Homeಕರ್ನಾಟಕಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ: ನಟಿ ರಮ್ಯಾ ಆರೋಪ

ಡಿ.ಕೆ. ಶಿವಕುಮಾರ್‌‌ ಆದೇಶದಂತೆ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ರಮ್ಯ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆನ್ನಿಗೆ ಚೂರಿ ಹಾಕಿದ ಅವಕಾಶವಾದಿಯಾಗಿದ್ದು, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಮಾಜಿ ಸಂಸದೆ, ನಟಿ ರಮ್ಯಾ ಗುರುವಾರ ಆರೋಪಿಸಿದ್ದಾರೆ. ಡಿ.ಕೆ. ಶಿವಕುಮಾರ್‌‌‌ ಅವರ ಆದೇಶದಂತೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಕಾಂಗ್ರೆಸ್ ಐಟಿ ಸೆಲ್‌ ಕಡೆಯಿಂದ ರಚಿತವಾಗಿದೆ ಎಂದು ಹೇಳಿ ಹಲವು ಸಂದೇಶಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದಿಂದ ರಕ್ಷಣೆ ಕೋರಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕಾಂಗ್ರೆಸ್‌ನ ಪ್ರಚಾರ ಸಮಿತಿ ನಾಯಕ ಎಂ.ಬಿ. ಪಾಟೀಲ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಡಿ.ಕೆ. ಶಿವಕುಮಾರ್‌ ಅವರ ಆರೋಪವನ್ನು ನಿರಾಕರಿಸಿರುವ ಎಂ.ಬಿ. ಪಾಟೀಲ್‌, “ಅಶ್ವಥ್‌ ನಾರಾಯಣ ಅವರು ನನ್ನನ್ನು ಭೇಟಿ ಮಾಡಿಲ್ಲ. ಒಂದು ವೇಳೆ ಅವರು ಭೇಟಿ ಮಾಡಿದ್ದರೂ ತಪ್ಪಿಲ್ಲ. ಅದು ನನ್ನ ಖಾಸಗಿ ವಿಚಾರ, ಅದರ ಬಗ್ಗೆ ಮಾತನಾಡಿರುವುದು ತಪ್ಪು, ಅದು ಅವರ ಸಣ್ಣತನ. ರಾಜಕೀಯ ವಿಚಾರ ಬಂದಾಗ ನಾನು ಪಕ್ಷದ ಜೊತೆಗೆ ಇರುತ್ತೇನೆ. ಶಿವಕುಮಾರ್‌ ಅವರ ಆರೋಪವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವೇದಿಕೆಗೆ ವಿಚಾರವನ್ನು ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಯ ಮೇಲೆಯೇ ಡಿಕೆಶಿ ಇಂತಹ ಹೇಳಿಕೆ ನೀಡಬಾರದಿತ್ತು ಎಂದು ಕೆಲವು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಪತ್ರಕರ್ತರು ಹೇಳಿದ್ದಾರೆ. ಅದರಂತೆಯೆ ಶಿವಕುಮಾರ್‌ ಅವರ ಹೇಳಿಕೆಯನ್ನು ಮಾಜಿ ಸಂಸದೆ ರಮ್ಯಾ ವಿರೋಧಿಸಿದ್ದರು.

ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ರಮ್ಯಾ ಅವರು, “ಬೇರೆ ಬೇರೆ ಪಕ್ಷದಲ್ಲಿ ಇರುವವರು ಪರಸ್ಪರ ಭೇಟಿಯಾಗುತ್ತಾರೆ, ಸಮಾರಂಭಗಳಿಗೆ ಹೋಗುತ್ತಾರೆ. ಅಷ್ಟೆ ಅಲ್ಲದೆ ಬೇರೆ ಪಕ್ಷದಲ್ಲಿ ಇರುವ ಕುಟುಂಬಗಳ ನಡುವೆ ಮದುವೆಯೂ ಆಗುತ್ತಾರೆ. ಡಿಕೆ ಶಿವಕುಮಾರ್ ಅವರು ಕಟ್ಟಾ ಕಾಂಗ್ರೆಸ್ಸಿಗ ಎಂ.ಬಿ. ಪಾಟೀಲ್ ಬಗ್ಗೆ ಹೀಗೆ ಹೇಳಿದ್ದು ನನಗೆ ಆಶ್ಚರ್ಯವಾಗಿದೆ. ಒಂದೇ ಪಕ್ಷವಾಗಿ ಎಲ್ಲರೂ ಒಟ್ಟಿಗೆ ಚುನಾವಣೆ ಎದುರಿಸಬೇಕಲ್ಲವೇ?” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ರಮ್ಯಾ ಅವರ ಟ್ವೀಟ್‌ಗೆ ಪ್ರತಿಯಾಗಿ ಕಾಂಗ್ರೆಸ್‌ನ ಕೆಲವು ನಾಯಕರು ಮತ್ತು ಕಾರ್ಯಕರ್ತರು ಅವರ ಮೇಲೆ ದಾಳಿ ಮಾಡಿ, ಅವರನ್ನು ಟ್ರೋಲ್ ಮಾಡಿತ್ತು. ಈ ರೀತಿ ದಾಳಿ ಮಾಡಲು ಸ್ವತಃ ರಾಜ್ಯ ಕಾಂಗ್ರೆಸ್‌ ‘ಕಚೇರಿ’ಯೆ ಕೇಳಿಕೊಂಡಿದೆ ಎಂದು ರಮ್ಯ ಆರೋಪಿಸಿದ್ದಾರೆ. ಜೊತೆಗೆ ‘ಕಚೇರಿ’ ಎಂದರೆ, ‘ಡಿ.ಕೆ. ಶಿವಕುಮಾರ್‌‌ ನಾಯಕತ್ವದ ರಾಜ್ಯ ಕಾಂಗ್ರೆಸ್‌’ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ದ ಕಾಂಗ್ರೆಸ್‌ ಐಟಿ ಸೆಲ್ ರಚಿಸಿದೆ ಎನ್ನಲಾಗಿರುವ ಕೆಲವು ಸಂದೇಶಗಳನ್ನು ಸ್ಕ್ರೀನ್‌ ಶಾರ್ಟ್‌ಗಳನ್ನು ರಮ್ಯಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಡಿಕೆಶಿ ಆಫೀಸ್‌ ಇಂದ ಬಂದಿದೆ ಎನ್ನಲಾಗಿರುವ ರಮ್ಯಾ ಹಂಚಿಕೊಂಡಿರುವ ಸ್ಕ್ರೀನ್‌ಶಾರ್ಟ್

ಕಾಂಗ್ರೆಸ್‌ ಪಕ್ಷದಲ್ಲಿ ಮೇಲೇರಲು ಡಿ.ಕೆ. ಶಿವಕುಮಾರ್‌ ಅವರು ಅವಕಾಶ ನೀಡಿದ್ದಾರೆ ಎಂಬ, ಸಂದೇಶವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ರಮ್ಯಾ, “ನನಗೆ ಅವಕಾಶಗಳನ್ನು ನೀಡಿದವರು ಮತ್ತು ನನ್ನ ಬೆಂಬಲಕ್ಕೆ ನಿಂತವರು ಯಾರಾದರೂ ಇದ್ದರೆ ಅದು ರಾಹುಲ್‌ಗಾಂಧಿ ಮಾತ್ರ. ಉಳಿದಂತೆ ನನಗೆ ಅವಕಾಶಗಳನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವವರು ಅವಕಾಶವಾದಿ ಆಗಿದ್ದಾರೆ. ಈ ಅವಕಾಶವಾದಿ ನನ್ನ ಬೆನ್ನಿಗೆ ಚೂರಿ ಹಾಕಿ, ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ನೀವು ಟಿವಿಯಲ್ಲಿ ನೋಡುವ ಎಲ್ಲವೂ ಅವರ ಮೋಸಗೊಳಿಸುವ ಮನಸ್ಸನ್ನು ಮರೆಮಾಚುವ ಪ್ರಹಸನವಾಗಿದೆ” ಎಂದು ಅವರು ಡಿಕೆ ಶಿವಕುಮಾರ್‌ ಅವರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

“ನಾನು ಪಕ್ಷವನ್ನು ತ್ಯಜಿಸಿದ ನಂತರ, ‘ಕಾಂಗ್ರೆಸ್‌ಗೆ 8 ಕೋಟಿ ಕಾಂಗ್ರೆಸ್‌ಗೆ ವಂಚಿಸಿ ಓಡಿಹೋದಳು’ ಎಂಬ ಸುದ್ದಿ ಮುಖ್ಯವಾಗಿ ಕನ್ನಡ ವಾಹಿನಿಗಳಲ್ಲಿ ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ವಂಚನೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ “ನಾನು ಮೌನವಾಗಿರುವುದು ನನ್ನ ತಪ್ಪು. ದಯವಿಟ್ಟು ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ಈ ಬಗ್ಗೆ ಮಾಧ್ಯಮಗಳೊಂದಿಗೆ ಸ್ಪಷ್ಟಪಡಿಸಿ. ಇದು ನೀವು ನನಗಾಗಿ ಮಾಡಬಹುದಾದ ಕನಿಷ್ಠ ಕೆಲಸ. ನನಗೆ ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‌ನೊಂದಿಗೆ ಬದುಕಬೇಕಾಗಿಲ್ಲ” ಎಂದು ರಮ್ಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ಒಳ್ಳೇಯದು

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...