂ, ಅವರಿಗೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ.

ವೈರಲ್‌ ವಿಡಿಯೊದಲ್ಲಿ ಬಾಲಕನಿಗೆ ಗುಂಪು ಹಲ್ಲೆ ನಡೆಸುತ್ತಿರುವುದು ಕಾಣಬಹದುದಾಗಿದೆ.

ಜೊತೆಗೆ ಘಟನೆಯ ಬಗ್ಗೆ ಪೊಲೀಸರಿಗೆ ಏನಾದರು ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಗುಂಪು ಬಾಲಕನಿಗೆ ಜೀವ ಬೆದರಿಕೆ ಒಡ್ಡಿತ್ತು. ಆರೋಪಿಗಳು ಬಾಲಕನಿಗೆ ಪೊಲೀಸ್ ದೂರು ನೀಡದಂತೆ ಬೆದರಿಕೆ ಹಾಕಿದ್ದರಿಂದ, ಅವರು ಬೆದರಿ ದೂರು ಕೂಡಾ ನೀಡಿರಲಿಲ್ಲ.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ಇದರ ನಂತರ ಘಟನೆಯ ವಿಡಿಯೊ ವೈರಲ್‌ ಆಗಿದ್ದು ಪೊಲೀಸರು ಗುತ್ತಿಗಾರು ಗ್ರಾಮದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ಎಂ.ಪಿ.ದಿನೇಶ್, ಈಶ್ವರ, ಚಂದ್ರ ಮತ್ತು ಚೇತನ್ ಸೇರಿ ಒಟ್ಟು ಹತ್ತು ಜನರ ಮೇಲೆ IPC ಸೆಕ್ಷನ್‌ 143, 341,323,324, 506 r/w 149 ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ನಾಪತ್ತೆಯಾಗಿದ್ದರು.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಪೊಲೀಸರೊಬ್ಬರು, ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಮುಖ್ಯಮಂತ್ರಿಯವರು ಗೂಂಡಾಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ ನಂತರ ಕರಾವಳಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಹೆಚ್ಚಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿ ಚಿಕ್ಕ ಬಾಲಕ ನನ್ನ ಹೊಡೆದಿರುವುದು ಕಂಡನೀಯ ಆರೋಪಿಗೆ ಶಿಕ್ಷೆ ಆಗಲೇ ಬೇಕು ,ಮಕ್ಕಳ ರಕ್ಷಣಾ ಘಟಕ ಕೂಡಲೇ ಮಗುವಿಗೆ ನೆರವು ನೀಡಲೇಬೇಕು….

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...