Homeಕರ್ನಾಟಕದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

- Advertisement -
- Advertisement -

‘ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ’ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

‘ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ’ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ವ್ಯಂಗ್ಯವಾಡಿದ್ದಾರೆ. ‘ಹೌದು, ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ’ ಎಂದರು.

ಇನ್ನು ಕಾಂಗ್ರೆಸ್ ನಾಯಕರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ನಾವು ಈಗಲೇ ನಿಮ್ಹಾನ್ಸ್ ಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತೇವೆ’ ಎಂದು ಬಿಜೆಪಿಯವರಿಗೆ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ‘ನೇಣುಗಂಬ ಏರಬೇಕಾಗಿದ್ದ ಭಯೋತ್ಪಾದಕಿಯನ್ನು ಸಂಸದೆ ಮಾಡಿದ ಬಿಜೆಪಿಯದ್ದು ತಾಲಿಬಾನಿಯದ್ದೇ ರಕ್ತ’- ಕಾಂಗ್ರೆಸ್

‘ವಿನಯ್ ಕುಲಕರ್ಣಿ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವರಾಗಿದ್ದು, ಅವರು ಕಾಂಗ್ರೆಸ್‌ನ ಭಾಗ. ವಿನಯ್ ಕುಲಕರ್ಣಿ ಅವರ ಮೇಲೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವುದು ಸಂತೋಷ. ಆದರೆ, ಇದೇ ರೀತಿ ಜನಾಶೀರ್ವಾದ ಯಾತ್ರೆ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಕೇಂದ್ರ ಸಚಿವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ’ ಎಂದು ಪ್ರಶ್ನಿಸಿದ್ದಾರೆ.

’ಬಿಜೆಪಿ ಕಾರ್ಯಕರ್ತರ ಸಭೆ ಮಾಡಿದಾಗ ಯಾಕೆ ಪ್ರಕರಣ ದಾಖಲಿಸಿಲ್ಲ. ಸರ್ಕಾರ ತಮಗೆ ಬೇಕಾದ ರೀತಿಯಲ್ಲಿ ಕಾನೂನು ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

‘ಇಡಿ ದಾಳಿ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಅವರು ಸ್ಪಷ್ಟನೆ ನೀಡಿದ್ದಾರೆ. ನಿರಪರಾಧಿಗಳಿಗೆ, ರಾಜಕೀಯ ದ್ವೇಷದ ದಾಳಿಗೆ ಒಳಗಾದವರಿಗೆ ನಾವು ಸ್ಪಂದಿಸಬೇಕು. ಅದನ್ನು ಮಾಡುತ್ತಿದ್ದೇವೆ’ ಎಂದಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...