Homeಕರ್ನಾಟಕಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

- Advertisement -
- Advertisement -

ರಾಜ್ಯ ಸರ್ಕಾರ ಲಾಕ್‌ಡೌನ್ ಎಂಬ ಪದ ಬಳಸದೇ ಎಲ್ಲವನ್ನು ಬಂದ್ ಮಾಡಿದ್ದಾರೆ. ಮುಖ್ಯಮಂತ್ರಿಗಳು ಏನು ಬೇಕಾದರೂ ಕ್ರಮ ಕೈಗೊಳ್ಳಲಿ, ನಮ್ಮ ಅಭ್ಯಂತರ ಇಲ್ಲ. ಆದರೆ ಕೂಡಲೇ ಪರಿಹಾರ ಪ್ಯಾಕೇಜ್ ಘೋಷಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ನಾಳೆಯಿಂದ ಮೇ 10ರವರೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, “ಸರ್ಕಾರ ರಾಜ್ಯದ ಹಿತವನ್ನ ಕಾಪಾಡುವಲ್ಲಿ ವಿಫಲವಾಗಿದೆ, ಅವರು ಒಪ್ಪಿಕೊಳ್ಳುತ್ತಿಲ್ಲ. ಲಾಕ್‌ಡೌನ್ ಎಂಬ ಪದ ಬಳಸದೇ ಎಲ್ಲವನ್ನು ಬಂದ್ ಮಾಡಿದ್ದಾರೆ. ಈ ನಿರ್ಬಂಧದಿಂದ ತೊಂದರೆ ಎದುರಿಸುವವರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿ. ಇಂದು ಸಂಜೆಯೊಳಗೆ ಪರಿಹಾರ ಪ್ಯಾಕೇಜ್ ನೀಡಲಿ” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಆರೋಗ್ಯ ಕಾಪಾಡಲು ರಾಜ್ಯ ಸರ್ಕಾರ ಏನು ಬೇಕಾದರೂ ಮಾಡಲಿ. ಆದರೆ, ಬಡವರು, ಕೆಲಸ ಇಲ್ಲದವರ ಖಾತೆಗೆ ನೇರವಾಗಿ ಸರ್ಕಾರ ಹಣ ಹಾಕಿಲಿ. ಉದ್ಯೋಗ ಕಳೆದುಕೊಂಡವರಿಗೆ ಪ್ಯಾಕೇಜ್ ಘೋಷಣೆ ಮಾಡಲಿ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ಒಂದು ವರ್ಷದಿಂದ ವ್ಯಾಪಾರ-ವಹಿವಾಟು ನಿಂತಿದೆ. ಮುಂದಿನ ಒಂದು ವರ್ಷ ಈಗಾಗಿರುವ ಹೊಡೆತದಿಂದ ಚೇತರಿಕೆ ಆಗುವುದಿಲ್ಲ. ಹೀಗಾಗಿ ಸರ್ಕಾರ ಎಲ್ಲ 2 ವರ್ಷಗಳ ಕಾಲ ಕಮರ್ಷಿಯಲ್ ಪ್ರಾಪರ್ಟಿ ಟ್ಯಾಕ್ಸ್ ಮನ್ನಾ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್‌ ಬೇಡಿಕೆ ಇಟ್ಟಿದ್ದಾರೆ. ಜೊತೆಗೆ ಎಲ್ಲ ಸಾಲಗಳ ಅವಧಿ 2 ವರ್ಷ ಮುಂದೂಡಬೇಕು ಎಂದಿದ್ದಾರೆ.

ಬರಗಾಲ ಬಂದಾಗೆಲ್ಲ ರೈತರಿಗೆ ಆಸ್ತಿ ತೆರಿಗೆ ಮನ್ನಾ ಮಾಡಿದ್ದೇವೆ. ಅದೇ ರೀತಿ ಇವರಿಗೆ ಆಸ್ತಿ ತೆರಿಗೆ ಮನ್ನಾ ಮಾಡಿ. ಈ ಕೊರೊನಾ ಸೋಂಕನ್ನು ಇವರು ಹರಡಿಲ್ಲ, ಸರ್ಕಾರ ಹರಡಿದೆ. ಸರ್ಕಾರ ಚಪ್ಪಾಳೆ ಹೊಡಿ ಅಂದಾಗ ಹೊಡೆದಿದ್ದೇವೆ, ದೀಪ ಹಚ್ಚಿ ಅಂದಾಗ ದೀಪ ಹಚ್ಚಿದ್ದೇವೆ. ಎಲ್ಲ ಮಾಡಿದ್ದೇವೆ ಎಂದು ಸರ್ಕಾರವನ್ನು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಒಂದು ಮಿತಿಯವರೆಗೂ ಸಾಲ ಮನ್ನಾ ಮಾಡಬೇಕು. ರಾಜ್ಯ ಸರ್ಕಾರಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಆದರೆ, ಸಭೆ ಕರೆದು 10-20 ಲಕ್ಷದವರೆಗಿನ ಸಾಲದವರಿಗೆ ಬಡ್ಡಿ ಕಟ್ಟಿಕೊಡುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವಾಹನ ಸಾಲ ಪಡೆದವರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದು, ಎಲ್ಲ ವಾಹನ ಮಾಲೀಕರಿಗೆ ರಕ್ಷಣೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಒತ್ತಾಯಿಸಿದ್ದಾರೆ.

“ವರ್ತಕರ ಧ್ವನಿಯಾಗಿ ನಾನು ಕೆಲಸ ಮಾಡುತ್ತಿದ್ದು, ಇವರ ನೇತೃತ್ವದಲ್ಲೇ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ. ನೀವು ಇವರ ನೆರವಿಗೆ ಬಾರದಿದ್ದರೆ ನಾವು ಇವರ ಪರವಾಗಿ ಬೀದಿಗಿಳಿದು ಹೋರಾಡುತ್ತೇವೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು ಬಿರುಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...