Homeಕರ್ನಾಟಕಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

- Advertisement -
- Advertisement -

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ಶನಿವಾರ (ಏ.11) ದಿಢೀರ್‌ ರಾಜೀನಾಮೆ ನೀಡಿದ್ದರು. ಭಾನುವಾರ (ಏ.12) ಡಿ.ಕೆ ಶಿವಕುಮಾರ್ ಅವರು ರಾಜೀನಾಮೆ ಅಂಗೀಕರಿಸಿ ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ವರದಿ ಹೇಳಿದೆ.

“ಶೀಘ್ರ ನೂತನ ಸಮಿತಿ ರಚನೆಗೆ ಕ್ರಮ ವಹಿಸಲಾಗಿದೆ” ಎಂದು ಶಿವಕುಮಾರ್ ಅವರು ಹೇಳಿದ್ದಾರೆ. ಅಬ್ದುಲ್ ಜಬ್ಬಾರ್‌ ಅವರು ಕೇವಲ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ವಿಧಾನಪರಿಷತ್ ಸ್ಥಾನ ಮುಂದುವರೆಯಲಿದೆ ಎಂದು ವರದಿ ತಿಳಿಸಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ನಾಯಕರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್‌ ಹೈಕಮಾಂಡ್ ಮೇಲೆ ಒತ್ತಡ ಇತ್ತು. ಆದರೆ, ಅದನ್ನು ಕಡೆಗಣಿಸಿ ಹೈಕಮಾಂಡ್ ಈ ಕ್ಷೇತ್ರದ ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಅವರ ಮಗ ಸಮರ್ಥ್ ಶಾಮನೂರಿಗೆ ಟಿಕೆಟ್ ನೀಡಿದೆ.

ಹೈಕಮಾಂಡ್‌ನ ಈ ನಿರ್ಧಾರದ ಪಕ್ಷದ ಅಲ್ಪಸಂಖ್ಯಾತ ನಾಯಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೂ, ಅಲ್ಪಸಂಖ್ಯಾತ ನಾಯಕರಲ್ಲಿ ಹೈಕಮಾಂಡ್ ನಿರ್ಧಾರದ ಬಗ್ಗೆ ಪರ-ವಿರುದ್ದ ನಿಲುವಿತ್ತು. ಸಚಿವ ರಹೀಂ ಖಾನ್, ಸಲೀಂ ಅಹ್ಮದ್, ರಿಝ್ವಾನ್ ಅರ್ಶದ್, ಯಾಸಿರ್ ಪಠಾಟ್, ತನ್ವೀರ್ ಸೇಠ್ ಹೈಕಮಾಂಡ್ ನಿರ್ಧಾರರ ಪರ ಇದ್ದರೆ, ಎಂಎಲ್‌ಸಿ ಅಬ್ದುಲ್ ಜಬ್ಬಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ಝಮೀರ್ ಅಹ್ಮದ್ ವಿರುದ್ದ ಇದ್ದರು ಎನ್ನಲಾಗಿದೆ.

ಆದರೆ, ಆರಂಭದಲ್ಲಿ ಸಮರ್ಥ್ ಪರ ಪ್ರಚಾರದಿಂದ ದೂರ ಇದ್ದ ಝಮೀರ್ ಅಹ್ಮದ್, ಕೊನೆ ಕ್ಷಣದಲ್ಲಿ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ ಮನೆಗೆ ಭೇಟಿ ನೀಡುವ ಮೂಲಕ ಎಲ್ಲವೂ ಸರಿ ಇದೆ ಎಂದು ತೋರ್ಪಡಿಸುವ ಪ್ರಯತ್ನ ಮಾಡಿದರು. ಆದರೆ, ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ದೂರವೇ ಉಳಿದಿದ್ದರು.

ಈ ನಡುವೆ ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರು ಬಂಡಾಯವೆದ್ದ ಸಾದಿಕ್ ಪೈಲ್ವಾನ್‌ನಂತಹ ಸ್ಥಳೀಯ ನಾಯಕರ ಮನವೊಲಿಸುವ ಕಾರ್ಯ ಕೂಡ ಮಾಡಿದ್ದರು.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...