Homeಕರ್ನಾಟಕಜೈಲು ಅಧಿಕಾರಿಗಳಿಂದ ತಾರತಮ್ಯ ಡಿ.ಕೆ.ಶಿ ಆರೋಪ: ಅ.25 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಜೈಲು ಅಧಿಕಾರಿಗಳಿಂದ ತಾರತಮ್ಯ ಡಿ.ಕೆ.ಶಿ ಆರೋಪ: ಅ.25 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮತ್ತೆ 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ಡಿ.ಕೆ. ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಡಿ ವಿಶೇಷ ನ್ಯಾಯಾಲಯದ ಎದುರು ಹಾಜರು ಪಡಿಸಿದ ಸಂದರ್ಭದಲ್ಲಿ ಹೈಕೋರ್ಟ್ ಅ. 25 ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ಮಂಗಳವಾರ ದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನ್ಯಾಯಾಧಿಶ ಅಜೇಯ್ ಕುಮಾರ್ ಕುಹರ್ ಅವರು ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅ. 25 ತನಕ ವಿಸ್ತರಣೆ ಆದೇಶಿಸಿದರು. ಈ ಮೂಲಕ ಸತತ ಮೂರನೇ ಬಾರಿ ಡಿಕೆಶಿ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

ಜೈಲು ಅಧಿಕಾರಿಗಳಿಂದ ತಾರತಮ್ಯ ಎಸಗುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ ಆರೋಪಿಸಿದ್ದಾರೆ. ಜೈಲಿನಲ್ಲಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಬ್ಯಾರಕ್‍ನಿಂದ ಹೊರಗೆ ಬಂದ ವೇಳೆ ಕುಳಿತುಕೊಳ್ಳಲು ಕುರ್ಚಿಯನ್ನು ನೀಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಾಲಯವು ಕುರ್ಚಿ ನೀಡಬೇಕು ಎಂದು ಸುಚಿಸಿದೆ. ಮತ್ತು ಕುಟುಂಬಸ್ಥರಿಗೆ ಭೇಟಿಯಾಗಲು ಅವಕಾಶವನ್ನು ಕಲ್ಪಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...